ಬಿಜೆಪಿ ವಿರುದ್ಧ ಲಿಂಗಾಯತ ವಿರೋಧಿ ದಾಳ ಉರುಳಿಸಿದ ಕಾಂಗ್ರೆಸ್‌


Team Udayavani, Apr 18, 2023, 1:19 PM IST

ಬಿಜೆಪಿ ವಿರುದ್ಧ ಲಿಂಗಾಯತ ವಿರೋಧಿ ದಾಳ ಉರುಳಿಸಿದ ಕಾಂಗ್ರೆಸ್‌

ಬೆಂಗಳೂರು: ಕಾಂಗ್ರೆಸ್‌ “ಲಿಂಗಾಯತ ವಿರೋಧಿ’ ಎಂಬ ಕಳಂಕ ತೊಳೆದುಕೊಳ್ಳಲು ಮಾಜಿ ಸಿಎಂಗಳಾದ ಬಿಜೆಪಿಯ ಬಿ.ಎಸ್‌. ಯಡಿಯೂರಪ್ಪ, ಜಗದೀಶ್‌ ಶೆಟ್ಟರ್‌ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರ “ಕುರ್ಚಿ ತ್ಯಾಗ ಹಾಗೂ ಪಕ್ಷ ತ್ಯಾಗ’ ಪ್ರಕರಣಗಳನ್ನು ಮುಂದಿಟ್ಟುಕೊಂಡು ಬಿಜೆಪಿ ವಿರುದ್ಧ ಲಿಂಗಾಯತ ವಿರೋಧಿ ದಾಳ ಉರುಳಿಸಲು ಕೈಪಡೆ ಸಜ್ಜಾದಂತೆ ಕಾಣುತ್ತಿದೆ.

ಕಳೆದ ಒಂದು ವಾರದಿಂದ ಬಿಜೆಪಿಯಲ್ಲಿ ನಡೆ ಯುತ್ತಿರುವ ವಿದ್ಯಮಾನಗಳನ್ನು ಅವಲೋಕಿಸಿದರೆ ಸದ್ಯಕ್ಕೆ ಸ್ವಲ್ಪಮಟ್ಟಿಗೆ ಬಿಜೆಪಿಗೆ ಡ್ಯಾಮೇಜ್‌ ಆಗಿದೆ ಯೆನ್ನಬಹುದು. ಆದರೆ ಇದು ಕಾಂಗ್ರೆಸ್‌ಗೆ ಎಷ್ಟರ ಮಟ್ಟಿಗೆ ಲಾಭವಾಗಲಿದೆ ಎಂಬುದು ಕೈಪಡೆಯ ಹಿಡಿತಕ್ಕೆ ಸಿಕ್ಕಿಲ್ಲವಾದರೂ “ಲಾಭ’ ಖಂಡಿತ ಅಗಲಿದೆ ಎಂಬ ವಿಶ್ವಾಸದಲ್ಲಿದೆ. ಈ ರಾಜಕೀಯ ಪರಿಸ್ಥಿತಿಯನ್ನು ಲಾಭ ಮಾಡಿಕೊಳ್ಳಬೇಕೆಂಬುದೇ ಕಾಂಗ್ರೆಸ್‌ ಲೆಕ್ಕಾಚಾರ.

ಹೀಗಾಗಿ ಲಿಂಗಾಯತ ಸಮುದಾಯಕ್ಕೆ ಸೇರಿದ ಯಡಿಯೂರಪ್ಪ ಅವರನ್ನು ಬಿಜೆಪಿ ಬಲವಂತವಾಗಿ ಸಿಎಂ ಕುರ್ಚಿಯಿಂದ ಕೆಳಗಿಳಿಸಿದ ಪ್ರಕರಣ, ಜಗದೀಶ್‌ ಶೆಟ್ಟರ್‌ ಹಾಗೂ ಲಕ್ಷ್ಮಣ ಸವದಿ ಅವರಿಗೆ ಟಿಕೆಟ್‌ ಕೊಡದೆ ಪಕ್ಷದಿಂದ ಹೊರ ಹೋಗುವಂತಹ ಪರಿಸ್ಥಿತಿ ನಿರ್ಮಿಸಿದ್ದನ್ನು ರಾಜಕೀಯವಾಗಿ ಬಳಸಿಕೊಂಡ ಕಾಂಗ್ರೆಸ್‌ ಇದೊಂದು ರೀತಿ ಬಿಜೆಪಿಯಲ್ಲಿ ಲಿಂಗಾಯತ ನಾಯಕರ ದಮನ ಸರಣಿ ಆರಂಭ ಎಂಬ ಸಂದೇಶ ರವಾನಿಸುವಲ್ಲಿ ಯಶಸ್ವಿಯಾಗಿದೆ.

