![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 14, 2024, 7:39 AM IST
ಮೇಷ: ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ಪರಿಶ್ರಮಕ್ಕೆ ತಕ್ಕ ಪ್ರತಿಫಲದ ಭರವಸೆ. ಉದ್ಯಮದಲ್ಲಿ ಪೈಪೋಟಿ ದೂರವಾಗುವ ಸಾಧ್ಯತೆ. ಆಪ್ತರಿಂದ ಅಯಾಚಿತ ನೆರವು ಲಭ್ಯ. ಗೃಹಿಣಿಯರ ಆರೋಗ್ಯದ ಕಡೆಗೆ ಗಮನ ಇರಲಿ.
ವೃಷಭ: ಉದ್ಯೋಗದಲ್ಲಿ ಪದೋನ್ನತಿ.ಸರಕಾರಿ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಬಿಡುವು ಇರಲಾರದು. ಉದ್ಯಮಗಳಲ್ಲಿ ಉತ್ಪಾದನೆ ಹೆಚ್ಚಳ. ದೂರದಲ್ಲಿರುವ ನೆಂಟರ ಆಗಮನ. ಸಾಹಿತ್ಯ ಅಧ್ಯಯನದಲ್ಲಿ ಆಸಕ್ತಿ. ದೇವತಾ ಸಾನ್ನಿಧ್ಯಕ್ಕೆ ಭೇಟಿ.
ಮಿಥುನ: ವಿನಾ ಕಾರಣ ಅಪವಾದಕ್ಕೆ ಗುರಿಯಾಗುವ ಸಾಧ್ಯತೆ. ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ. ಉದ್ಯಮದಲ್ಲಿ ಪ್ರಗತಿ ತೃಪ್ತಿಕರ. ವ್ಯವಹಾರ ನಿಮಿತ್ತ ಸಣ್ಣ ಪ್ರಯಾಣದ ಸಾಧ್ಯತೆ. ಸಂಗಾತಿಗೆ ಮನಸ್ಥೈರ್ಯ ತುಂಬಲು ಪ್ರಯತ್ನ.
ಕರ್ಕಾಟಕ: ಉದ್ಯೋಗ ಸ್ಥಾನದಲ್ಲಿ ಪ್ರತಿಭೆ, ಪರಿಶ್ರಮಕ್ಕೆ ಮನ್ನಣೆ. ಉದ್ಯಮದ ಉತ್ಪಾದನೆ ಗಳಲ್ಲಿ ವೈವಿಧ್ಯ ಕಾಯ್ದುಕೊಳ್ಳುವ ಪ್ರಯತ್ನ ಸಫಲ. ವಸ್ತ್ರ, ಸಿದ್ಧ ಉಡುಪು, ಆಭರಣ, ಶೋಕಿ ವಸ್ತುಗಳ ವ್ಯಾಪಾರ ವೃದ್ಧಿ. ಮನೆಮಂದಿಗೂ ಉಲ್ಲಾಸದ ವಾತಾವರಣ.
ಸಿಂಹ: ಉದ್ಯೋಗಸ್ಥರಿಗೆ ಪದೋನ್ನತಿ. ಹೊಸ ಪರಿಚಯಸ್ಥರ ಸಹಾಯದಿಂದ ವ್ಯಾಪಾರ ವೃದ್ಧಿ. ಕಟ್ಟಡ ನಿರ್ಮಾಣ ಕಾಮಗಾರಿ ತ್ವರಿತ ಗತಿಯಲ್ಲಿ. ನೂತನ ವಾಹನ ಖರೀದಿಗೆ ಸಿದ್ಧತೆ. ಮನೆಯಲ್ಲಿ ಮಂಗಲ ಕಾರ್ಯದ ಪ್ರಸ್ತಾವ.
ಕನ್ಯಾ: ಶಾಂತಿ,ಸಮಾಧಾನದ ಕ್ಷಣಗಳು. ಆತ್ಮೀಯರಿಂದ ಸಕಾಲಿಕ ಸಹಾಯ. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಉದ್ಯೋಗಾಸಕ್ತರಿಗೆ ಉತ್ತಮ ಅವಕಾಶಗಳು. ಕೃಷಿ ಕ್ಷೇತ್ರದಲ್ಲಿ ಒಳ್ಳೆಯ ಪ್ರತಿಫಲ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ.
