Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಸುಧಾರಣೆ ಕಾಣಲಿದೆ
Team Udayavani, May 24, 2024, 7:05 AM IST
ಮೇಷ: ಉದ್ಯೋಗ ಸ್ಥಾನದಲ್ಲಿ ಕಿರಿಯರಿಗೆ ಮಾರ್ಗದರ್ಶನ ಮಾಡುವ ಹೊಣೆಗಾರಿಕೆ. ಹೆಚ್ಚುವರಿ ಆದಾಯದ ಮಾರ್ಗ ಅನ್ವೇಷಣೆ. ವ್ಯವಹಾರ ಸಂಬಂಧ ಸಣ್ಣ ಪ್ರಯಾಣ. ನ್ಯಾಯಾಲಯ ವ್ಯವಹಾರದಲ್ಲಿ ಜಯ.
ವೃಷಭ: ಬಂಧುಗಳ ಕಡೆಯಿಂದ ಶುಭ ವಾರ್ತೆ. ಸಾಮಾಜಿಕ ಕಾರ್ಯಗಳಿಗೆ ಉದ್ಯಮಿ ಗಳ ಪ್ರೋತ್ಸಾಹ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಬಿಡುವಿಲ್ಲದ ವ್ಯಾಪಾರ. ಕೇಟರಿಂಗ್ ವ್ಯವಹಾರಸ್ಥರಿಗೆ ಸಾಮಾನ್ಯ ಲಾಭ.
ಮಿಥುನ: ಸಾಹಿತ್ಯಸಂಬಂಧಿ ಚಟುವಟಿಕೆ ಗಳಲ್ಲಿ ತೊಡಗಿಸಿಕೊಳ್ಳುವಿಕೆ. ಉದ್ಯೋಗಸ್ಥರಿಗೆ ಸಂತೃಪ್ತಿ, ಸಮಾಧಾನದ ಅನುಭವ. ಸ್ವಂತ ಉದ್ಯಮಕ್ಕೆ ಮೂಲ ಸೌಲಭ್ಯಗಳ ಸಮಸ್ಯೆ. ಪ್ರಾಚೀನ ವಿದ್ಯೆಗಳನ್ನು ಕಲಿಯುವ ಆಸಕ್ತಿ.
ಕರ್ಕಾಟಕ: ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಸುಧಾರಣೆ. ಉದ್ಯಮಗಳು ಕ್ಷಿಪ್ರ ಗತಿಯಲ್ಲಿ ಪ್ರಗತಿ. ವ್ಯಾಪಾರಿಗಳಿಗೆ ಹಿತಶತ್ರುಗಳ ಬಾಧೆ. ಸಣ್ಣ ಪ್ರಮಾಣದ ಕೃಷಿ ಕಾರ್ಯದಲ್ಲಿ ಲಾಭ. ಸ್ವಪ್ರಯತ್ನದಿಂದ ಆರೋಗ್ಯವೃದ್ಧಿ.
ಸಿಂಹ: ಉದ್ಯೋಗ ಸ್ಥಾನದಲ್ಲಿ ವಿಶೇಷ ಮನ್ನಣೆ. ಉದ್ಯಮದ ಉತ್ಪನ್ನಗಳ ಜನಪ್ರಿಯತೆ ವೃದ್ಧಿ.ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ. ನ್ಯಾಯಾಲಯದಲ್ಲಿ ತೀರ್ಮಾನ ಮುಂದಕ್ಕೆ.ಸಾಮಾಜಿಕ ಪಿಡುಗುಗಳ ನಿವಾರಣೆಗೆ ಸಾಮೂಹಿಕ ಚಿಂತನೆ.
ಕನ್ಯಾ: ಉದ್ಯೋಗ ಸ್ಥಾನದಲ್ಲಿ ಹಿತಕರ ವಾತಾವರಣ. ವಾಹನ ಉದ್ಯಮಿಗಳಿಗೆ ಆದಾಯ ವೃದ್ಧಿ. ಸಟ್ಟಾ ವ್ಯವಹಾರದಿಂದ ದೂರ ವಿರುವುದರಿಂದ ಹಿತ. ಪಾಲುದಾರಿಕೆಯಲ್ಲಿ ಸಣ್ಣ ಪ್ರಮಾಣದ ಹೊಸ ಉದ್ಯಮ ಆರಂಭ.
