BJP ಮುಂದಿನ ದಿನಗಳಲ್ಲಿ ಎಲ್ಲವೂ ಸರಿಯಾಗಲಿದೆ: ಬಾಲಚಂದ್ರ ಜಾರಕಿಹೊಳಿ

ಯಾರೂ ಪಕ್ಷ ಬಿಡುವ ಆತುರದ ತೀರ್ಮಾನ ಕೈ ಗೊಳ್ಳಬಾರದು...

Team Udayavani, Apr 13, 2023, 9:45 PM IST

1-sadsdsad

ಮೂಡಲಗಿ: ಬಿಜೆಪಿಯಿಂದ ಈಗಾಗಲೇ ಅಭ್ಯರ್ಥಿಗಳ ಪಟ್ಟಿಯು ಬಿಡುಗಡೆಗೊಂಡಿದ್ದು, ಟಿಕೆಟ್‌ ಮೇಲೆ ಕಣ್ಣಿಟ್ಟಿರುವ ಕೆಲವರಿಗೆ ಇದರಿಂದ ನಿರಾಸೆಯಾಗಿರಬಹುದು. ಮುಂದಿನ ದಿನಗಳಲ್ಲಿ ಎಲ್ಲವೂ ಸರಿಯಾಗಲಿದೆ. ಯಾರೂ ಪಕ್ಷ ಬಿಡುವ ಆತುರದ ತೀರ್ಮಾನ ಕೈ ಗೊಳ್ಳಬಾರದು ಎಂದು ಅರಭಾವಿ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿದರು.

ತಾಲೂಕಿನ ಕಲ್ಲೋಳ್ಳಿ ಪಟ್ಟಣದ ಬಸವಂತ ದಾಸನವರ ತೋಟದಲ್ಲಿ ಜರುಗಿದ ಮೂಡಲಗಿ, ನಾಗನೂರ, ಕಲ್ಲೋಳ್ಳಿ, ಅರಭಾವಿ ಪಟ್ಟಣಗಳ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಯು ಅಳೆದು- ತೂಗಿ ಎಲ್ಲ ಸಮುದಾಯಗಳ ಗೆಲ್ಲುವ ವ್ಯಕ್ತಿಗಳಿಗೆ ಮಣೆ ಹಾಕಿ ಸಮತೋಲನದಿಂದ ಪಕ್ಷದ ವರಿಷ್ಟರು ನಿರ್ಣಯ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.

ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಗೆಲ್ಲಬೇಕಿದೆ. ಬಿಜೆಪಿಯಿಂದ ಆಯ್ಕೆ ಮಾಡಬೇಕಿದೆ. ಜಿಲ್ಲೆಯ ಎಲ್ಲ ನಾಯಕರು ಒಂದಾಗಿ ಶ್ರಮಿಸಬೇಕು ಎಂದು ಸಲಹೆ ಮಾಡಿದರು.

ಟಿಕೆಟ್‌ ವಂಚಿತರಾದವರು ಯಾವುದೇ ಆತುರದ ತೀರ್ಮಾನ ಮಾಡಬೇಡಿ. ಈ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು.‌ರಾಜ್ಯದಲ್ಲಿ ಮತ್ತಷ್ಟು ಪ್ರಗತಿಪರ ಕಾರ್ಯಗಳು ಜರುಗಬೇಕು. ಜನರಿಗೆ ಉತ್ತಮ ಆಡಳಿತ ನೀಡಲು ನಮ್ಮ ಪಕ್ಷ ಸದಾ ಸಿದ್ಧವಿದೆ. ಕೆಲವರು ಅಸಮಾಧಾನಗೊಂಡವರು ಪಕ್ಷ ಬಿಡುವ ಯಾವುದೇ ತೀರ್ಮಾನ ಕೈ ಕೊಳ್ಳಬೇಡಿ. ಅಸಮಾಧಾನಿತರನ್ನು ಪಕ್ಷದ ನಾಯಕರು ಕರೆದು ಚರ್ಚೆ ನಡೆಸಲಿದ್ದಾರೆ. ಎಲ್ಲವೂ ಇಷ್ಟರಲ್ಲಿಯೇ ಸರಿಯಾಗಲಿದೆ ಎಂದು ಅವರು ತಿಳಿಸಿದರು.

ದೇವರು, ತಾಯಿ- ತಂದೆಯವರು ಹಾಗೂ ಜನರ ಆಶೀರ್ವಾದದಿಂದ ಪಕ್ಷವು ಮತ್ತೇ ಟಿಕೆಟ್‌ ನೀಡಿದೆ. ಆರನೇ ಬಾರಿ ಕ್ಷೇತ್ರದಿಂದ ಸ್ಪರ್ಧಿಸುವ ಅವಕಾಶ ನೀಡಿದೆ. ಅದಕ್ಕಾಗಿ ಪಕ್ಷದ ಎಲ್ಲ ನಾಯಕರಿಗೆ ಆಭಾರಿಯಾಗಿದ್ದೇನೆ ಎಂದು ಹೇಳಿದರು.

