Horoscope: ಹಿತಶತ್ರುಗಳು ಮತ್ತು ಸ್ವಾರ್ಥಿಗಳ ಬಗ್ಗೆ ಎಚ್ಚರವಿರಲಿ
Team Udayavani, Jun 3, 2024, 7:35 AM IST
ಮೇಷ: ಸಪ್ತಾಹಾರಂಭದಲ್ಲಿ ಹೊಸ ಅನುಭವ. ಉದ್ಯೋಗ ಸ್ಥಾನದಲ್ಲಿ ಉತ್ಸಾಹ ವರ್ಧನೆ. ಉದ್ಯಮಗಳ ನಡುವೆ ಉತ್ಪನ್ನಗಳ ಪ್ರಚಾರದಲ್ಲಿ ಮೇಲಾಟ. ಹಿರಿಯರ ಆರೋಗ್ಯದ ಕಡೆಗೆ ಗಮನ ಇರಲಿ. ಸಣ್ಣ ಪ್ರಯಾಣ ಸಂಭವ.
ವೃಷಭ: ಸರಕಾರಿ ಅಧಿಕಾರಿಗಳಿಗೆ ಹೆಚ್ಚುವರಿ ಕೆಲಸದ ಹೊರೆ. ಖಾಸಗಿ ರಂಗದ ಉತ್ಪಾದನೆ ಹೆಚ್ಚಳ. ದೇವತಾ ಸಾನ್ನಿಧ್ಯಕ್ಕೆ ಭೇಟಿ. ಹಿರಿಯರು, ಗೃಹಿಣಿಯರು ಮತ್ತು ಮಕ್ಕಳಿಗೆ ಉಲ್ಲಾಸದ ವಾತಾವರಣ.
ಮಿಥುನ: ಹಿತಶತ್ರುಗಳು ಮತ್ತು ಸ್ವಾರ್ಥಿಗಳ ಬಗ್ಗೆ ಎಚ್ಚರ. ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು. ಸ್ವಂತಉದ್ಯಮದ ಪ್ರಗತಿ ತೃಪ್ತಿಕರ.ಕೃಷ್ಯುತ್ಪನ್ನ ಮಾರಾಟದಿಂದ ಲಾಭ. ಶಿಕ್ಷಣದಲ್ಲಿ ಮಕ್ಕಳ ಆಸಕ್ತಿ ವೃದ್ಧಿಗೆ ಶತಪ್ರಯತ್ನ.
ಕರ್ಕಾಟಕ: ಉದ್ಯೋಗ ಸ್ಥಾನದಲ್ಲಿ ಪ್ರತಿಭೆ, ಹಿರಿತನಕ್ಕೆ ಪ್ರಾಶಸ್ತ್ಯ ಉದ್ಯಮದ ಉತ್ಪಾದನೆಗಳ ಜನಪ್ರಿಯತೆ ವೃದ್ಧಿ. ವಸ್ತ್ರ, ಸಿದ್ಧ ಉಡುಪು, ಆಭರಣ, ಶೋಕಿ ವಸ್ತುಗಳ ವ್ಯಾಪಾರ ಹೆಚ್ಚಳ. ದೀರ್ಘಾವಧಿ ಹೂಡಿಕೆಯಲ್ಲಿ ಲಾಭ.
ಸಿಂಹ: ಉದ್ಯೋಗಸ್ಥರಿಗೆ ಸಂತೃಪ್ತಿಯ ಭಾವನೆ. ಗ್ರಾಹಕರ ಪ್ರಚಾರದಿಂದ ವ್ಯಾಪಾರಕ್ಕೆ ಪೋಷಣೆ. ಕಟ್ಟಡ ನಿರ್ಮಾಣ ಕಂಟ್ರಾಕ್ಟರರಿಗೆ ಕಾರ್ಮಿಕರ ಸಮಸ್ಯೆ.ಮನೆಯಲ್ಲಿ ಮಂಗಲ ಕಾರ್ಯದ ಪ್ರಸ್ತಾವ. ಲೇವಾದೇವಿ ವ್ಯವಹಾರದಲ್ಲಿ ನಷ್ಟ.
ಕನ್ಯಾ: ಉದ್ಯೋಗ ಸ್ಥಾನದಲ್ಲಿ ಹಿತಕರ ವಾತಾವರಣ. ಸ್ವಂತ ಉದ್ಯಮದಲ್ಲಿ ಗಮನಾರ್ಹ ಪ್ರಗತಿ, ಹೊಸ ನೌಕರರ ಸೇರ್ಪಡೆ. ಉದ್ಯೋಗಾಸಕ್ತರಿಗೆ ಅಯಾಚಿತ ಅವಕಾಶಗಳು ಲಭ್ಯ. ಕೃಷಿ ಭೂಮಿಯಲ್ಲಿ ಉತ್ತಮ ಬೆಳೆ.
