ಚಿಕ್ಕಮಗಳೂರು ಕ್ಲೀನ್ ಸ್ವೀಪ್ ಮಾಡಿದ ಕಾಂಗ್ರೆಸ್ ; ದತ್ತಾ ಮೇಷ್ಟ್ರಿಗೆ ಮೂರನೇ ಸ್ಥಾನ
ಎಂ.ಪಿ.ಕುಮಾರಸ್ವಾಮಿಯವರಿಗೆ ಹೀನಾಯ ಸೋಲು .. ತರೀಕೆರೆಯಲ್ಲಿ ಬಂಡಾಯದ ನಡುವೆಯಲ್ಲಿ ಕೈ ಗೆಲುವು
Team Udayavani, May 13, 2023, 4:57 PM IST
ಚಿಕ್ಕಮಗಳೂರು : ಜಿಲ್ಲೆಯ ಐದು ಕ್ಷೇತ್ರಗಳ ಪೈಕಿ ಐದರಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರಿಗೆ ಎಚ್.ಡಿ.ತಮ್ಮಯ್ಯ ಸೋಲಿನ ಶಾಕ್ ನೀಡಿದ್ದಾರೆ.
ಕಡೂರಿನಲ್ಲಿ ಶಾಸಕರಾಗಿದ್ದ ಬೆಳ್ಳಿ ಪ್ರಕಾಶ್ (59119) ಅವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಆನಂದ್. ಕೆ.ಎಸ್ ಅವರು ಭರ್ಜರಿ ಜಯ ಸಾಧಿಸಿದ್ದಾರೆ.(70386 ಮತ) ಕಾಂಗ್ರೆಸ್ ಸೇರಿ ಟಿಕೆಟ್ ಸಿಗದೇ ಮತ್ತೆ ಜೆಡಿಎಸ್ ಗೆ ಮರಳಿದ್ದ ವೈ. ಎಸ್. ವಿ ದತ್ತಾ ಅವರು(25551) ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.
ಶೃಂಗೇರಿಯಲ್ಲಿ ಜಿದ್ದಾ ಜಿದ್ದಿನ ಸ್ಪರ್ಧೆಯಲ್ಲಿ 153 ಮತಗಳ ಅಂತರರದಿಂದ ಡಿ.ಎನ್.ಜೀವರಾಜ್ ಅವರ ವಿರುದ್ಧ ಕಾಂಗ್ರೆಸ್ ನ ಟಿ.ಡಿ.ರಾಜೇಗೌಡ ಗೆಲುವು ಸಾಧಿಸಿದ್ದಾರೆ.
ಮೂಡಿಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಯನಾ ಮೋಟಮ್ಮ(37796) ಅವರು ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ (35934) ವಿರುದ್ಧ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಸೇರಿದ್ದ ಎಂ.ಪಿ. ಕುಮಾರಸ್ವಾಮಿ 19390 ಮತಗಳನ್ನು ಪಡೆದಿದ್ದಾರೆ.
ತರೀಕೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಎಚ್. ಶ್ರೀನಿವಾಸ (62413) ಅವರು ಬಿಜೆಪಿಯ ಡಿ.ಎಸ್.ಸುರೇಶ್(50385) ವಿರುದ್ಧ ಗೆಲುವು ಸಾಧಿಸಿದ್ದಾರೆ. ಪಕ್ಷೇತರ ಅಭ್ಯರ್ಥಿ(ಕಾಂಗ್ರೆಸ್ ಬಂಡಾಯ) ಎಚ್.ಎಂ. ಗೋಪಿಕೃಷ್ಣ ಹುಣಸಗಟ್ಟ ಅವರು 35266 ಮತಗಳನ್ನು ಪಡೆದು ತ್ರಿಕೋನ ಸ್ಪರ್ಧೆಯನ್ನು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.