Congress-BJP 3ನೇ ಪಟ್ಟಿಗಿಲ್ಲ ಮುಕ್ತಿ; ಆಕಾಂಕ್ಷಿಗಳು ತುದಿಗಾಲಲ್ಲಿ
Team Udayavani, Apr 15, 2023, 7:20 AM IST
ಬೆಂಗಳೂರು: ಕ್ಷಣಕ್ಕೊಂದು ತಿರುವು ಪಡೆದು ಆಕಾಂಕ್ಷಿಗಳನ್ನು ತುದಿಗಾಲಲ್ಲಿ ನಿಲ್ಲುವಂತೆ ಮಾಡಿರುವ ಬಿಜೆಪಿ ಮತ್ತು ಕಾಂಗ್ರೆಸ್‌ನ ಟಿಕೆಟ್ ಹಂಚಿಕೆ ಪ್ರಹಸನಕ್ಕೆ ಶುಕ್ರವಾರವೂ ಮುಕ್ತಿ ಸಿಕ್ಕಿಲ್ಲ.
ಬಿಜೆಪಿಯ 12 ಕ್ಷೇತ್ರಗಳ ಮೂರನೇ ಪಟ್ಟಿ ಹಾಗೂ ಕಾಂಗ್ರೆಸ್‌ನ 58 ಕ್ಷೇತ್ರಗಳ ಮೂರನೇ ಪಟ್ಟಿ ಶುಕ್ರವಾರ ಹೊರಬೀಳುತ್ತದೆ ಎಂದು ಹೇಳಲಾಗಿತ್ತು. ಆದರೆ ಆಕಾಂಕ್ಷಿಗಳಿಗೆ ಶುಕ್ರವಾರ ಶುಭ ಸುದ್ದಿ ತರಲಿಲ್ಲ.
ಎರಡನೇ ಪಟ್ಟಿ ಹೊರಬಿದ್ದ ಮೇಲೆ ಬಿಜೆಪಿಯಲ್ಲಿ ಸ್ಫೋಟಗೊಂಡಿರುವ ಬಂಡಾಯದ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಟಿಕೆಟ್ ವಿಚಾರಕ್ಕೆ ಇನ್ನೂ ತೆರೆ ಬಿದ್ದಿಲ್ಲ. ಕೆ.ಎಸ್. ಈಶ್ವರಪ್ಪ ಅವರ ಶಿವಮೊಗ್ಗ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ನಿರ್ಧಾರವಾಗಿಲ್ಲ. ಉಳಿದಂತೆ ಅರವಿಂದ ಲಿಂಬಾವಳಿ, ಎಸ್.ಎ. ರಾಮದಾಸ್ ಅವರೂ ಕಾದು ಕುಳಿತಿದ್ದಾರೆ. ದ್ವಿಕ್ಷೇತ್ರದಿಂದ ಸ್ಪರ್ಧೆಗಿಳಿಯಲಿರುವ ವಿ. ಸೋಮಣ್ಣ ಅವರ ತವರು ಕ್ಷೇತ್ರ ಗೋವಿಂದರಾಜನಗರದ ಟಿಕೆಟ್ ಹಂಚಿಕೆ ಕಾಯ್ದಿಡಲಾಗಿದೆ. ಈ ರೀತಿ 12 ಕ್ಷೇತ್ರಗಳ ಟಿಕೆಟ್ ಹಂಚಿಕೆ ಬಿಜೆಪಿ ಬಾಕಿ ಉಳಿಸಿದೆ.
ಎ. 16ರ ಬಳಿಕ ಕೈ ಪಟ್ಟಿ
ಅತ್ತ ಎರಡು ಹಂತಗಳಲ್ಲಿ ಪಟ್ಟಿ ಬಿಡುಗಡೆ ಮಾಡಿ ನಮ್ಮಲ್ಲಿ ಅಷ್ಟೇನೂ ಬಂಡಾಯ ಇಲ್ಲ ಎಂದು ಬೀಗುತ್ತಿರುವ ಕಾಂಗ್ರೆಸ್‌ಗೆ 3ನೇ ಪಟ್ಟಿ ಸವಾಲಾಗಿದೆ. 58ರಲ್ಲಿ 30 ಹೆಸರು ಅಂತಿಮ ಆಗಿದೆ. ಇನ್ನೇನು ಪಟ್ಟಿ ಬಿಡುಗಡೆ ಮಾಡಬೇಕು ಎಂದು ಕಳೆದೆರಡು ದಿನಗಳಿಂದ ಕಾಂಗ್ರೆಸ್ ಹೇಳುತ್ತಿದೆ. ಆದರೆ ಪಟ್ಟಿಗೆ ಮುಕ್ತಿ ಸಿಕ್ಕಿಲ್ಲ. 28 ಕ್ಷೇತ್ರಗಳಲ್ಲಿ “ವಲಸೆ ವಿದ್ಯಾಮಾನ’ಗಳನ್ನು ಆಧರಿಸಿ ಪಟ್ಟಿ ಅಂತಿಮಗೊಳಿಸಲಾಗುವುದು ಎಂದು ಹೇಳಲಾಗುತ್ತಿದೆ. ಮತ್ತೂಂದೆಡೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎ. 16ರಂದು ಕೋಲಾರಕ್ಕೆ ಬರುತ್ತಿದ್ದು, ಅದರ ಬಳಿಕವಷ್ಟೇ 3ನೇ ಪಟ್ಟಿ ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.