ಗುರುವಾರದ ರಾಶಿ ಫಲ: ಅತಿಯಾದ ಉದಾರತೆ ಸಮಸ್ಯೆ ತಂದೀತು, ಮಕ್ಕಳ ವಿಚಾರದಲ್ಲಿ ತೃಪ್ತಿ
Team Udayavani, Nov 17, 2022, 7:40 AM IST
ಮೇಷ: ಉದ್ಯೋಗ ವ್ಯವಹಾರಗಳಲ್ಲಿ ಸರ್ಕಾರೀ ಕೆಲಸಗಳಲ್ಲಿ ನಿರೀಕ್ಷೆಗೂ ಮೀರಿದ ಸಫಲತೆ. ಅಧಿಕ ಧನಸಂಪತ್ತಿನ ಲಾಭ. ಸರ್ವ ರೀತಿಯಲ್ಲೂ ಸುಖ ಸಂತೋಷ ಲಭಿಸಲಿದೆ. ಸಂದಭಕ್ಕೆ ಸರಿಯಾಗಿ ಜ್ಞಾನ ಪ್ರದರ್ಶನ. ಗೃಹದಲ್ಲಿ ಸಂಭ್ರಮದ ವಾತಾವರಣ.
ವೃಷಭ: ವಿದ್ಯೆ ಜ್ಞಾನ ಪ್ರದರ್ಶನದಿಂದ ಜನಮನ್ನಣೆ. ಅಧಿಕ ಸಂಪತ್ತು ಪ್ರಾಪ್ತಿ. ಗಣ್ಯ ವ್ಯಕ್ತಿಗಳಿಂದ ಗೌರವ ಆದರಗಳು ಲಭ್ಯ. ಮಕ್ಕಳಿಂದ ಸುವಾರ್ತೆ. ಕೆಲಸ ಕಾರ್ಯಗಳಲ್ಲಿ ಪ್ರಾಮಾಣಿಕತೆ. ಸ್ವತ್ಛತೆಯಿಂದ ಕಾರ್ಯ ನಿರ್ವಹಿಸಿದ್ದರಿಂದ ಶ್ವಾಘನೆ.
ಮಿಥುನ: ಅವಿವಾಹಿತರಿಗೆ ವಿವಾಹ ಭಾಗ್ಯ ಕೂಡಿ ಬರುವುದು. ದಂಪತಿಗಳಲ್ಲಿ ಅನುರಾಗ ವೃದ್ಧಿ. ಪಾಲುದಾರಿಕಾ ಕ್ಷೇತ್ರದಲ್ಲಿ ಗಣನೀಯ ಪ್ರಗತಿ. ಧಾರ್ಮಿಕ ಕಾರ್ಯಗಳಲ್ಲಿ ತಲ್ಲೀನತೆ. ಸತ್ಕರ್ಮಕ್ಕಾಗಿ ವ್ಯಯ. ಉತ್ತಮ ಧನಾರ್ಜನೆ.
ಕರ್ಕ: ಗೃಹೋಪಯೋಗಿ ವಸ್ತುಗಳ ಸಂಗ್ರಹ. ಆಸ್ತಿ ವಿಚಾರಗಳಲ್ಲಿ ಸಂತೋಷ ವೃದ್ಧಿ. ಮಾತೃ ಸಮಾನರಿಂದ ಸುಖ ಸಹಕಾರ ಮಾರ್ಗದರ್ಶನದ ಲಾಭ. ಆರೋಗ್ಯದಲ್ಲಿ ಗಣನೀಯ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ ಸಂಭವ.
ಸಿಂಹ: ನೂತನ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ಪ್ರಗತಿ. ಸಾಂಸಾರಿಕ ಸುಖ ಮಧ್ಯಮ. ಭೂಮ್ಯಾದಿ ಆಸ್ತಿ ವಾಹನ ವಿಚಾರಗಳಲ್ಲಿ ತಲ್ಲೀನತೆ. ಹಣಕಾಸಿನ ಬಗ್ಗೆ ಪಾರದರ್ಶಕತೆ ಅಗತ್ಯ. ಮಾತಿನಲ್ಲಿ ಸ್ಪಷ್ಟತೆಗೆ ಆದ್ಯತೆಯಿಂದ ಕಾರ್ಯ ಸಪಲತೆ.