ತುಲಾ: ಉದ್ಯೋಗದಲ್ಲಿ ಜ್ಞಾನ ಮತ್ತು ಪ್ರತಿಭೆಗೆ ಮನ್ನಣೆ. ಹತ್ತಿರದ ತೀರ್ಥಕ್ಷೇತ್ರಕ್ಕೆ ಸಂದರ್ಶನ. ವಸ್ತ್ರ, ಆಭರಣ ಖರೀದಿ. ಮಹಿಳೆಯರ ನೇತೃತ್ವದ ಉದ್ಯಮಗಳಿಗೆ ಉತ್ಕರ್ಷದ ಕಾಲ.ಸಂಸಾರ ದಲ್ಲಿ ಪ್ರೀತಿ, ಸಾಮರಸ್ಯದ ವಾತಾವರಣ.
ವೃಶ್ಚಿಕ: ಸರಕಾರಿ ಉದ್ಯೋಗಿಗಳಿಗೆ ವರ್ಗಾವಣೆಯ ಆತಂಕ. ವಾಹನ ಬಿಡಿಭಾಗ ವ್ಯಾಪಾರಿಗಳಿಗೆ ಸುಯೋಗ. ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ. ಮಕ್ಕಳ ಕಲಿಕೆ ಆಸಕ್ತಿ ಹೆಚ್ಚಿಸಲು ಪ್ರಯತ್ನ. ಹಿರಿಯರ ಆರೋಗ್ಯ ಸುಧಾರಣೆ.
ಧನು: ಸಹೋದ್ಯೋಗಿಗಳಿಂದ ಪ್ರೀತಿ, ಗೌರವದ ವರ್ತನೆ. ಸ್ವಂತದ ಚಿಕ್ಕ ಉದ್ಯಮದ ಕ್ಷಿಪ್ರ ಪ್ರಗತಿ. ಉದ್ಯೋಗಾಸಕ್ತ ಶಿಕ್ಷಿತರಿಗೆ ಒಳ್ಳೆಯ ಅವಕಾಶಗಳು ಗೋಚರ. ವ್ಯವಹಾರದ ಸಂಬಂಧ ಸಣ್ಣ ಪ್ರಯಾಣ ಸಂಭವ.
ಮಕರ: ಉದ್ಯೋಗ ಸ್ಥಾನದಲ್ಲಿ ಹೊಸ ಜವಾಬ್ದಾರಿ ನಿಯೋಜನೆ. ವಸ್ತ್ರ, ಸಿದ್ಧ ಉಡುಪು, ಆಭರಣ, ಪಾದರಕ್ಷೆ, ಶೋಕಿ ಸಾಮಗ್ರಿ ವ್ಯಾಪಾರಿಗಳಿಗೆ ಹೇರಳ ಲಾಭ. ಉದ್ಯೋಗ ಅರಸು ತ್ತಿರುವವರಿಗೆ ಅವಕಾಶಗಳು ಲಭ್ಯ.
ಕುಂಭ: ಸಂಸಾರದಲ್ಲಿ ಸಂತೃಪ್ತಿಯ ವಾತಾವರಣ. ಕುಶಲ ಕರ್ಮಿಗಳಿಗೆ ಉದ್ಯೋಗಾವಕಾಶ. ಗ್ರಾಹಕರ ಅಪೇಕ್ಷೆ ಗುರಿ ಸ್ಪಂದನ. ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿಗಳು. ಸಮಾಜ ಸೇವಾಕಾರ್ಯಗಳಿಗೆ ಮತ್ತಷ್ಟು ಅವಕಾಶಗಳು. ಮಕ್ಕಳ ಬಗ್ಗೆ ಗಮನಹರಿಸಿ.
ಮೀನ: ಉದ್ಯೋಗದಲ್ಲಿ ಸಮಾಧಾನ. ಪರಿಚಿತ ವ್ಯಕ್ತಿಗಳಿಂದ ಸಕಾಲದಲ್ಲಿ ಸಹಾಯ. ಸರಕಾರಿ ಕಾರ್ಯಾಲಯಗಳಲ್ಲಿ ಸಕಾರಾತ್ಮಕ ಸ್ಪಂದನ. ಭವಿಷ್ಯದ ಯೋಜನೆಗಳ ಅನುಷ್ಠಾನಕ್ಕೆ ಪೂರ್ವ ಸಿದ್ಧತೆಮ. ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಹೊಣೆಗಾರಿಕೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.