ಸಾರ್ವಭೌಮತ್ವ ವಿಚಾರ: ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ದೂರು
ಎಫ್‌ಐಆರ್ ದಾಖಲಿಸಿ ಅನುಕರಣೀಯ ದಂಡನಾತ್ಮಕ ಕ್ರಮ ಕೈಗೊಳ್ಳಿ...
Team Udayavani, May 8, 2023, 2:39 PM IST
ಬೆಂಗಳೂರು : ಕರ್ನಾಟಕದ ಪ್ರತಿಷ್ಠೆ, ಸಾರ್ವಭೌಮತ್ವ ಅಥವಾ ಸಮಗ್ರತೆಗೆ ಧಕ್ಕೆ ತರಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ಸೋಮವಾರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಅವರ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ನೀಡುವಂತೆ ಮನವಿ ಮಾಡಿದೆ.
ಶನಿವಾರ ಹುಬ್ಬಳ್ಳಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿಸೋನಿಯಾ ಅವರ ಭಾಷಣವನ್ನು ಉಲ್ಲೇಖಿಸಿ,6.5 ಕೋಟಿ ಕನ್ನಡಿಗರಿಗೆ ಬಲವಾದ ಸಂದೇಶವನ್ನು ಕಳುಹಿಸುತ್ತಾರೆ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡುವ ಚಿತ್ರಗಳನ್ನು ಸಹ ಪೋಸ್ಟ್ ಮಾಡಿ ‘ಕರ್ನಾಟಕದ ಪ್ರತಿಷ್ಠೆ, ಸಾರ್ವಭೌಮತ್ವ ಅಥವಾ ಸಮಗ್ರತೆಗೆ ಧಕ್ಕೆ ತರಲು ಯಾರಿಗೂ ಅವಕಾಶ ನೀಡುವುದಿಲ್ಲ’ ಎಂದು ಟ್ವೀಟ್ ನಲ್ಲಿ ಬರೆಯಲಾಗಿತ್ತು.
ಈ ಹೇಳಿಕೆಯನ್ನು “ಆಘಾತಕಾರಿ ಮತ್ತು ಸ್ವೀಕಾರಾರ್ಹವಲ್ಲ” ಎಂದು ಬಣ್ಣಿಸಿ ಕೇಂದ್ರ ಸಚಿವೆ,ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕಿ ಶೋಭಾ ಕರಂದ್ಲಾಜೆ ಅವರು ದೂರನ್ನು ದಾಖಲಿಸಿದ್ದು, ಗಾಂಧಿ ಅವರು ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆ ಮತ್ತು ಇಂತಹ ಹೇಳಿಕೆಯನ್ನು ನೀಡಿದ್ದಕ್ಕಾಗಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಇಸಿಗೆ ಮನವಿ ಮಾಡಿದ್ದಾರೆ. ಎಫ್‌ಐಆರ್ ದಾಖಲಿಸಲು ಮತ್ತು ಅನುಕರಣೀಯ ದಂಡನಾತ್ಮಕ ಕ್ರಮ ಕೈಗೊಳ್ಳಲು ನಿರ್ದೇಶನ ನೀಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಹೊಸ ಸೇರ್ಪಡೆ
Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.