karnataka polls 2023; ತವರಿನಲ್ಲಿ ಸಿಎಂ ಬೊಮ್ಮಾಯಿ ರಣಕಹಳೆ
ಒಂದೇ ದಿನ ಮೂರು ಕ್ಷೇತ್ರದಲ್ಲಿ ಸಂಚಾರ ; ಜಯ ವಾಹಿನಿ ರೋಡ್ ಶೋ
Team Udayavani, Apr 25, 2023, 6:00 AM IST
ಹಾವೇರಿ: ವಿಧಾನಸಭೆ ಚುನಾವಣೆಗೆ ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಜಿಲ್ಲೆಯಲ್ಲಿ ಸೋಮವಾರ ಅಬ್ಬರದ ಚುನಾವಣಾ ಪ್ರಚಾರ ಆರಂಭಿಸಿದ ಸಿಎಂ ಬಸವರಾಜ ಬೊಮ್ಮಾಯಿ ಒಂದೇ ದಿನ ಮೂರು ಕ್ಷೇತ್ರದಲ್ಲಿ ಸಂಚರಿಸಿ ಜಯ ವಾಹಿನಿ ರೋಡ್ ಶೋ ನಡೆಸುವ ಮೂಲಕ ಚುನಾವಣಾ ರಣಕಹಳೆ ಮೊಳಗಿಸಿದರು.
ಸೋಮವಾರ ಬೆಳಗ್ಗೆ ರಾಣಿಬೆನ್ನೂರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣಕುಮಾರ ಪೂಜಾರ ಪರ ರೋಡ್ ಶೋ, ಸಾರ್ವಜನಿಕ ಸಭೆ ನಡೆಸಿದರು. ಮಧ್ಯಾಹ್ನ 1 ಗಂಟೆಗೆ ಹಾವೇರಿ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗವಿಸಿದ್ದಪ್ಪ ದ್ಯಾಮಣ್ಣನವರ ಪರ ರೋಡ್ ಶೋ ಹಾಗೂ ಸಾರ್ವಜನಿಕರ ಸಭೆ ನಡೆಸಿದ ಬಳಿಕ ಸ್ವಕ್ಷೇತ್ರ ಶಿಗ್ಗಾವಿಯ ಬಂಕಾಪುರ, ಸವಣೂರು ಪಟ್ಟಣದಲ್ಲಿ ರೋಡ್ ಶೋ, ಸಾರ್ವಜನಿಕರ ಸಭೆ ನಡೆಸಿದರು. ಮೂರು ಕ್ಷೇತ್ರಗಳಲ್ಲಿ ಜನರ ಅಭಿಮಾನದ ಹೂಮಳೆ ಯಲ್ಲಿ ಮಿಂದೆದ್ದರು. ಎಲ್ಲ ಕಡೆಗಳಲ್ಲೂ ಕಾರ್ಯಕರ್ತರು ಹಾಗೂ ಬೆಂಬಲಿಗರಿಂದ ಅದ್ಧೂರಿ ಸ್ವಾಗತ ದೊರೆಯಿತು. “ಮುಂದಿನ ಸಿಎಂ ಬಸವರಾಜ ಬೊಮ್ಮಾಯಿ’ ಎಂಬ ಘೋಷಣೆಗಳು ಮೊಳಗಿದವು.
ಹಾವೇರಿಯ ಗಾಂಧಿ ವೃತ್ತದಲ್ಲಿ ಮಾತನಾ ಡಿದ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಜೆ.ಎಚ್. ಪಾಟೀಲ, ಮಾಜಿ ಸಚಿವರಾದ ಸಿ.ಎಂ.ಉದಾಸಿ ಹಾವೇರಿ ಜಿಲ್ಲಾ ಕೇಂದ್ರ ಮಾಡಿದ್ದಾರೆ. ಕಾಂಗ್ರೆಸ್ಸಿಗರ ಕೈಯಲ್ಲಿ ಅಧಿಕಾರ ಇದ್ದರೂ ಜಿಲ್ಲೆ ರಚಿಸಲಿಲ್ಲ. ಹಾವೇರಿ ಸಮಗ್ರ ಅಭಿವೃದ್ಧಿ ಮಾಡಿದ್ದು ಬಿ.ಎಸ್. ಯಡಿಯೂರಪ್ಪ. ಯುಟಿಪಿ ಯೋಜನೆ ಮೂಲಕ ಹಿರೇಕೆರೂರ, ಬ್ಯಾಡಗಿ, ರಾಣಿಬೆ ನ್ನೂರ, ಹಾವೇರಿ ತಾಲೂಕು ಸೇರಿ ಲಕ್ಷ ಎಕರೆಗೆ ನೀರಾವರಿ ಕಲ್ಪಿಸಿದ್ದೇವೆ. ನೂರಾರು ಕೆರೆ ತುಂಬಿಸಿದ್ದೇವೆ. ಹಾವೇರಿ ಯಲ್ಲಿ ಎಂಜಿನಿ ಯರಿಂಗ್ ಕಾಲೇಜ್, ಮೆಡಿಕಲ್ ಕಾಲೇಜು ಮಂಜೂರು ಮಾಡಿದ್ದೇವೆ ಎಂದರು.
