Devanahalli ಭಾರಿ ಮಳೆ; ಅಮಿತ್ ಶಾ ರೋಡ್ ಶೋ ಮುಂದೂಡಿಕೆ
ಮಳೆ ಬಂದಾಗ ಕಂಡ ಅಪೂರ್ವ ದೃಶ್ಯ... ವಿಡಿಯೋ ವೈರಲ್
Team Udayavani, Apr 21, 2023, 7:08 PM IST
ಬೆಂಗಳೂರು : ಬೆಂಗಳೂರಿನ ದೇವನಹಳ್ಳಿಯಲ್ಲಿ ಶುಕ್ರವಾರ ಸಂಜೆ ನಡೆಯಬೇಕಾಗಿದ್ದ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ರೋಡ್ ಶೋ ಕಾರ್ಯಕ್ರಮ ಮುಂದೂಡಲಾಗಿದೆ.
ಬೃಹತ್ ರೋಡ್ ಶೋ ಆರಂಭಕ್ಕೆ ಮುನ್ನ ಭಾರಿ ಮಳೆ ಸುರಿದು, ಬಳಿಕವೂ ಮುಂದುವರಿದ ಕಾರಣ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.
ರೋಡ್ ಶೋ ರದ್ದಾದ ವಿಚಾರ ತಿಳಿಯುತ್ತಿದ್ದಂತೆ ಅಮಿತ್ ಶಾ ಅವರನ್ನು ಸ್ವಾಗತಿಸಲು ತರಿಸಲಾಗಿದ್ದ 250 ಕೆಜಿ ತೂಕದ ಬೃಹತ್ ಸೇಬಿನ ಹಾರವನ್ನು ಜನರು ಕ್ಷಣ ಮಾತ್ರದಲ್ಲೇ ಮುಗಿಬಿದ್ದು ಖಾಲಿ ಮಾಡಿದ್ದಾರೆ.
ಹಿರಿಯ ಬಿಜೆಪಿ ಕಾರ್ಯಕರ್ತರೊಬ್ಬರು ಮಳೆ ಬಂದ ವೇಳೆ ಒದ್ದೆಯಾದ ಮೋದಿ ಅವರ ಭಾವಚಿತ್ರವನ್ನು ತಮ್ಮ ಟವಲ್ ನಿಂದ ಒರೆಸಿ ಅಭಿಮಾನ ಮೆರೆದ ವಿಡಿಯೋ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ಬಿಜೆಪಿ ಟ್ವೀಟ್ ಮಾಡಿದೆ.
ಪ್ರಧಾನಿ ಶ್ರೀ @narendramodi ಅವರನ್ನು ದೇಶದ ಜನತೆ ತಮ್ಮ ಮನೆಯವರಲ್ಲಿ ಒಬ್ಬನೆಂದು ಭಾವಿಸಿದ್ದಾರೆ.
ದೇಶದ ರಾಜಕೀಯ ಇತಿಹಾಸದಲ್ಲಿ ಈ ಪರಿಯ ಪ್ರೀತಿ, ಗೌರವಕ್ಕೆ ಪಾತ್ರರಾದ ವ್ಯಕ್ತಿತ್ವ ಮತ್ತೊಂದಿಲ್ಲ.
ಇಂದು ದೇವನಹಳ್ಳಿಯಲ್ಲಿ ