![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Dec 2, 2021, 8:06 AM IST
ಮೇಷ: ಘರ್ಷಣೆಗೆ ಅವಕಾಶ ನೀಡದೇ ಪಾರದರ್ಶಕತೆಗೆ ಆದ್ಯತೆ ನೀಡಿ ಕಾರ್ಯ ನಿರ್ವಹಿಸುವುದರಿಂದ ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು ಲಭ್ಯ. ಧನಾಗಮನ ಅತ್ಯುತ್ತಮ. ಭೂಮ್ಯಾದಿ ವ್ಯವಹಾರಗಳಲ್ಲಿ ಅನುಕೂಲಕರ ಪರಿಸ್ಥಿತಿ.
ವೃಷಭ: ಧಾರ್ಮಿಕ ಕ್ಷೇತ್ರ ಸಂದರ್ಶನ, ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿಯಿಂದ ಕೂಡಿದ ಬದಲಾವಣೆ. ಸಹೋದ್ಯೋಗಿಗಳಿಂದ ತಾಳ್ಮೆಯಿಂದ ವರ್ತಿಸಿ. ಹೆಚ್ಚಿನ ನಿರೀಕ್ಷೆ ಸಲ್ಲದು.
ಮಿಥುನ: ನಿರೀಕ್ಷೆಯಂತೆ ಉತ್ತಮ ವಾಕ್‌ಚತುರತೆ ಯಿಂದ ಹೆಚ್ಚಿದ ಧನಲಾಭ. ಆರೋಗ್ಯ ಗಮನಿಸಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಸಹೋದರ ಸಮಾನರಿಂದ ಪ್ರೋತ್ಸಾಹ, ಸಹಕಾರ. ವಿದ್ಯಾರ್ಜನೆಯಲ್ಲಿ ತಲ್ಲೀನತೆ.
ಕರ್ಕ: ಉದ್ಯೋಗ ವ್ಯವಹಾರಗಳಲ್ಲಿ ಸಫಲತೆ ಗಳಿಸಲು ಹೆಚ್ಚು ತಾಳ್ಮೆ, ಪರಿಶ್ರಮ ಅಗತ್ಯ. ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆಯಿಂದ ನೆಮ್ಮದಿ ಲಭಿಸೀತು. ಆಸ್ತಿ ವಿಚಾರದಲ್ಲಿ ತಲ್ಲೀನತೆ.
ಸಿಂಹ: ಆರೋಗ್ಯ ಗಮನಿಸಿ. ದೀರ್ಘ ಪ್ರಯಾಣದಲ್ಲಿ ಸರಿಯಾದ ನಿಯಮ ಪಾಲಿಸಿ. ಉದ್ಯೋಗ ವ್ಯವಹಾರ ದಲ್ಲಿ ಅತೀ ಉದಾರತೆಯಿಂದ ತೊಂದರೆ ಸಂಭವ. ಹಣಕಾಸಿನ ಬಗ್ಗೆ ಪಾರದರ್ಶಕತೆ ಇರಲಿ. ವಿಶ್ರಾಂತಿಗೆ ಗಮನ ಹರಿಸಿ.
ಕನ್ಯಾ: ಸಜ್ಜನರಲ್ಲಿ ವಿಶ್ವಾಸ ಪ್ರೀತಿ ಆತ್ಮೀಯತೆ ತೋರುವುದರಿಂದ ಗೌರವಾದಿ ವೃದ್ಧಿ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಹೆಚ್ಚಿನ ವರಮಾನ. ಉತ್ತಮ ವಾಕ್‌ಚತುರತೆಯಿಂದ ಜನರಂಜನೆ. ಸಾಂಸಾರಿಕ ಸುಖ ವೃದ್ಧಿ.
ತುಲಾ : ಹಠಮಾರಿತನ ಮಾಡದೆ ಕಾರ್ಯ ಪ್ರವೃತ್ತರಾಗಿ. ಅನಾವಶ್ಯಕ ವಾಗÌದಕ್ಕೆ ಅವಕಾಶ ನೀಡದಿರಿ. ಬಂಧುಮಿತ್ರರಿಂದ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.
ವೃಶ್ಚಿಕ: ಬಂಧುಮಿತ್ರರ ಭೇಟಿ. ಭೂ ಸಂಬಂಧೀ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ಉತ್ತಮ ಧನಾರ್ಜನೆ. ದೂರದ ವ್ಯವಹಾರ ಗಳಲ್ಲಿ ಪ್ರಗತಿ. ಮಕ್ಕಳಿಂದ ಹೆಚ್ಚಿನ ಸುಖ. ದಂಪತಿಗಳಲ್ಲಿ ಅನ್ಯೋನ್ಯತೆ.
ಧನು: ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ಉತ್ತಮ. ನಿರೀಕ್ಷಿತ ಧನಸಂಪತ್ತು ಲಭ್ಯ. ಆಸ್ತಿ ವಿಚಾರಗಳಲ್ಲಿ ಹೆಚ್ಚಿನ ಬದಲಾವಣೆ. ಗುರುಹಿರಿಯರೊಂದಿಗೆ ಚರ್ಚೆಗೆ ಅವಕಾಶ ನೀಡದಿರಿ. ಮಕ್ಕಳಿಂದ ಹೆಚ್ಚಿನ ಸುಖ.
ಮಕರ: ಆರೋಗ್ಯ ಗಮನಿಸಿ. ಉದ್ಯೋಗದಲ್ಲಿ ನಿರೀಕ್ಷೆಯಂತೆ ಪ್ರಗತಿ. ಯೋಜನೆಗಳು ಸಫಲತೆ. ದೂರದ ಧನಸಂಪತ್ತು ಪ್ರಾಪ್ತಿ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಮಕ್ಕಳ ನಿಮಿತ್ತ ಹೆಚ್ಚಿನ ನೆಮ್ಮದಿ.
ಕುಂಭ: ಸ್ಥಿರ ಉತ್ತಮ ಆರೋಗ್ಯ. ಅಧ್ಯಯನದಲ್ಲಿ ತತ್ಪರತೆ. ಮಕ್ಕಳಿಗೆ ಹೆಚ್ಚಿನ ಸೌಕರ್ಯ, ಉದ್ಯೋಗ ವ್ಯವಹಾರಗಳಲ್ಲಿ ಗಣನೀಯ ಉತ್ತಮ ಪ್ರಗತಿ. ಹೆಚ್ಚಿನ ವರಮಾನ. ದಾಂಪತ್ಯ ತೃಪ್ತಿದಾಯಕ. ಗುರುಹಿರಿಯರ ರಕ್ಷೆ ಲಭ್ಯ.
ಮೀನ: ಸರಿಯಾದ ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ದೀರ್ಘ ಪ್ರಯಾಣ. ದೂರದ ವ್ಯವಹಾರ ಗಳಿಂದ ಅನಿರೀಕ್ಷಿತ ಧನಾಗಮ. ಖರ್ಚು ವೆಚ್ಚಗಳಲ್ಲಿ ಮುಂಜಾಗ್ರತೆ ವಹಿಸಿ. ಮಕ್ಕಳಿಗೆ ಉತ್ತಮ ಪ್ರಗತಿದಾಯಕ ಬದಲಾವಣೆ.
Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ
Horoscope: ಹೇಗಿದೆ ಇಂದಿನ ರಾಶಿಫಲ
Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ
Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.
Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ
You seem to have an Ad Blocker on.
To continue reading, please turn it off or whitelist Udayavani.