ಕಾಂಗ್ರೆಸ್ ಹಾವೇರಿ ಜಿಲ್ಲೆಗೆ ಅನ್ಯಾಯ, ಜನರಿಗೆ ಮೋಸ, ಯೋಜನೆಗಳಿಗೆ ದ್ರೋಹ ಮಾಡಿದೆ. ಬಿಜೆಪಿ ಸರಕಾರದ ಅವಧಿಯಲ್ಲಿ ಹಾವೇರಿ ಜಿಲ್ಲೆ ಅಭಿವೃದ್ಧಿ ಆಗಿದೆ. ಇನ್ನಷ್ಟು ಯೋಜನೆಗಳು ಬರಬೇಕಾದರೆ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕು. ಬರೀ ಭಾಷಣದಿಂದ ಸಾಮಾಜಿಕ ನ್ಯಾಯ ಸಿಗಲ್ಲ. ನಾವು ಎಸ್ಸಿ-ಎಸ್‌ಟಿಗೆ ಮೀಸಲಾತಿ ಹೆಚ್ಚಿಸಿದ್ದೇವೆ. ಬಹುದಿನದ ಬೇಡಿಕೆಯಾದ ಒಳಮೀಸಲಾತಿ ಕೊಟ್ಟಿದ್ದೇವೆ. ನಾನು ಓಡಿ ಹೋಗುವ ಸಿಎಂ ಅಲ್ಲ. ಮೀಸಲಾತಿ ಹೆಚ್ಚಿಸಿ ಕಾನೂನು ರಚಿಸಿ ಕೇಂದ್ರಕ್ಕೆ ಕಳುಹಿಸಿದ್ದೇವೆ. ಹೀಗಾಗಿ ಮೇ 10ರಂದು ಕಮಲಕ್ಕೆ ವೋಟ್ ಹಾಕಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲು ಬೆಂಬಲಿಸಿ ಎಂದರು.
ಸಂಸದ ಶಿವಕುಮಾರ ಉದಾಸಿ, ಬಿಜೆಪಿ ಅಭ್ಯರ್ಥಿ ಗವಿಸಿದ್ದಪ್ಪ ದ್ಯಾಮಣ್ಣವರ, ಬಿಜೆಪಿ ಮುಖಂಡ ಸಿ. ನಾರಾಯಣಸ್ವಾಮಿ, ಜಿಲ್ಲಾ ಧ್ಯಕ್ಷ ಸಿದ್ದರಾಜ ಕಲಕೋಟಿ ಇತರರಿದ್ದರು.
“ಜಿಲೆಬಿ’ ಫೈಲ್ ಬಂದ್ರೆ ಕಿತ್ತು ಒಗೀರಿ ಎನ್ನುತ್ತಿದ್ದರು!