ಕನ್ಯಾ: ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು. ಪೂರ್ವಾಪರ ತಿಳಿದು ಪರರಿಗೆ ಉಪಕಾರ ಮಾಡುವುದು. ಅನಗತ್ಯ ವಿಚಾರಗಳಿಗೆ ಆಸ್ಪದ ನೀಡದಿರಿ. ಧನಾರ್ಜನೆ ಉತ್ತಮ. ಉಳಿತಾಯ ಹೂಡಿಕೆಯಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಅನುಕೂಲ ಪರಿಸ್ಥಿತಿ.
ತುಲಾ: ದೀರ್ಘ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿನ ಜವಾಬ್ದಾರಿ ಒತ್ತಡ. ಉತ್ತಮ ಧನಾರ್ಜನೆ ಇದ್ದರೂ ಖರ್ಚಿಗೆ ಹಲವಾರು ಮಾರ್ಗಗಳು ಎದುರಾಗುವುವು. ದಂಪತಿಗಳಲ್ಲಿ ತಾಳ್ಮೆ ಇರಲಿ.
ವೃಶ್ಚಿಕ: ನಿರೀಕ್ಷಿತ ಸ್ಥಾನ ಗೌರವ ಆದರಾದಿ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಸಂತೋಷ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳ ವಿಚಾರದಲ್ಲಿ ತೃಪ್ತಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ನಿರಂತರ ಧನ ಸಂಪಾದನೆಯಿಂದ ಆತ್ಮಸ್ಥೆ „ರ್ಯ ವೃದ್ಧಿ.
ಧನು: ಆರೋಗ್ಯದಲ್ಲಿ ಪ್ರಗತಿ. ಅಧಿಕ ಧನಾರ್ಜನೆ. ಭೂಮಿ ಆಸ್ತಿ ವ್ಯವಹಾರದಲ್ಲಿ ಮುನ್ನಡೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸಹಾಯ ಒದಗಿ ಅಭಿವೃದ್ಧಿ. ದಾಂಪತ್ಯ ತೃಪ್ತಿದಾಯಕ. ಕುಟುಂಬಿಕರ ಉತ್ತಮ ಸಹಕಾರ ಪ್ರೋತ್ಸಾಹ.
ಮಕರ: ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿಯಿಂದ ಸಂತೋಷ. ಭೂಮ್ಯಾದಿ ವಿಚಾರಗಳಲ್ಲಿ ಹೆಚ್ಚಿದ ಪರಿಶ್ರಮ. ಸಾಂಸಾರಿಕ ಸುಖ ಮಧ್ಯಮ. ಮಕ್ಕಳ ಅಭಿವೃದ್ಧಿಗಾಗಿ ಅಧಿಕ ಧನವ್ಯಯ. ಆರೋಗ್ಯ ವಿಚಾರದಲ್ಲಿ ನಿಗಾ ವಹಿಸಿ.
ಕುಂಭ: ನಾಯಕತ್ವ ಗುಣ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಚರ್ಚೆಯಾದರೂ ಯಶಸ್ಸು ನಿಮ್ಮದಾಗುವ ಸಂಭವ. ಉತ್ತಮ ವರಮಾನ. ವಾಕ್‌ಚತುರತೆ ಪ್ರದರ್ಶನ. ಗುರುಹಿರಿಯರ ಆರೋಗ್ಯ ಮಧ್ಯಮ. ಸಾಂಸಾರಿಕ ಸುಖಕ್ಕೆ ಹೆಚ್ಚು ಪರಿಶ್ರಮ ಸಂಭವ.
ಮೀನ: ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣದಿಂದ ಲಾಭ. ಉದ್ಯೋಗದಲ್ಲಿ ಪರಿಶ್ರಮಕ್ಕೆ ಸರಿಯಾಗಿ ಅಭಿವೃದ್ಧಿ. ಧನಾರ್ಜನೆ ತೃಪ್ತಿಕರ. ಅತಿಯಾದ ಉದಾರತೆ ಸಮಸ್ಯೆ ತಂದೀತು. ವಸ್ತುನಿಷ್ಠೆಗೆ ಆದ್ಯತೆ ನೀಡಿ. ವ್ಯವಹರಿಸುವುದರಿಂದ ಸಫಲತೆ. ಸಾಂಸಾರಿಕ ಸುಖ ಮಧ್ಯಮ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.