![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Oct 13, 2022, 7:18 AM IST
ಮೇಷ: ಹೆಚ್ಚಿದ ಪರಿಶ್ರಮ. ಹಠ ಮಾಡದೇ ತಾಳ್ಮೆಯಿಂದ ಕಾರ್ಯ ಪ್ರವೃತ್ತರಾಗಿ. ದೂರದ ವ್ಯವಹಾರಗಳಿಂದ ಹೆಚ್ಚಿದ ವರಮಾನ. ಗುರು ಹಿರಿಯರ ಮೇಲಧಿಕಾರಿಗಳ ಮಾರ್ಗದರ್ಶನ ಪಾಲಿಸುವುದರಿಂದ ಯಶಸ್ಸು ಲಭಿಸೀತು. ಗೃಹದಲ್ಲಿ ನೆಮ್ಮದಿಯ ವಾತಾವರಣ.
ವೃಷಭ: ಉದ್ಯೋಗ ವ್ಯವಹಾರಗಳಲ್ಲಿ ಉದಾರತೆ ತೋರುವುದರಿಂದ ಜನಮನ್ನಣೆ. ನಿರೀಕ್ಷಿತ ಸ್ಥಾನ ಸುಖ. ಯಶಸ್ಸು ಲಭಿಸಿದ ಮನಃತೃಪ್ತಿ. ದಾಂಪತ್ಯದಲ್ಲಿ ಪ್ರೀತಿ ಅನುರಾಗ ವೃದ್ಧಿ. ದೀರ್ಘ ಪ್ರಯಾಣ ಸಂಭವ.
ಮಿಥುನ: ತಾಳ್ಮೆಯಿಂದ ವ್ಯವಹರಿಸಿ. ಆರೋಗ್ಯ ಗಮನಿಸಿ. ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ಮಾಡಿ. ದಂಪತಿಗಳು ಪಾಲುದಾರರು ಪರಸ್ಪರ ಪ್ರೋತ್ಸಾಹಿಸಿ ಕಾರ್ಯ ಸಾಧಿಸಿಕೊಳ್ಳಿ. ನಿರೀಕ್ಷಿತ ಧನಾಗಮ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ.
ಕರ್ಕ: ಉತ್ತಮ ಸ್ಥಾನಮಾನಕ್ಕಾಗಿ ಪ್ರಯತ್ನ. ಅಧ್ಯಯನದಲ್ಲಿ ತತ್ಪರತೆ. ಕುಟುಂಬಿಕರಲ್ಲಿ ತಾಳ್ಮೆ ಸಹನೆಯಿಂದ ವರ್ತಿಸಿ. ಪರಕಾರ್ಯದಲ್ಲಿ ಆಸಕ್ತಿ. ಹಣಕಾಸಿನ ವಿಚಾರದಲ್ಲಿ ಕೃಪಾರತೆ ಮಾಡದಿರಿ. ಸಾಂಸಾರಿಕ ಸುಖ ಮಧ್ಯಮ.
ಸಿಂಹ: ಹಿರಿಯರಿಂದ ಸಂತೋಷ. ಗೃಹ ವಾಹನಾದಿ ವಿಚಾರಗಳಲ್ಲಿ ಮುನ್ನಡೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಆತುರದ ನಿರ್ಣಯದಿಂದ ನಷ್ಟ ಸಂಭವ.
ಕನ್ಯಾ: ದೈರ್ಯ ಸಾಹಸ ಪರಾಕ್ರಮದಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷೆಗೂ ಮೀರಿದ ಧನಾಗಮನ ಹಾಗೂ ವರಮಾನ. ದೂರದ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ಗೌರವ ಪ್ರಾಪ್ತಿ. ಸಾಂಸಾರಿಕ ಸುಖ ತೃಪ್ತಿದಾಯಕ.
ತುಲಾ: ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಕಲ ವಿಧದ ಲಾಭ. ಪಾಂಡಿತ್ಯ ಸುಖಾದಿಗಳು ವೃದ್ಧಿ. ಸ್ತ್ರೀಪುರುಷರಿಗೆ ಪರಸ್ಪರರ ಸಹಕಾರ. ಉತ್ತಮ ಧನ ಸಂಚಯನ. ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಗೃಹದಲ್ಲಿ ಚರ್ಚೆಗೆ ಅವಕಾಶ ನೀಡದಿರಿ.
ವೃಶ್ಚಿಕ: ಆರೋಗ್ಯ ವೃದ್ಧಿ. ಅನಿರೀಕ್ಷಿತ ಸ್ಥಾನ ಸುಖಾದಿ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಗಣನೀಯ ಮುನ್ನಡೆ. ಹಿರಿಯ ಅಧಿಕಾರಿಗಳ ಸಹಕಾರ ಪ್ರೋತ್ಸಾಹ ಲಾಭ. ಮಾನಸಿಕ ತೃಪ್ತಿ. ನೂತನ ಮಿತ್ರರ ಸಮಾಗಮ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.
ಧನು: ಉತ್ತಮ ದೈಹಿಕ ಮಾನಸಿಕ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ವಿವೇಕತೆ ಶ್ರಮದಿಂದ ಅಭಿವೃದ್ಧಿ. ಧನಾರ್ಜನೆಗೆ ಕೊರತೆ ಕಾಣದು. ಪಾಲುದಾರರಲ್ಲಿ ಸಾಮರಸ್ಯವಿರಲಿ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ ಸಂಭವ. ಗುರುಹಿರಿಯರ ಆರೋಗ್ಯ ಬಗ್ಗೆ ಗಮನಿಸಿ.
ಮಕರ: ದೈರ್ಯ ಪರಾಕ್ರಮ ಸ್ಥಿರ ಬುದ್ಧಿಯಿಂದ ಕೂಡಿದ ಕಾರ್ಯ ವೈಖರಿ. ಬಂಧುಮಿತ್ರರ ಸಹಕಾರ. ಹಣಕಾಸಿನ ವಿಚಾರದಲ್ಲಿ ಏರಿಳಿತವಾದರೂ ಲಾಭಾಂಶ ವೃದ್ಧಿ. ಪರಊರ ಸಹೋದ್ಯೋಗಿಗಳಿಂದ ಸಹಕಾರ ವೃದ್ಧಿ. ಗೃಹೋಪಕರಣ ವಸ್ತು ಸಂಗ್ರಹ.
ಕುಂಭ: ನೂತನ ಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸ್ಥಾನ ಗೌರವಾದಿ ಸುಖ. ಅಧಿಕ ಧನಲಾಭ. ಸಾಂಸಾರಿಕ ಸುಖ ತೃಪ್ತಿದಾಯಕ. ಧಾರ್ಮಿಕ ಸ್ಥಳಗಳ ಸಂದರ್ಶನ. ವಿದ್ಯಾರ್ಥಿಗಳಿಗೆ ಸಕಲ ಸೌಕರ್ಯಗಳ ಲಾಭ.
ಮೀನ: ಆರೋಗ್ಯ ವೃದ್ಧಿ. ದಂಪತಿಗಳಲ್ಲಿ ಪ್ರೀತಿ ಅನುರಾಗ ವೃದ್ಧಿ. ಪಾಲುಗಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಮಿತ್ರರೊಂದಿಗೆ ತಾಳ್ಮೆಯಿಂದ ವಿವೇಚನದಿಂದ ನಡೆದುಕೊಳ್ಳಿ. ಅನಗತ್ಯ ಜವಾಬ್ದಾರಿ ತೆಗೆದುಕೊಳ್ಳದಿರಿ.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.