ಕಾಂಗ್ರೆಸ್ಸಿಗರು ಉತ್ತರ ಕರ್ನಾಟಕ ವಿರೋಧಿಗಳು. ಕಾಂಗ್ರೆಸ್ ಅಧಿಕಾರದಲ್ಲಿ ದ್ದಾಗ ಉತ್ತರ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷ ಮಾಡಿದರು. ಕಾಂಗ್ರೆಸ್ ಅಧಿಕಾ ರ ದಲ್ಲಿದ್ದಾಗ ಸಿಎಂಗೆ ಕೆಲ ಫೈಲ್ ಬರುತ್ತಿ ದ್ದವು. ಅವುಗಳಿಗೆ “ಜಿಲೆಬಿ’ (ಜಿ-ಗೌಡ್ರು, ಲೆ-ಲಿಂಗಾಯತರು, ಬಿ-ಬ್ರಾಹ್ಮಣರು) ಎಂಬ ಹೆಸರಿಟ್ಟಿದ್ರು. ಜಿಲೆಬಿ ಫೈಲ್ ಬಂದ್ರೆ ಕಿತ್ತು ಒಗೀರಿ ಎನ್ನುತ್ತಿದ್ದರು ಎಂದು ಸಿಎಂ ಬೊಮ್ಮಾಯಿ ಹರಿಹಾಯ್ದರು.
25 ಸಾವಿರ ಮತಗಳ ಅಂತರದಲ್ಲಿ ಗೆಲ್ಲಿಸಿ
ಸ್ವತ್ಛ ಗಾಳಿ, ನೀರು, ವಿಚಾರ ಆಡಳಿತ ಬರಲಿ ಎಂಬ ಕಾರಣಕ್ಕೆ ಹೊಸ ಅಭ್ಯರ್ಥಿ ಗವಿಸಿದ್ದಪ್ಪ ದ್ಯಾಮಣ್ಣವರಿಗೆ ಟಿಕೆಟ್ ಕೊಟ್ಟಿದ್ದೇವೆ. ಹಾವೇರಿ ಜನ ಸತ್ಯ, ನ್ಯಾಯ, ಸರಳತೆ, ಸಜ್ಜನಿಕೆಗೆ ಬೆಲೆ ಕೊಡುತ್ತಾರೆ. ಹೀಗಾಗಿ ಬಿಜೆಪಿ ಅಭ್ಯರ್ಥಿ ಗವಿಸಿದ್ದಪ್ಪ ದ್ಯಾಮಣ್ಣವರ ಅವರಿಗೆ ಆಡಳಿತದಲ್ಲಿ ಅಪಾರ ಅನುಭವ ಹೊಂದಿದ್ದು, ನೀವು ದ್ಯಾಮಣ್ಣವರಿಗೆ ಹಾಕುವ ಒಂದೊಂದು ಮತವೂ ನನಗೇ ಹಾಕಿದಂತೆ. ಕಾರಣ ದ್ಯಾಮಣ್ಣನವರ ಅವರನ್ನು 25 ಸಾವಿರ ಮತಗಳ ಅಂತರದಲ್ಲಿ ಗೆಲ್ಲಿಸಬೇಕೆಂದು ಸಿಎಂ ಬೊಮ್ಮಾಯಿ ಮನವಿ ಮಾಡಿದರು.
ಸಮಾಜ ಒಡೆಯುವ ಕೆಲಸ ಮಾಡಿದ ಕಾಂಗ್ರೆಸ್ಸಿಗರು ಈಗ ಬಸವಕಲ್ಯಾಣಕ್ಕೆ ರಾಹುಲ್ ಗಾಂಧಿ ಕರೆದುಕೊಂಡು ಬಂದಿದ್ದಾರೆ. ಪಾಪ ರಾಹುಲ್‌ಗೆ ಬಸವಣ್ಣನವರು ಅಂದ್ರೆ ಯಾರು ಅಂತಾನೇ ಗೊತ್ತಿಲ್ಲ. ಬಸವಣ್ಣನ ತತ್ವಗಳಿಗೆ ಕಾಂಗ್ರೆಸ್ ವಿರುದ್ಧವಾಗಿದೆ. ದೇಶ ಒಡೆದವರು ಕಾಂಗ್ರೆಸ್ಸಿಗರು. ಒಡೆದು ಆಳುವ ನೀತಿ ಕಾಂಗ್ರೆಸ್ಸಿನದು. ಕಾಂಗ್ರೆಸ್ಸಿಗರು ಗ್ಯಾರೆಂಟಿ ಯೋಜನೆ ತಂದಿದ್ದಾರೆ. ಅನ್ನಭಾಗ್ಯ ಎನ್ನುವುದು ಚುನಾವಣೆ ಸ್ಟಂಟ್. ಚುನಾವಣೆ ಮುಗಿಯುವರೆಗೂ ಗ್ಯಾರೆಂಟಿ, ಆಮೇಲೆ ಅವು ಗಳಗಂಟಿ.
-ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.