ಪತಿ-ಮಾವನ ಗೆಲುವಿಗಾಗಿ ಸೊಸೆ ಪ್ರಚಾರ!
Team Udayavani, Apr 12, 2023, 7:05 AM IST
ದಾವಣಗೆರೆ: ಕುಟುಂಬದಲ್ಲಿ ಒಬ್ಬರು ಚುನಾವಣೆಗೆ ನಿಂತರೆ ಸಾಕು, ಮನೆ ಮನೆ ಪ್ರಚಾರ ಮಾಡಿ ಮನೆಯವರೆಲ್ಲ ಹೈರಾಣಾಗುತ್ತಾರೆ. ಒಂದು ವೇಳೆ ಒಂದೇ ಕುಟುಂಬದಲ್ಲಿ ಇಬ್ಬರು ಚುನಾವಣೆಗೆ ನಿಂತರೆ ಕುಟುಂಬ ಸದಸ್ಯರ ಕೆಲಸ, ಜವಾಬ್ದಾರಿ ಎರಡೂ ದುಪ್ಪಟ್ಟಾಗುವುದು ಸಹಜ. ಅದೇ ರೀತಿ ದಾವಣಗೆರೆ ಜಿಲ್ಲೆಯಲ್ಲಿ ಶಾಮನೂರು ಕುಟುಂಬದ ಸದಸ್ಯೆಯೋರ್ವರು ಪತಿ ಹಾಗೂ ಮಾವ ಇಬ್ಬರನ್ನೂ ಚುನಾವಣೆಯಲ್ಲಿ ಗೆಲ್ಲಿಸುವ ಜವಾಬ್ದಾರಿ ಹೊತ್ತು ನಿತ್ಯ ಮನೆ ಮನೆ ಪ್ರಚಾರಕ್ಕೆ ಅಣಿಯಾಗಿದ್ದಾರೆ.
ದಾವಣಗೆರೆ ದಕ್ಷಿಣದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ| ಶಾಮನೂರು ಶಿವಶಂಕರಪ್ಪ ಕಣಕ್ಕಿಳಿದಿದ್ದಾರೆ. ದಾವಣಗೆರೆ ಉತ್ತರದಿಂದ ಶಾಮನೂರು ಶಿವಶಂಕರಪ್ಪ ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ್ ಸ್ಪರ್ಧಿಸಿದ್ದಾರೆ. ಈ ಎರಡೂ ಕ್ಷೇತ್ರಗಳಲ್ಲಿ ಶಾಮನೂರು ಶಿವಶಂಕರಪ್ಪ ಅವರ ಸೊಸೆ, ಎಸ್.ಎಸ್. ಮಲ್ಲಿಕಾರ್ಜುನ್ ಪತ್ನಿ ಡಾ| ಪ್ರಭಾ ಮಲ್ಲಿಕಾರ್ಜುನ್ ನಿತ್ಯ ಮನೆ ಮನೆ ಪ್ರಚಾರ ಮಾಡುತ್ತಿದ್ದಾರೆ. ದಿನದಲ್ಲಿ ಐದಾರು ತಾಸು ಸಂಚರಿಸುವ ಇವರು, ಮುಖ್ಯವಾಗಿ ಮಹಿಳಾ ಮತದಾರರನ್ನು ಗುರಿಯಾಗಿಸಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ಸ್ವತಃ ವೈದ್ಯರಾಗಿರುವ ಡಾ| ಪ್ರಭಾ ಅವರು ತಮ್ಮ ಪತಿ ಹಾಗೂ ಮಾವನ ಗೆಲುವಿಗಾಗಿ ಮತ ಹಾಕುವಂತೆ ಮಹಿಳೆಯರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪತಿ ಹಾಗೂ ಮಾವನ ಗೆಲುವಿಗಾಗಿ ಎರಡೂ ಕ್ಷೇತ್ರಗಳಲ್ಲಿ ಓಡಾಡುತ್ತಿರುವ ಡಾ| ಪ್ರಭಾ ಅವರನ್ನು ಕಂಡ ಮತದಾರರು, ಪತಿ ಹಾಗೂ ಮಾವ ಇಬ್ಬರೂ ಒಂದೇ ಪಕ್ಷದಲ್ಲಿರುವುದು ಹಾಗೂ ಅಕ್ಕಪಕ್ಕದ ಕ್ಷೇತ್ರದಲ್ಲೇ ಸ್ಪರ್ಧಿಸಿರುವುದು ಸಮಾಧಾನದ ಸಂಗತಿ ಎನ್ನುತ್ತಿದ್ದಾರೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.