ಸಿದ್ದುಗೆ ಸುಸ್ತು ಹೊಡೆಸಿದ ಉಪ ಚುನಾವಣೆ
Team Udayavani, Mar 1, 2023, 5:22 AM IST
ಮೈಸೂರು: ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ 2006ರಲ್ಲಿ ನಡೆದ ಉಪ ಚುನಾವಣೆಯನ್ನು ನೆನಪಿಸಿದರೆ ಸಾಕು, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಈಗಲೂ ಸುಸ್ತು ಹೊಡೆಯುತ್ತಾರೆ. ಸಾಕಪ್ಪ ಸಾಕು ಉಪ ಚುನಾವಣೆಯ ಸಹವಾಸ ಎನ್ನುತ್ತಾರೆ.
ಸಿದ್ದರಾಮಯ್ಯ ಅವರು 2006ರಲ್ಲಿ ಜೆಡಿಎಸ್‌ನಿಂದ ಉಚ್ಛಾಟನೆಯಾದ ಅನಂತರ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿ ಉಪ ಚುನಾವಣೆ ಎದುರಿಸಿದರು. ಆಗ ರಾಜ್ಯದಲ್ಲಿ ಜೆಡಿಎಸ್‌ನ ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರೆ ಬಿಜೆಪಿಯ ಬಿ.ಎಸ್.ಯಡಿಯೂರಪ್ಪ ಉಪ ಮುಖ್ಯಮಂತ್ರಿ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್, ಬಿಜೆಪಿ ಸೇರಿ ಜೆಡಿಎಸ್‌ನಿಂದ ಶಿವಬಸಪ್ಪ ಅವರನ್ನು ಕಣಕ್ಕೆ ಇಳಿಸಿತು. ಶಿವಬಸಪ್ಪ ಅವರು ಕ್ಷೇತ್ರದಲ್ಲಿ ಅಷ್ಟಾಗಿ ಮತದಾರರಿಗೆ ಪರಿಚಯವಿರಲಿಲ್ಲ. ಆಗ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರಕಾರ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರ ಸೋಲಿಗೆ ಪಣತೊಟ್ಟು ಕೆಲಸ ಮಾಡಿತು. ಸಿದ್ದರಾಮಯ್ಯ ಅವರು ಕೊನೆಯ ಸುತ್ತಿನಲ್ಲಿ 257 ಮತಗಳ ಕೂದಲೆಳೆಯ ಅಂತರದಲ್ಲಿ ಜಯ ಸಾಧಿಸಿ ನಿಟ್ಟುಸಿರುಬಿಟ್ಟರು. ರಾಜಕೀಯವಾಗಿ ಪುನರ್ಜನ್ಮ ಪಡೆದರು. ಈ ಉಪ ಚುನಾವಣೆ ದೇಶದ ಗಮನ ಸೆಳೆದಿತ್ತು.
ವಿಶೇಷವೆಂದರೆ ಇದೇ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರು 1983ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಇದೇ ಕ್ಷೇತ್ರದಿಂದಲೇ ಗೆದ್ದು ರಾಜಕೀಯ ಆರಂಭಿಸಿದ್ದರು. 1983ರಿಂದ 2006ರ ವರೆಗೆ ಏಳು ಬಾರಿ ವಿಧಾನಸಭೆ ಚುನಾವಣೆ ನಡೆದಿದ್ದು ಇದರಲ್ಲಿ ಐದು ಬಾರಿ ಸಿದ್ದರಾಮಯ್ಯ ಆಯ್ಕೆಯಾಗಿದ್ದಾರೆ. ಎರಡು ಬಾರಿ ಸೋತಿದ್ದಾರೆ. ಅಲ್ಲದೆ 2018ರಲ್ಲಿ ಮತ್ತೆ ಇಲ್ಲಿಂದಲೇ ಸ್ಪರ್ಧಿಸಿ, ಸೋತರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.