ಬಿಜೆಪಿಯಲ್ಲಿ ಲಿಂಗಾಯತರಿಗೆ ರಾಜಕೀಯ ಭವಿಷ್ಯವಿಲ್ಲವೆಂಬುದನ್ನು ಬಿಂಬಿಸಲು ಟಿಕೆಟ್‌ ವಂಚಿತರು, ಅಸಮಾಧಾನಿತರನ್ನು ಆಹ್ವಾನಿಸಿ ಪಕ್ಷಕ್ಕೆ ಕರೆತಂದು ಸದ್ಯಕ್ಕೆ ಕಾಂಗ್ರೆಸ್‌ “ರಾಜ ಮರ್ಯಾದೆ’ ಕೊಡುತ್ತಿರುವುದನ್ನು ನೋಡಿದರೆ ಚುನಾವಣೆ ಸಂದರ್ಭದಲ್ಲಿ ಇವರನ್ನು ಚೆನ್ನಾಗಿ ಬಳಸಿಕೊಳ್ಳಲು ಇದು ಕಾಂಗ್ರೆಸ್‌ಗೆ ಸಿಕ್ಕ ಪ್ರಬಲ ಅಸ್ತ್ರವೆಂದೇ ರಾಜ ಕೀಯ ವಲಯದಲ್ಲಿ ವ್ಯಾಖ್ಯಾನಿಸಲಾಗುತ್ತಿದೆ. ಬಿಜೆಪಿ ಮುರಿದ ಮನೆಯಾಗಿದ್ದು ಅದರ ಲಾಭ ಪಡೆಯುವ ನಿಟ್ಟಿನಲ್ಲಿ ಕಾಂಗ್ರೆಸ್‌ ಶೆಟ್ಟರ್‌, ಸವದಿ ಅವರ ಸೇರ್ಪಡೆಯನ್ನು ಯಶಸ್ವಿಯಾಗಿ ಮುಗಿಸಿದೆ.

ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆ ಯಾದವರಲ್ಲಿ ಜಗದೀಶ್‌ ಶೆಟ್ಟರ್‌ ಹಾಗೂ ಲಕ್ಷ್ಮಣ ಸವದಿ ಪ್ರಮುಖರು. ಸವದಿ ಅವರದು ಬಿಜೆಪಿಯಲ್ಲಿ 20 ವರ್ಷದ ಒಡನಾಟ ಅಷ್ಟೇ, ಅವರ ಮೂಲ ಜನತಾಪರಿವಾರ. ಆದರೆ ಶೆಟ್ಟರ್‌ ಅವರದು ವಿಭಿನ್ನ ರೀತಿ. ಬಿಜೆಪಿಯಲ್ಲಿ 45 ವರ್ಷಗಳ ಸುದೀರ್ಘ‌ ಜೀವನ. ಎಲ್ಲಕ್ಕಿಂತ ಮುಖ್ಯವಾಗಿ ಸಂಘ ಪರಿವಾರದಲ್ಲಿ ಬೆಳೆದ ವ್ಯಕ್ತಿ, ಇವರು ಕಾಂಗ್ರೆಸ್‌ ಸಂಸ್ಕೃತಿಗೆ ಹೇಗೆ ಹೊಂದಿಕೊಳ್ಳುತ್ತಾರೆ ಎಂಬುದು ಮುಂದಿನ ದಿನಗಳಲ್ಲಿ ಕಾದು ನೋಡಬೇಕು.

ಶೆಟ್ಟರ್‌-ಸವದಿ ಸೇರ್ಪಡೆಯಿಂದ ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮಾತ್ರವಲ್ಲದೆ ಕಿತ್ತೂರು ಕರ್ನಾಟಕವೂ ಸೇರಿದಂತೆ ಉತ್ತರ ಕರ್ನಾಟಕದ ಭಾಗದಲ್ಲಿ ಪಕ್ಷಕ್ಕೆ ಹೆಚ್ಚು ಬಲ ಬಂದಿದೆ. ವೀರಶೈವ-ಲಿಂಗಾಯತ ಮತಗಳು ಸಾಕಷ್ಟು ಪ್ರಮಾಣದಲ್ಲಿ ವರ್ಗಾವಣೆಗೊಂಡರೆ ಕನಿಷ್ಟ 15 ರಿಂದ 20 ಕ್ಷೇತ್ರಗಳ ಫ‌ಲಿತಾಂಶ ಚಿತ್ರಣವೇ ಬದಲಾಗುತ್ತದೆ ಎಂಬ ನಿರೀಕ್ಷೆಗಳಿವೆ. ಈ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ಕಡೆಗಣಿಸಲಾಗುತ್ತಿದೆ ಎಂಬ ಕಾರಣದಿಂದ ನೋವಿನಿಂದ ಹೊರಬರುತ್ತಿರುವ ಲಿಂಗಾಯತರಿಗೆ ಕಾಂಗ್ರೆಸ್‌ ಮಣೆ ಹಾಕುತ್ತಿದೆ. ಕಾಂಗ್ರೆಸ್‌ ಪಕ್ಷ ಲಿಂಗಾಯತರನ್ನು ಕಡೆಗಣಿಸಿತ್ತು ಎಂಬ ಅಪವಾದದಿಂದ ಹೊರಬರಲು ಇದು ಸಕಾಲವೆಂದು ಪರಿಗಣಿಸಿರುವ ಕಾಂಗ್ರೆಸ್‌ ಪರಿಸ್ಥಿತಿಯ ಲಾಭ ಪಡೆಯಲು ಮುಂದಾಗಿದೆ.

