ಕಾಂಗ್ರೆಸ್‌ 2ನೇ ಪಟ್ಟಿ ಆಯ್ಕೆ ಕಬ್ಬಿಣದ ಕಡಲೆ?

ಮೂಲ ವರ್ಸಸ್‌ ವಲಸಿಗ ಸಮಸ್ಯೆ ಉದ್ಭವವಾಗುವ ಆತಂಕ

Team Udayavani, Mar 29, 2023, 6:10 AM IST

ಕಾಂಗ್ರೆಸ್‌ 2ನೇ ಪಟ್ಟಿ ಆಯ್ಕೆ ಕಬ್ಬಿಣದ ಕಡಲೆ?

ಬೆಂಗಳೂರು: ಒಂದೆಡೆ ಬಣಗಳ ಹಗ್ಗಜಗ್ಗಾಟ, ಮತ್ತೂಂದೆಡೆ ಅದೇ ಬಣಗಳ ಬೆಂಬಲಿತ ಆಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ಉದ್ದ ವಾಗುತ್ತಿರುವುದರಿಂದ “ಕೈ’ ನಾಯಕರಿಗೆ ಎರಡನೇ ಅಭ್ಯರ್ಥಿಗಳ ಪಟ್ಟಿ ಅಕ್ಷರಶಃ ಕಬ್ಬಿಣದ ಕಡಲೆಯಾಗಿ ಪರಿಣಮಿಸುತ್ತಿದೆ.

ಉಳಿದ ನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಬಹುತೇಕ ಕಡೆ 3-4 ಆಕಾಂಕ್ಷಿಗಳಿದ್ದಾರೆ. ಒಬ್ಬರ ಆಯ್ಕೆ ಉಳಿದವರ ಮುನಿಸಿಗೆ ಕಾರಣವಾಗುತ್ತಿದೆ. ಇದು ಮುಂಬರುವ ಚುನಾವಣೆಯಲ್ಲಿ ಒಳ ಏಟು ಕೊಡುವ ಆತಂಕವೂ ಇದೆ. ಹಾಗಾಗಿ ಇದ್ದವರಲ್ಲಿ ಯಾರಿಗೆ ಮಣೆ ಹಾಕುವುದು ಹಾಗೂ ಯಾರನ್ನು ಕೈಬಿಡುವುದು ಎಂಬ ಜಿಜ್ಞಾಸೆ ಕಾಂಗ್ರೆಸ್‌ ಅನ್ನು ಕಾಡತೊಡಗಿದೆ. ಇದೆಲ್ಲದರ ಪರಿಣಾಮ ಎರಡನೇ ಪಟ್ಟಿ ಕಗ್ಗಂಟಾಗಿ ಉಳಿದಿದೆ.

ಅಭ್ಯರ್ಥಿಗಳ ಆಯ್ಕೆ ಅನಂತರ ಎದುರಾಗಬಹುದಾದ ಬಂಡಾಯ, ಪ್ರತಿರೋಧ, ಪಕ್ಷಾಂತರದಂತಹ ಪರಿಣಾಮಗಳನ್ನು ಅಳೆದು-ತೂಗಿ ಎರಡನೇ ಪಟ್ಟಿ ಸಿದ್ಧಪಡಿಸಲಾಗುತ್ತಿದೆ. ಇಲ್ಲಿ ಕಾಂಗ್ರೆಸ್‌ ಮುಂದೆ ಎರಡು ರೀತಿಯ ಟಾಸ್ಕ್ಗಳಿವೆ. ಒಂದು- 100 ಸೀಟುಗಳ ಪೈಕಿ ಕನಿಷ್ಠ 30-40 ಸೀಟುಗಳನ್ನು ಗೆಲ್ಲಲೇಬೇಕು ಎಂಬ ಗುರಿ. ಮತ್ತೂಂದು ಬಂಡಾಯ ಆಗದಂತೆ ನೋಡಿಕೊಳ್ಳು ವುದು. ಇದಕ್ಕಾಗಿ ನಿರೀಕ್ಷಿತ ಅತೃಪ್ತರಿಗೆ ಪಕ್ಷ ಅಧಿ ಕಾರಕ್ಕೆ ಬರುತ್ತಿದ್ದಂತೆ ನಿಗಮ- ಮಂಡಳಿಗಳ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳನ್ನು ತೋರಿಸಿ ಈಗಿನಿಂದಲೇ ಸಮಾಧಾನಗೊಳಿಸುವ ತಂತ್ರ ಅನುಸರಿಸಲಾಗುತ್ತಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

