BJP ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ನಾಮಪತ್ರ ಸಲ್ಲಿಕೆ: ಆಸ್ತಿ ಎಷ್ಟಿದೆ?

Team Udayavani, Apr 19, 2023, 6:08 PM IST

1-sadssad

ಮೂಡಲಗಿ : ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಬುಧವಾರ ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು.

ತಹಶೀಲ್ದಾರ ಕಚೇರಿಗೆ ತೆರಳಿ ಚುನಾವಣಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ ಅವರಿಗೆ ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದರು. ಅತ್ಯಂತ ಸರಳವಾಗಿ ತಮ್ಮ ನಾಲ್ವರು ಸೂಚಕರೊಂದಿಗೆ ಒಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರಭಾ ಶುಗರ ನಿರ್ದೇಶಕರಾದ ಬಸಗೌಡ ಪಾಟೀಲ, ಕೆಂಚನಗೌಡ ಪಾಟೀಲ, ಜಿಪಂ ಮಾಜಿ ಸದಸ್ಯರಾದ ಡಾ.ರಾಜೇಂದ್ರ ಸಣ್ಣಕ್ಕಿ, ಶಂಕರ ಬಿಲಕುಂದಿ ಅವರು ಉಪಸ್ಥಿತರಿದ್ದರು.

35.69 ಕೋಟಿ ರೂ ಆಸ್ತಿ ಒಡೆಯ

ಅರಭಾವಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ತಮ್ಮ ಸಲ್ಲಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಒಟ್ಟು 35,69,92,186 ರೂ.ಗಳ ಒಡೆಯರಾಗಿದ್ದು, ಇವರ ಹೆಸರಿನಲ್ಲಿ ಯಾವುದೇ ಸಾಲವಿಲ್ಲ. ಬಾಲಚಂದ್ರ ಜಾರಕಿಹೊಳಿ ಬಳಿ 8,55,777 ರೂ. ನಗದು ಹಣ ಇದೆ.1.50 ಕೋಟಿ ರೂ.ಗಳ ಎಫ್.ಡಿ ಇದೆ. ಉಳಿತಾಯ ಖಾತೆಗಳಲ್ಲಿ 62,15,688 ರೂ. ಜಮಾ ಇದೆ. 34,45,541 ರೂ ಎನ್‌ಎಸ್‌ಎಸ್ ಪೋಸ್ಟಲ್ ಸೇವಿಂಗ್ಸ್ ಇನ್ಸೂರನ್ಸ್ ಇದ್ದು, 10,97,862 ರೂ. ಮೌಲ್ಯದ ಹುಂಡೈ ಐ20 ಅಸ್ಟಾ ಕಾರ್ ಹೊಂದಿದ್ದಾರೆ. 92,57,810 ರೂ. ಮೌಲ್ಯದ
1510 ಗ್ರಾಂ ಚಿನ್ನವಿದ್ದರೆ, 8,14,100 ರೂ. ಮೌಲ್ಯದ10 ಕೆಜಿ ಬೆಳ್ಳಿ ಇದೆ. 31,13,85,052 ರೂ. ಮೌಲ್ಯದ ಕೃಷಿ, ಕೃಷಿಯೇತರ ಭೂಮಿ ಹಾಗೂ ವಾಸಿಸುವ ಮನೆ ಸೇರಿದೆ. ಬಾಲಚಂದ್ರ ಜಾರಕಿಹೊಳಿ ಅವರು 1,29,30,703 ರೂ.ಗಳನ್ನು ಬೇರೆಯವರಿಗೆ ಸಾಲವನ್ನಾಗಿ ನೀಡಿದ್ದಾರೆ.