ಬಿಜೆಪಿಯಲ್ಲಿ ಯಡಿಯೂರಪ್ಪ ಯಾವ ರೀತಿ ಲಿಂಗಾಯತ ಸಮುದಾಯದ ನಾಯಕರೋ ಅದೇ ರೀತಿ ಕಾಂಗ್ರೆಸ್‌ನಲ್ಲಿ ಎಂ.ಬಿ.ಪಾಟೀಲ್‌ ಮುಂಚೂಣಿಯಲ್ಲಿದ್ದಾರೆ. ಶೆಟ್ಟರ್‌ ಕಾಂಗ್ರೆಸ್‌ ಸೇರ್ಪಡೆ ಪ್ರಕ್ರಿಯೆಯಲ್ಲಿ ಸಂಬಂಧಿಕರೂ ಆಗಿರುವ ಕಾಂಗ್ರೆಸ್‌ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹಾಗೂ ಎಂ.ಬಿ.ಪಾಟೀಲ್‌ ಸಕ್ರಿಯ ರಾಗಿದ್ದರು. ಹಿಂದೆ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದಲ್ಲಿ ಈ ಮೂವರದು ವಿಭಿನ್ನ ನಿಲು ವಾಗಿತ್ತು. ಈಗ ಅದು ತೆರೆಗೆ ಸರಿದಿದೆ. ಮೂವರು ಒಂದೇ ಪಕ್ಷದಲ್ಲಿದ್ದಾರೆ. ಹೀಗಾಗಿ ಕಾಂಗ್ರೆಸ್‌ನಲ್ಲಿ ಪ್ರಬಲ ಲಿಂಗಾಯತರ ಸಂಖ್ಯೆ ಹೆಚ್ಚಿದಂತೆ ಆಗಿದೆ. ಜತೆಗೆ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್‌, ಸಿದ್ದರಾಮಯ್ಯ ನಂತರ ಮತ್ತೂಂದು ಶಕ್ತಿಕೇಂದ್ರ ಸೃಷ್ಟಿಯಾದರೂ ಅಚ್ಚರಿ ಇಲ್ಲ.

ಪ್ರತಿ ಚುನಾವಣೆ ಸಂದರ್ಭದಲ್ಲೂ ಪಕ್ಷಾಂತರ ಸರ್ವೇ ಸಾಮಾನ್ಯ. ಆದರೆ ಪಕ್ಷಾಂತರ ಮಾಡಿದ ನಾಯಕನ ಹಿಂದೆ ಎಷ್ಟು ಮಂದಿ ಮುಖಂಡರು/ಹಿಂಬಾಲಕರು ಪಕ್ಷ ತೊರೆಯುತ್ತಾರೆ ಎಂಬುದು ಸಹ ಮುಖ್ಯ, ಜತೆಗೆ ಕೇವಲ ನಾಯಕ/ ಮುಖಂಡ ಪಕ್ಷಾಂತರ ಮಾಡಿದರೆ ಸಾಲದು, ತಾವು ಸೇರ್ಪಡೆಯಾದ ಪಕ್ಷಕ್ಕೆ ಎಷ್ಟು ಮತಗಳನ್ನು ತಂದುಕೊಡುತ್ತಾರೆ ಎಂಬುದು ಅಷ್ಟೇ ಮುಖ್ಯ.

ತಾವು ಬದಲಾದಂತೆ ತಮ್ಮ ಸಮುದಾಯ ಇಲ್ಲವೇ ಸಾಮಾನ್ಯ ಮತದಾರರನ್ನು ಬದಲಾಯಿಸುವ ಶಕ್ತಿ ಇದ್ದರೆ ಮಾತ್ರ ಆಗ ನಾಯಕರ ಪಕ್ಷಾಂತರಕ್ಕೆ ಬೆಲೆ ಇರುತ್ತದೆ, ಇಲ್ಲದಿದ್ದರೆ ಅದು ಕೇವಲ ಅವರಿಗಷ್ಟೇ ಸೀಮಿತವಾಗಿರುತ್ತದೆ. ಈ ಕಾರಣದಿಂದಲೇ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್‌ನವರು ಬಿಜೆಪಿಯವರನ್ನು ಕರೆದುಕೊಂಡಿರಬಹುದು, ಆದರೆ ಬಿಜೆಪಿ ಮತ ಬ್ಯಾಂಕ್‌ ಬಿಟ್ಟು ಹೋಗುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

-ಎಂ.ಎನ್‌.ಗುರುಮೂರ್ತಿ

ಟಾಪ್ ನ್ಯೂಸ್

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

7-bus

Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.