ತುಲಾ: ಪರಿಹಾರವಿಲ್ಲದ ಸಮಸ್ಯೆಯೇ ಇಲ್ಲ. ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ ಪ್ರಾಪ್ತಿ. ಅಕಸ್ಮಾತ್ ಧನಾಗಮ. ಗೃಹಾಲಂಕಾರಕ್ಕೆ ಧನ ವ್ಯಯ. ಕುಶಲಕರ್ಮಿಗಳ ಕೃತಿಗಳಿಗೆ ಉತ್ತಮ ಬೇಡಿಕೆ. ಸಂಗೀತ, ಕೀರ್ತನೆ, ಶ್ರವಣದಿಂದ ಸಮಾಧಾನ.
ವೃಶ್ಚಿಕ: ಸಂಕಟಗಳಿಂದ ಬಿಡುಗಡೆ. ಉದ್ಯೋಗ ಸ್ಥಾನದಲ್ಲಿ ಹಿರಿತನಕ್ಕೆ ಗೌರವ. ಉದ್ಯಮಕ್ಕೆ ಹೊಸ ಪಾಲುದಾರರ ಸೇರ್ಪಡೆ. ಉತ್ಪನ್ನಗಳ ಗುಣಮಟ್ಟಕ್ಕೆ ಜನರಿಂದ ಶ್ಲಾಘನೆ. ನೆಂಟರ ಆಗಮನದಿಂದ ಹಬ್ಬದ ವಾತಾವರಣ.
ಧನು: ಹಿತೈಷಿಗಳಿಂದ ಆವಶ್ಯಕತೆಗೆ ತಕ್ಕಂತೆ ಸಹಾಯ. ಉದ್ಯೋಗ ಸ್ಥಾನದಲ್ಲಿ ಸದಭಿಪ್ರಾಯಕ್ಕೆ ಪಾತ್ರರಾಗುವಿರಿ. ಸಣ್ಣ ಪ್ರಮಾಣದ ಉದ್ಯಮಗಳ ಅಭಿವೃದ್ಧಿ. ಕೃಷಿ ಭೂಮಿಯಲ್ಲಿ ಉತ್ತಮ ಬೆಳೆ. ಹೈನುಗಾರಿಕೆ, ಜೇನು ವ್ಯವಸಾಯದಲ್ಲಿ ಆಸಕ್ತಿ.
ಮಕರ: ಉದ್ಯೋಗ ಸ್ಥಾನದಲ್ಲಿ ಗೌರವ. ನಿವೇಶನ ಖರೀದಿ- ಮಾರಾಟ ವ್ಯವಹಾರಸ್ಥ ರಿಗೆ ಲಾಭ. ಕೃಷ್ಯುತ್ಪನ್ನಗಳ ಮಾರಾಟದಿಂದ ಲಾಭ.ಹಣ್ಣು, ತರಕಾರಿ ಬೆಳೆಗಾರರಿಗೆ ಆದಾಯ ವೃದ್ಧಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ.
ಕುಂಭ: ಗಳಿಕೆಯ ಗಣ ಲಾಭದಾಯಕ ಯೋಜನೆಗಳಲ್ಲಿ ಹೂಡಿಕೆ. ಉದ್ಯಮದಲ್ಲಿ ನಿರೀಕ್ಷೆ ಮೀರಿದ ಪ್ರಗತಿ. ದೂರದಲ್ಲಿರುವ ಬಂಧುಗಳ ಪೂರ್ವನಿಯೋಜಿತ ಭೇಟಿ. ಸೇವಾಕಾರ್ಯಗಳಲ್ಲಿ ಕೈಜೋಡಿಸಲು ಎಲ್ಲರ ಪೂರ್ಣ ಸಹಕಾರ. ಮುದ್ರಣ ಸಾಮಗ್ರಿ ವಿತರಕರ ವ್ಯಾಪಾರ ವೃದ್ಧಿ.
Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ
Horoscope: ಹೇಗಿದೆ ಇಂದಿನ ರಾಶಿಫಲ
Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ
Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.
Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.