50 ಸೀಟುಗಳ ಆಯ್ಕೆ ಅಂತಿಮ?: “ನೂರರಲ್ಲಿ ಈಗಾಗಲೇ ಹೆಚ್ಚು-ಕಡಿಮೆ ಅರ್ಧಕ್ಕರ್ಧ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಂಡಿದೆ. ಉಳಿದ 50 ಸೀಟುಗಳ ಆಯ್ಕೆ ಪ್ರಕ್ರಿಯೆ ನಡೆದಿದೆ. ಮಾರ್ಚ್‌ 30ಕ್ಕೆ ಪಕ್ಷದ ಸಿಇಸಿ ಸಭೆ ನಡೆಯಲಿದೆ. ಇದಾದ ಅನಂತರ ಮೂರ್‍ನಾಲ್ಕು ದಿನಗಳಲ್ಲಿ ಅಂತಿಮಗೊಳ್ಳಲಿದೆ. ಎಪ್ರಿಲ್‌ ಮೊದಲ ವಾರದಲ್ಲಿ ಪಟ್ಟಿ ಬಿಡುಗಡೆ ಮಾಡುವ ಉದ್ದೇಶ ಇದೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಸಹಿತ ಹಲವು ನಾಯಕರ ಸಮನ್ವಯದೊಂದಿಗೇ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತಿದೆ. ಗೊಂದಲಕ್ಕೆ ಅವಕಾಶವೇ ಇರುವುದಿಲ್ಲ’ ಎಂದೂ ಮೂಲಗಳು ಸ್ಪಷ್ಟಪಡಿಸಿವೆ.

ಈ ಮಧ್ಯೆ ಬೆಳಗಾದರೆ ಬೇಷರತ್ತಾಗಿ ಒಂದೊಂದು ಕಡೆಯಿಂದ ಒಬ್ಬೊಬ್ಬ ನಾಯಕರು ಅಪಾರ ಬೆಂಬಲಿಗರೊಂದಿಗೆ ಕಾಂಗ್ರೆಸ್‌ ಸೇರಲು ಬರುತ್ತಿದ್ದಾರೆ. “ಕೈ’ ನಾಯಕರು ಕೂಡ ನಗು ಮೊಗದಿಂದ ಬರಮಾಡಿಕೊಳ್ಳುತ್ತಿದ್ದಾರೆ. ಮೇಲ್ನೋ ಟಕ್ಕೆ ಬೇಷರತ್ತು ಆಗಿದ್ದರೂ, ಈಗಿರುವ ಪಕ್ಷದಲ್ಲಿನ ಅತೃಪ್ತಿ ಹಾಗೂ ಹಲವು ನಿರೀಕ್ಷೆಗಳನ್ನು ಹೊತ್ತು ಕೊಂಡೇ ಅವರೆಲ್ಲ ಕಾಂಗ್ರೆಸ್‌ ಬಾಗಿಲು ತಟ್ಟುತ್ತಿರುವುದು ಗೊತ್ತಿರುವ ಸಂಗತಿ.

