Chamarajanagar: ಸೋಮಣ್ಣ ಪರ ಕೆಲಸ ಮಾಡುತ್ತೇನೆ ಎಂದ ಜಿ. ನಾಗಶ್ರೀ ಪ್ರತಾಪ್

ಸಂತೋಷ್ ಜಿ ಕರೆ ಮಾಡಿದ್ದರು....15 ವರ್ಷಗಳಿಂದ ಕಳೆದುಕೊಂಡಿರುವ ಕ್ಷೇತ್ರ ಮತ್ತೆ ಬಿಜೆಪಿಗೆ ದೊರಕಬೇಕು...

Team Udayavani, Apr 16, 2023, 6:14 PM IST

1-asdsdasd

ಚಾಮರಾಜನಗರ: ಪಕ್ಷ ಹಾಗೂ ಕಾರ್ಯಕರ್ತರ ಹಿತದೃಷ್ಟಿಯಿಂದ, ಕ್ಷೇತ್ರ ಮತ್ತೆ ಬೇರೆಯವರ ಕೈಗೆ ಹೋಗಬಾರದು. 15 ವರ್ಷಗಳಿಂದ ಕ್ಷೇತ್ರ ಕಳೆದುಕಂಡಿದ್ದೇವೆ. ಹಾಗಾಗಿ ಇಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂಬ ಉದ್ದೇಶದಿಂದ ಚಾಮರಾಜನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಪರವಾಗಿ ಕೆಲಸ ಮಾಡುತ್ತೇನೆ ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಜಿ. ನಾಗಶ್ರೀ ಪ್ರತಾಪ್ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಎಂಟು ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯವಾಗಿ ಕೆಲಸ ನಿರ್ವಹಿಸಿಕೊಂಡು ಬಂದಿದ್ದೇನೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದಿಂದ ಟಿಕೆಟ್ ಕೇಳಿದ್ದೆ. ಆಗಲೂ ಟಿಕೆಟ್ ಕೈತಪ್ಪಿತ್ತು. ಟಿಕೆಟ್ ತಪ್ಪಿದಾಗಲೂ ವಿಧಾನಸಭೆ, ಲೋಕಸಭೆ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ, ಗ್ರಾಮ ಪಂಚಾಯಿತಿ, ಚಾಮುಲ್, ಕೊಳ್ಳೇಗಾಲ ನಗರಸಭೆ ಉಪ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಸಕ್ರಿಯವಾಗಿ ಕೆಲಸ ಮಾಡಿದ್ದೇನೆ. ಪಕ್ಷದ ಸಂಘಟನೆಯ ಜೊತೆಗೆ ಜನಪರ ಕೆಲಸಗಳನ್ನು ಸಹ ಮಾಡುತ್ತಿದ್ದೇನೆ ಎಂದರು.

2023ರ ವಿಧಾನಸಭಾ ಚುನಾವಣೆಯಲ್ಲಿ ಚಾ.ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಬಹುದೆಂಬ ಆಶಾಭಾವನೆ ಇಟ್ಟುಕೊಂಡಿದ್ದೆ. ಹೆಣ್ಣು ಮಗಳು ರಾಜಕಾರಣದಲ್ಲಿ ತೊಡಗಿಕೊಂಡು ಕೆಲಸ ಮಾಡುವುದು ಅಷ್ಟು ಸುಲಭದ ಕೆಲಸವಲ್ಲ. ಕಾರ್ಯಕರ್ತರ ಬೆಂಬಲದಿಂದ ಸಂಘಟನೆ ಮಾಡಿದ್ದೇನೆ. ಆದರೆ ಈ ಬಾರಿಯೂ ನನಗೆ ಟಿಕೆಟ್ ಸಿಗಲಿಲ್ಲ. ಇದರಿಂದ ನನಗೆ ಬಹಳ ನೋವಾಯಿತು. ಆದರೆ ಬಂಡಾಯವಾಗಿ ಸ್ಪರ್ಧಿಸಬೇಕೆಂಬ ಯೋಚನೆ ಕನಸು ಮನಸಿನಲ್ಲೂ ಬಂದಿರಲಿಲ್ಲ. ನನಗೆ ಟಿಕೆಟ್ ದೊರಕಬಹುದೆಂದು ನನ್ನ ಬೆಂಬಲಿಗರು, ಹಿತೈಷಿಗಳು ಬಹಳ ಆಶಾಭಾವನೆ ಇಟ್ಟುಕೊಂಡಿದ್ದರು. ಟಿಕಟ್ ದೊರಕದ ಕಾರಣ ಅವರಿಗೂ ಬಹಳ ನೋವಾಯಿತು. ಬಂಡಾಯವಾಗಿ ಸ್ಪರ್ಧಿಸಿ ಎಂದು ಅನೇಕ ಬೆಂಬಲಿಗರು ಒತ್ತಾಯ ಮಾಡಿದರು. ಆ ಪರಿಸ್ಥಿತಿಯಲ್ಲಿ ನಾನು ಏನೂ ಹೇಳಲಿಲ್ಲ. ಬೆಂಬಲಿಗರು ತಾವೇ ಸಭೆ ಆಯೋಜಿಸಿದರು. ಸಭೆಗೆ ಬರಲೇಬೇಕು ಎಂದು ಪಟ್ಟು ಹಿಡಿದರು. ನಿರ್ಧಾರ ತೆಗೆದುಕೊಳ್ಳುವ ಸ್ವಾತಂತ್ರ್ಯ ನನಗೆ ಬಿಡಬೇಕು ಎಂಬ ಷರತ್ತಿನೊಂದಿಗೆ ಸಭೆಗೆ ಹಾಜರಾದೆ. ಟಿಕೆಟ್ ದೊರಕದಿದ್ದರೂ ನನ್ನನ್ನು ಬೆಂಬಲಿಸಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಭೆಗೆ ಆಗಮಿಸಿದ್ದರು. ಆಗಲೂ ಎರಡು ದಿನ ಕಾಲಾವಕಾಶ ಕೇಳಿದ್ದೆ. ಅದೇ ದಿನ ಸಚಿವ ವಿ. ಸೋಮಣ್ಣನವರು ನಮ್ಮ ಮನೆಗೆ ಬಂದಿದ್ದಾಗಲೂ ಎರಡು ದಿನ ಕಾಲಾವಕಾಶ ಕೇಳಿದ್ದೆ ಎಂದರು.