ತುಲಾ: ಸಮಸ್ಯೆಗಳಿಗೆ ಸಕಾಲದಲ್ಲಿ ಪರಿಹಾರ. ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ. ಗೃಹೋಪಯೋಗಿ. ಇಲೆಕ್ಟ್ರಾನಿಕ್ಸ್ ಸಾಮಗ್ರಿಗಳ ಖರೀದಿ.ಕುಶಲಕರ್ಮಿಗಳಿಗೆ ಉದ್ಯೋಗಾವಕಾಶ.ಕೀರ್ತನೆ, ಭಜನೆ, ಸತ್ಸಂಗಗಳಲ್ಲಿ ಆಸಕ್ತಿ.
ವೃಶ್ಚಿಕ: ಸಕಲ ಬಾಧೆಗಳಿಂದ ಬಿಡುಗಡೆ. ಉದ್ಯೋಗ ಸ್ಥಾನದಲ್ಲಿ ವಿಶ್ವಾಸ ವೃದ್ಧಿ. ಉದ್ಯಮ ಭರದಲ್ಲಿ ಮುನ್ನಡೆ. ಉತ್ಪನ್ನಗಳ ಗುಣಮಟ್ಟಕ್ಕೆ ಸಾಮಾಜಿಕರ ಶ್ಲಾಘನೆ. ಹತ್ತಿರದ ದೇವತಾ ಕ್ಷೇತ್ರಕ್ಕೆ ಭೇಟಿ.
ಧನು: ಕುಟುಂಬದೊಳಗೆ ಸಾಮರಸ್ಯ ಸ್ಥಾಪನೆ. ಉದ್ಯೋಗ ಸ್ಥಾನದಲ್ಲಿ ಸಜ್ಜನರ ಸದ್ಭಾವನೆಗೆ ಪಾತ್ರರಾಗುವಿರಿ. ಸಣ್ಣ ಪ್ರಮಾಣದ ಉದ್ಯಮಗಳ ಅಭಿವೃದ್ಧಿ. ಹೈನುಗಾರಿಕೆ, ಜೇನು ವ್ಯವಸಾಯದಲ್ಲಿ ಪ್ರಗತಿ.
ಮಕರ: ಉದ್ಯೋಗ ಸ್ಥಾನ ನವೀಕರಣ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ಕೃಷ್ಯುತ್ಪನ್ನಗಳ ಮಾರಾಟದಿಂದ ಸಾಮಾನ್ಯ ಲಾಭ. ಹಣ್ಣು, ತರಕಾರಿ ಬೆಳೆಗಾರರಿಗೆ ಆದಾಯವೃದ್ಧಿ. ಸಂಸಾರದಲ್ಲಿ ಪ್ರೀತಿ, ಸಾಮರಸ್ಯ ವರ್ಧನೆ.
ಕುಂಭ: ಹೊಸ ಆದಾಯ ಮೂಲಗಳ ಉಪಯೋಗ. ಸರಕಾರಿ ನೌಕರರಿಗೆ ಅನುಕೂಲ. ಕೆಲವು ಉದ್ಯಮಗಳಲ್ಲಿ ನಿರೀಕ್ಷೆ ಮೀರಿದ ಪ್ರಗತಿ. ಸೇವಾ ಕಾರ್ಯಗಳಲ್ಲಿ ಕೈಜೋಡಿಸಲು ಮನೆ ಮಂದಿಯ ಸಹಕಾರ.
ಮೀನ: ಧರ್ಮ ಮಾರ್ಗದಲ್ಲಿ ನಡೆಯಲು ಸ್ಥಿರಬುದ್ಧಿ. ಉದ್ಯೋಗದಲ್ಲಿ ಅಜಾತಶತ್ರುತ್ವ. ಸರಕಾರಿ ಇಲಾಖೆ ನೌಕರರಿಂದ ಸಹಕಾರ. ಪಾಲುದಾರಿಕೆಯಲ್ಲಿ ಹೊಸ ವ್ಯವಹಾರ ಆರಂಭಿಸಲು ಚಿಂತನೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Horoscope: ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್ ವ್ಯಾಪಾರಿಗಳ ಘೋಷಣೆ
SC: ಲಾಟರಿ ಕಿಂಗ್ ಮಾರ್ಟಿನ್ ಕೇಸ್: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್ ತಡೆ
Malayalam ಕಥೆಗಾರ, ಸಾಹಿತಿ ವಾಸುದೇವನ್ ನಾಯರ್ ವಿಧಿವಶ
Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.