ಹೀಗೆ ಸೇರ್ಪಡೆಗೊಂಡವರಿಗೆ ಮಣೆ ಹಾಕಿದರೆ, ಈಗಾಗಲೇ ವರ್ಷದಿಂದ ಚುನಾವಣ ಅಖಾಡಕ್ಕೆ ಭೂಮಿಕೆ ಸಿದ್ಧಪಡಿಸಿಕೊಂಡಿರುವ ಮೂಲ ಕಾಂಗ್ರೆಸಿಗರಿಗೆ ಸಹಜವಾಗಿ ನಿರಾಸೆ ಉಂಟಾಗಲಿದೆ. ಆಗ ಅದು ಬಂಡಾ ಯದ ಕಿಡಿಹೊತ್ತಿಸುವ ಸಾಧ್ಯತೆ ಇದೆ. ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಇದನ್ನು ಕಾಣಬಹುದು. ಒಂದು ವೇಳೆ ಈ “ಅತಿಥಿ’ಗಳಿಗೆ ಮಣೆ ಹಾಕದಿದ್ದರೆ ತಟಸ್ಥವಾಗಿ ಉಳಿಯುವ ಸಾಧ್ಯತೆ ಇದೆ. ಆಗ ಪ್ರತಿನಿಧಿಸುವ ಸಮುದಾಯವೂ ಅವರನ್ನೇ ಹಿಂಬಾಲಿಸಬಹುದು. ಆಗಲೂ ಪಕ್ಷಕ್ಕೇ ತೊಂದರೆ. ಈ ಹಿನ್ನೆಲೆಯಲ್ಲಿ ಎರಡನೇ ಅಭ್ಯರ್ಥಿಗಳ ಪಟ್ಟಿಯು ಗಜಪ್ರಸವದಂತಾಗಿದೆ. ಅರಕಲಗೂಡಿನ ಜೆಡಿಎಸ್‌ ಶಾಸಕ ಎ.ಟಿ.ರಾಮಸ್ವಾಮಿ ಬೇಕೋ- ಬೇಡವೋ ಗೊಂದಲವಿದೆ. ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿ ವಿರುದ್ಧ ಸ್ಪರ್ಧೆಗೆ ಮಹಡಿ ಮನೆ ಸತೀಶ್‌, ತಮ್ಮಯ್ಯ, ಬಿ.ಎಚ್‌.ಹರೀಶ್‌, ಗಾಯತ್ರಿ ಶಾಂತೇಗೌಡ ಸಹಿತ ನಾಲ್ವರ ನಡುವೆ ಪೈಪೋಟಿ ನಡೆದಿದ್ದು ಯಾರು ಸೂಕ್ತ ಎಂಬ ತೀರ್ಮಾನಕ್ಕೆ ಬರಲು ಕಷ್ಟವಾಗುತ್ತಿದೆ. ಇತ್ತೀಚೆಗೆ ಬಿಜೆಪಿ ತೊರೆದು ಪಕ್ಷ ಸೇರಿದ ವಿ.ಎಸ್‌.ಪಾಟೀಲ್‌, ಮೋಹನ ಲಿಂಬಿಕಾಯಿ, ಬಾಬುರಾವ್‌ ಚಿಂಚನಸೂರ್‌ ಭವಿಷ್ಯ ಏನು ಎಂಬುದು ತೀರ್ಮಾನವಾಗಿಲ್ಲ.

ಇನ್ನು ಸೇರ್ಪಡೆಗೊಂಡವರು ಕಾಂಗ್ರೆಸ್‌ನಲ್ಲಿಯ ಯಾವ ಬಣದೊಂದಿಗೆ ಗುರುತಿಸಿಕೊಳ್ಳುತ್ತಾರೆ ಎಂಬು ದೂ ಕುತೂಹಲಕಾರಿ ಆಗಿದೆ. ಈ ಮೊದಲೇ ಸ್ಥಳೀ ಯವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರ ಬೆಂಬ ಲಿಗರ ಬಣಗಳಿವೆ. ಇವರಲ್ಲಿ ಯಾರೊಬ್ಬರೊ ಂದಿಗೆ ಗುರುತಿಸಿಕೊಂಡರೂ ಮತ್ತೂಬ್ಬರಿಗೆ ಮುನಿಸು.

-ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

4

Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್‌ ಪರಾರಿ!

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.