ಪಕ್ಷ ಮುಖ್ಯ
ವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷಕ್ಕಿಂತ ದೇಶ ಮುಖ್ಯ ಎಂದು ಪಕ್ಷ ನನಗೆ ಹೇಳಿಕೊಟ್ಟಿದೆ. ಪಕ್ಷ ನನಗೆ ತಾಯಿ ಇದ್ದಂತೆ. ಆ ಪಕ್ಷವನ್ನು ನಂಬಿ ಲಕ್ಷಾಂತರ ಕಾರ್ಯಕರ್ತರಿದ್ದಾರೆ. ನಮ್ಮ ಆಸೆ-ಆಕಾಂಕ್ಷೆಗಳು ಬಹಳಷ್ಟು ಇವೆ. ದಿನ ಬೆಳಗಾದರೆ ಹೊಸ ಆಶಾಭಾವನೆಗಳನ್ನು ಇಟ್ಟುಕೊಂಡಿರುತ್ತೇವೆ. ನಮ್ಮ ತಂದೆಯವರ ಆಸೆ ಪೂರೈಸಬೇಕೆಂದು ಹೋರಾಟ ನಡೆಸಿದೆ. ಆದರೆ ಪಕ್ಷ ತನ್ನದೇ ಆದ ಉದ್ದೇಶದಿಂದ ತೀರ್ಮಾನ ಕೈಗೊಂಡಿದೆ . ಅದಕ್ಕೆ ಬದ್ಧಳಾಗಿದ್ದೇನೆ ಎಂದು ಅವರು ಹೇಳಿದರು.

15 ವರ್ಷಗಳಿಂದ ಕ್ಷೇತ್ರದಲ್ಲಿ ಪಕ್ಷ ಅಧಿಕಾರ ಕಳೆದುಕೊಂಡಿದೆ. ಉತ್ತಮ ಜನಪ್ರತಿನಿಧಿಗಳ ಕೊರತೆಯಿದೆ. ಹಾಗಾಗಿ ನಾನು ಬಿಜೆಪಿಯ ಅಧಿಕೃತ ಅಭ್ಯರ್ಥಿಯ ಪರ ಕೆಲಸ ಮಾಡುತ್ತೇನೆ. ಮತ್ತೆ ಸಣ್ಣಪುಟ್ಟ ತಪ್ಪುಗಳಿಂದ ಕ್ಷೇತ್ರ ಕಳೆದುಕೊಳ್ಳಬಾರದು. ಇಲ್ಲಿ ಪಕ್ಷ ಅಧಿಕಾರಕ್ಕೆ ಬರಬೇಕು. ಅಭಿವೃದ್ಧಿಯ ದೃಷ್ಟಿಯಿಂದ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸೋಣ ಎಂದು ನಾಗಶ್ರೀ ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಮುಖಂಡ ಉಡಿಗಾಲ ಆರ್. ಕುಮಾರಸ್ವಾಮಿ, ಚಾಮುಲ್ ನಿರ್ದೇಶಕ ಎಚ್.ಎಸ್. ಬಸವರಾಜು, ಎನ್. ಬಸವನಾಯಕ, ಎಪಿಎಂಸಿ ಮಾಜಿ ನಿರ್ದೇಶಕ ಎಸ್. ಮಹೇಶ್, ರಾಮಸಮುದ್ರ ಪ್ರಸನ್ನ, ಗ್ರಾಪಂ. ಮಾಜಿ ಸದಸ್ಯ ಚಿಕ್ಕಮಹದೇವೇಗೌಡ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಟಿಕೆಟ್ ದೊರಕದ ಕಾರಣ ತುಂಬಾ ನೋವಾಯಿತು. ಹಾಗಾಗಿ ಆ ಸಂದರ್ಭದಲ್ಲಿ ಯಾವ ಪ್ರತಿಕ್ರಿಯೆ ನೀಡಲೂ ನನಗೆ ಮನಸ್ಸಾಗಲಿಲ್ಲ. ಮೌನವಾಗೇ ಉಳಿದೆ. ಬಿಜೆಪಿ ರಾಷ್ಟ್ರೀಯ ಮುಖಂಡರಾದ ಸಂತೋಷ್ ಜಿ ಕರೆ ಮಾಡಿದ್ದರು. ಟಿಕೆಟ್ ದೊರಕದ ಕಾರಣ ನಿನಗೆ ನೋವಾಗಿರುವುದು ಸಹಜ. ನೋವಿನಿಂದ ಹೊರ ಬಂದು ಪಕ್ಷದ ಪರ ಕೆಲಸ ಮಾಡು. ಪಕ್ಷದ ಸಿದ್ದಾಂತಗಳಿಗೆ ಬದ್ಧಳಾಗಿ ಪಕ್ಷದ ಕಾರ್ಯಕ್ರಮಗಳಲ್ಲಿ ತೊಡಗಿಕೋ ಎಂದು ಅವರು ಸಲಹೆ ನೀಡಿದರು ಎಂದು ನಾಗಶ್ರೀ ತಿಳಿಸಿದರು.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.