ನಮ್ಮ ವಿರುದ್ಧ ಯಾರೇ ಅಭ್ಯರ್ಥಿ ಆಗಲಿ. ಅವರನ್ನು ಹಗುರವಾಗಿ ನೋಡಬೇಡಿ. ಸಮರ್ಥವಾಗಿ ಎದರಿಸೋಣ. ಅಭಿವೃದ್ಧಿ ಒಂದೇ ನಮ್ಮ ಮೂಲ ಮಂತ್ರವಾಗಿರಲಿ ಎಂದು ಕಾರ್ಯಕರ್ತರಿಗೆ ತಿಳಿಸಿದರು.

ನಾವು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ನಮ್ಮ ಗೆಲುವಿಗೆ ಸಹಕಾರಿಯಾಗಲಿವೆ. ನಮ್ಮ ಜನೋಪಕಾರಿ ಕೆಲಸಗಳು ನಮ್ಮನ್ನು ಕೈ ಹಿಡಿಯಲಿವೆ. ಜನರ ಆಶೀರ್ವಾದದಿಂದ ಈ ಬಾರಿಯೂ 6 ನೇ ಸಲ ವಿಧಾನಸಭೆಗೆ ಪ್ರವೇಶ ಪಡೆಯುವುದಾಗಿ ಹೇಳಿದರು.

ಮುಹೂರ್ತ ನೋಡಿಕೊಂಡು ನಾಮ ಪತ್ರ ಸಲ್ಲಿಸುತ್ತೇನೆ. ಮೊದಲು ಕೇವಲ ಐದು ಜನರನ್ನು ಕರೆದುಕೊಂಡು ಸರಳವಾಗಿ ನಾಮಪತ್ರ ಸಲ್ಲಿಸುತ್ತೇನೆ. ಇನ್ನೊಂದು ಸಲ ಕ್ಷೇತ್ರದ ಕಾರ್ಯಕರ್ತರನ್ನು ಸೇರಿಸಿಕೊಂಡು ಚುನಾವಣಾಧಿಕಾರಿಗಳಿಗೆ ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸುವುದಾಗಿ ಅವರು ತಿಳಿಸಿದರು.

ರಾಜ್ಯದಲ್ಲಿ ನಮ್ಮ ಪಕ್ಷ ಮತ್ತೊಂದು ಸಲ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ನಾವು ಮಾಡಿರುವ ಜನಪ್ರಿಯ ಕೆಲಸಗಳು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ಕಾರ್ಯಕ್ರಮ ಗಳನ್ನು ಜನರಿಗೆ ಮುಟ್ಟಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು. ಪ್ರತಿ ಬೂತ್ ಮಟ್ಟದಿಂದ ನಮಗೆ ಮತ ಬೀಳಲು ಶ್ರಮಿಸಬೇಕು. ಕಾರ್ಯಕರ್ತರು ಈ ದಿಸೆಯಲ್ಲಿ ಮನಸು ಕೊಟ್ಟು ಕೆಲಸ ಮಾಡುವಂತೆ ಅವರು ಹೇಳಿದರು.

ಅಧ್ಯಕ್ಷತೆಯನ್ನು ಅರಭಾವಿ ಬಿಜೆಪಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ ವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ ಹಾಗೂ ಬಸವರಾಜ ಮಾಳೇದವರ ಮಾತನಾಡಿ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಈ ಬಾರಿಯೂ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಲೀಡ್ ನೀಡಿ ಆಯ್ಕೆ ಮಾಡಲು ನಾವೆಲ್ಲರೂ ಶ್ರಮಿಸೋಣ. ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ ಮಾಡಲು ಅವಕಾಶ ನೀಡಲು ಬಾಲಚಂದ್ರ ಜಾರಕಿಹೊಳಿ ಅವರು ಜಿಲ್ಲೆಯ ಅಭ್ಯರ್ಥಿಗಳ ಗೆಲುವಿಗೆ ಪ್ರಚಾರ ನಡೆಸಬೇಕು. ನಾವು ಅರಭಾವಿ ಕ್ಷೇತ್ರದಲ್ಲಿ ನಿಮ್ಮ ಪರವಾಗಿ ಪ್ರಚಾರ ಕಾರ್ಯ ಮಾಡಿ ನಿಮ್ಮನ್ನು ಆಯ್ಕೆ ಮಾಡಿ ಕಳುಹಿಸುತ್ತೇವೆ ಎಂದು ಇದೇ ಸಂದರ್ಭದಲ್ಲಿ ಕಾರ್ಯಕರ್ತರು ಅಭಯ ನೀಡಿದರು.

ಪ್ರಭಾ ಶುಗರ್ ನಿರ್ದೇಶಕರಾದ ಬಸಗೌಡ ಪಾಟೀಲ, ಕೆಂಚಗೌಡ ಪಾಟೀಲ, ಮೂಡಲಗಿ ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ, ಶಂಕರ್ ಬಿಲಕುಂದಿ, ಚಂದ್ರು ಬೆಳಗಲಿ, ಬಿ.ಬಿ.ದಾಸನವರ, ಸುಭಾಸ ಕುರಬೇಟ, ಲಾಲಸಾಬ ಸಿದ್ಧಾಪೂರ, ರಮೇಶ ಸಣ್ಣಕ್ಕಿ, ವಿಠ್ಠಲ ಪಾಟೀಲ, ಜಯಾನಂದ ಪಾಟೀಲ, ಬಿಜೆಪಿ ಪದಾಧಿಕಾರಿಗಳು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಪರಸಪ್ಪ ಬಬಲಿ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.