ಕಳೆದ ೨೦೧೮ ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚುನಾವಣಾಧಿಕಾರಿಗಳಿಗೆ ಸಲ್ಲಿಸಿದ ಆಸ್ತಿ ವಿವರ ಗಮನಿಸಿದರೆ ಈ ಬಾರಿ ಬಾಲಚಂದ್ರ ಜಾರಕಿಹೊಳಿ ಅವರ ಆಸ್ತಿಯಲ್ಲಿ ಏರಿಕೆ ಕಂಡುಬಂದಿದೆ. ಕಳೆದ ಚುನಾವಣೆಯಲ್ಲಿ 19,35,70,979 ರೂ.ಗಳ ಆಸ್ತಿಯನ್ನು ತೋರಿಸಿದ್ದು ಈ ಸಲ35,69,92,186 ರೂ. ಸಲ್ಲಿಸಿದ್ದಾರೆ. ಚರಾಸ್ತಿ ಮತ್ತು ಸ್ಥಿರಾಸ್ತಿಯಲ್ಲಿ ಯಾವುದೇ ಬದಲಾವಣೆಯಾಗದಿದ್ದರೂ, ಈಗಿನ ಮಾರುಕಟ್ಟೆ ಬೆಲೆ ಹೆಚ್ಚಳವಾಗಿದ್ದರಿಂದ ಇವರ ಆಸ್ತಿ ಮೌಲ್ಯ16,34,21,207 ರೂ. ಹೆಚ್ಚಳವಾದಂತಾಗಿದೆ.

ಪಕ್ಷೇತರ ಅಭ್ಯರ್ಥಿಯೊಂದಿಗೆ ಉಭಯ ಕುಶಲೋಪರಿ

ಉಮೇದುವಾರಿಕೆ ಸಲ್ಲಿಸಿ ಜಾರಕಿಹೊಳಿ ಅವರು ಹೊರಬರುತ್ತಿದ್ದಂತೆಯೇ ಪಕ್ಷೇತರ ಅಭ್ಯರ್ಥಿ ಭೀಮಪ್ಪ ಗಡಾದ ಅವರು ಎದುರಾದರು. ರಾಜಕೀಯ ಮರೆತು ಪರಸ್ಪರ ಕೈ ಮುಗಿಯುವ ಮೂಲಕ ಕುಶಲೋಪರಿ ವಿಚಾರಿಸಿದರು. ನಗುಮುಖದಿಂದಲೇ ಬಾಲಚಂದ್ರ ಜಾರಕಿಹೊಳಿ ಅವರಿಗೆ ಗಡಾದ ಎದುರಾದಾಗ ನಮಗೂ ಒಳ್ಳೆಯದಾಗಲಿ. ನಿಮಗೂ ಒಳ್ಳೆಯದಾಗಲಿ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು. ಈ ಅಪರೂಪದ ಘಟನೆಗೆ ಕಾರ್ಯಕರ್ತರು ಸಾಕ್ಷಿಯಾದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿ: 12 ತಾಸು ಈಜಿ ತಾಯಿ-ಮಗ ದಾಖಲೆ

ಬೆಳಗಾವಿ: 12 ತಾಸು ಈಜಿ ತಾಯಿ-ಮಗ ದಾಖಲೆ

Jaya-Swamiji

Reservation: ಬೆಳಗಾವಿಯಲ್ಲಿ ಸೆ.22ಕ್ಕೆ ಲಿಂಗಾಯತ ಪಂಚಮಸಾಲಿ ವಕೀಲರ ಬೃಹತ್ ಸಮಾವೇಶ

Belagavi: ಸಾಲಬಾಧೆಯಿಂದ ಬೇಸತ್ತು ನೇಕಾರ ಆತ್ಮಹತ್ಯೆ…

Belagavi: ಸಾಲಬಾಧೆಯಿಂದ ಬೇಸತ್ತು ನೇಕಾರ ಆತ್ಮಹತ್ಯೆ…

Belagavi: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಎ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

Belagavi: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಎ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

Coat ಧರಿಸಿ ಕೋರ್ಟ್ ಗೆ ಆಗಮಿಸಿದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ

Missing Case; ಕೋಟ್ ಧರಿಸಿ ಕೋರ್ಟ್ ಗೆ ಆಗಮಿಸಿದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.