ಮದ್ಯಮುಕ್ತ, ಆಮಿಷಮುಕ್ತ ಚುನಾವಣೆ: ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆ ಆಗ್ರಹ
Team Udayavani, Apr 20, 2023, 6:05 AM IST
ಬೆಳ್ತಂಗಡಿ: ಮದ್ಯಮುಕ್ತ, ಆಮಿಷಮುಕ್ತ ಚುನಾವಣೆ ಮತ್ತು ಮದ್ಯಮುಕ್ತ ಕರ್ನಾಟಕ ನಿರ್ಮಿಸುವಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆ ಆಗ್ರಹಿಸುತ್ತಿದೆ ಎಂದು ಜನ ಜಾಗೃತಿ ವೇದಿಕೆಯ ಕಾರ್ಯದರ್ಶಿ ವಿವೇಕ್ ವಿ. ಪಾಯ್ಸ್ ತಿಳಿಸಿದ್ದಾರೆ.
ಭಾರತೀಯ ರಾಜಕೀಯ ವ್ಯವಸ್ಥೆಯ ನೈತಿಕ ಅಧಃಪತನವು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮದ್ಯಪಾನಾದಿ ದುಶ್ಚಟಗಳ ವ್ಯಾಪಕತೆಗೆ ಕಾರಣವಾಗಿದೆ. ಹೆಂಡ ಹಂಚದೆ, ಆಮಿಷಗಳಿಲ್ಲದೆ ಚುನಾವಣೆಯೇ ಇಲ್ಲ ಎಂಬಂತಹ ದುಸ್ಥಿತಿ ಉಂಟಾಗಿದೆ. ಚುನಾವಣೆಗಳಲ್ಲಿ ಎಲ್ಲ ರಾಜಕೀಯ ಪಕ್ಷಗಳು ಮದ್ಯ ಹಂಚುವುದಿಲ್ಲ, ಆಮಿಷ ಒಡ್ಡುವುದಿಲ್ಲ ಎನ್ನುವ ತೀರ್ಮಾನಕ್ಕೆ ಬರಬೇಕು ಎಂದು ಮನವಿ ಮಾಡಿದ್ದಾರೆ.
ಪ್ರಜ್ಞಾವಂತ ನಾಗರಿಕರು ಮದ್ಯ ಮತ್ತು ಇತರ ಯಾವುದೇ ಆಮಿಷಕ್ಕೆ ಬಲಿಯಾಗಬಾರದೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ರಾಜಣ್ಣ ಮೂ. ಕೊರವಿ ಮನವಿ ಮಾಡಿದ್ದಾರೆ. ಹೆಂಡದ ಆಮಿಷವೊಡ್ಡಿ ಮತ ಪಡೆಯುವ ಪ್ರಯತ್ನ ನಡೆಯುತ್ತಿರುವುದು ತಮ್ಮ ಗಮನಕ್ಕೆ ಬಂದಲ್ಲಿ ತತ್‌ಕ್ಷಣ ಚುನಾವಣ ಅಧಿಕಾರಿಗಳಿಗೆ, ತಹಶೀಲ್ದಾರರಿಗೆ, ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆಯೂ ತಿಳಿಸಿದ್ದಾರೆ.
ಪಾನಮುಕ್ತರ ನವಜೀವನ ಸಮಿತಿಗಳನ್ನು ಕಾವಲು ಸಮಿತಿಯಂತೆ ಕೆಲಸ ನಿರ್ವಹಿಸಲು ತರಬೇತಿ ನೀಡಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷರು ನಗರಗಳಲ್ಲಿ ಮದ್ಯಮುಕ್ತ ಮತದಾನ ಎಂಬ ಶೀರ್ಷಿಕೆಯಲ್ಲಿ ಬ್ಯಾನರ್ ಅಳವಡಿಸಿ ಜಾಗೃತಿ ಮೂಡಿಸುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.