Belagavi ಮತ್ತೊಬ್ಬ ಮಾಜಿ ಸಚಿವ ಬಿಜೆಪಿಗೆ ಗುಡ್ ಬೈ
ಟಿಕೆಟ್ ಸಿಗದಿದ್ದಕ್ಕೆ ರಾಜೀನಾಮೆಗೆ ನಿರ್ಧಾರ
Team Udayavani, Apr 13, 2023, 9:51 PM IST
ಬೆಳಗಾವಿ: ಬಿಜೆಪಿ ಟಿಕೆಟ್ ಕೈ ತಪ್ಪಿರುವ ಆಕಾಂಕ್ಷಿಗಳು ಬಂಡಾಯದ ಬಾವುಟ ಹಾರಿಸುತ್ತಿದ್ದು, ಮಾನಿ ಸಚಿವ ಶಶಿಕಾಂತ ನಾಯಕ ಹುಕ್ಕೇರಿಯಲ್ಲಿ ಟಿಕೆಟ್ ಸಿಗದಿದ್ದಕ್ಕೆ ಬಿಜೆಪಿ ಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಶಿಕಾಂತ ನಾಯಕ, ಹುಕ್ಕೇರಿ ಮತಕ್ಷೇತ್ರದಿಂದ ಟಿಕೆಟ್ ನೀಡದಿರುವುದು ಹಾಗೂ ಕತ್ತಿ ಕುಟುಂಬದ ಕಿರುಕುಳದಿಂದ ಬೇಸತ್ತು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಯಮಕನಮರಡಿ ಉಸ್ತುವಾರಿ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಬೆಂಗಳೂರಿಗೆ ತೆರಳಿ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಉಮೇಶ ಕತ್ತಿ ನಿಧನ ಬಳಿಕ ನಾನು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಬಳಿಯೂ ಟಿಕೆಟ್ ನೀಡುವಂತೆ ಮನವಿ ಮಾಡಿದ್ದೆ. ಆದರೆ ನನಗೆ ಅನ್ಯಾಯ ಮಾಡಿದ್ದಾರೆ. ಅಲ್ಲದೇ ರಮೇಶ ಕತ್ತಿ ಮತ್ತು ಅವರ ಕುಟುಂಬಸ್ಥರು ನನಗೆ ಸಾಕಷ್ಟು ಕಿರುಕುಳ ಕೊಟ್ಟಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ರಾಜೀನಾಮೆಗೂ ನನಗೂ ಸಂಬಂಧವಿಲ್ಲ. ಇದು ನನ್ನ ವೈಯಕ್ತಿಕ ನಿರ್ಧಾರ ಎಂದರು.
ಬೆಳಗಾವಿ ನಗರಕ್ಕೆ ಸೀಮಿತವಾಗಿದ್ದ ಬಿಜೆಪಿಯನ್ನು ಹಳ್ಳಿ ಹಳ್ಳಿಯಲ್ಲಿ ನಾನು ಮತ್ತು ಬಾಬಾಗೌಡ ಪಾಟೀಲರು ಬೆಳೆಸಿದ್ದೇವೆ. ಆದರೆ ಪಕ್ಷಕ್ಕೆ ದ್ರೋಹ ಮಾಡಿದವರಿಗೆ ಟಿಕೆಟ್ ನೀಡಿದ್ದಾರೆ. 20 ವರ್ಷದಿಂದ ಬಿಜೆಪಿಯಲ್ಲಿ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ್ದೇನೆ. ಐದಾರು ವರ್ಷ ಪಕ್ಷಕ್ಕಾಗಿ ದುಡಿದಿದ್ದನ್ನು ಗಮನಿಸಿ ಪಕ್ಷ ನನಗೆ ಟಿಕೆಟ್ ನೀಡಿತ್ತು. ಆಗ ಉಮೇಶ ಕತ್ತಿಯವರ ವಿರುದ್ಧ ಗೆಲುವು ಸಾಧಿಸಿದ್ದೆ. ಅಲ್ಲದೆ ಸಚಿವನಾಗಿಯೂ ಕೆಲಸ ಮಾಡಿದ್ದೆ ಎಂದರು.
ಉತ್ತರ ಕರ್ನಾಟಕ ಅಭಿವೃದ್ಧಿಯಾಗಬೇಕೆಂದು ಮೊದಲ ಬಾರಿಗೆ ಅಧಿವೇಶ ನಡೆಸಿ ಇಲ್ಲಿ ಸುವರ್ಣ ವಿಧಾನಸೌಧ ನಿರ್ಮಾಣ ಮಾಡಿದ್ದರಿಂದ ನಿರಂತರ ಕಾರ್ಯ ಚಟುವಟಿಕೆ ಮಾಡಲು ಸಾಧ್ಯವಾಯಿತು. ಉಮೇಶ ಕತ್ತಿ ಬಿಜೆಪಿಗೆ ಬಂದ ಬಳಿಕ ಕೇವಲ 11 ತಿಂಗಳು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿದ್ದರು. ನನ್ನ ಅವಧಿಯಲ್ಲಿ ಪಂಚಾಯತ್ ಕೆಲಸ ಉತ್ತಮ ಆಗಿದ್ದಕ್ಕೆ ಚಿನ್ನದ ಪದಕ ಬಂದಿತ್ತು. ಪಕ್ಷ ನೀಡಿದ ಕೆಲಸವನ್ನು ನಾನು ಸರಿಯಾಗಿ ಮಾಡಿದ್ದೇನೆ. ಆದರೆ ಟಿಕೆಟ್ ನೀಡದೇ ಅನ್ಯಾಯ ಮಾಡಲಾಗಿದೆಎಂದು ಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ಮುಖಂಡರಾದ ಆರ್.ಕೆ. ಪಾಟೀಲ, ಶಿವಕುಮಾರ ನಾಯಿಕ, ಗುಂಡು ಪಾಟೀಲ, ಗುರುಸಿದ್ಧ ಮೂಡಲಗಿ, ರಾಮನಗೌಡ ಪಾಟೀಲ, ಷಣ್ಮುಖ ಕೆ.ಎಸ್. ಸುದ್ದಿಗೋಷ್ಠಿಯಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.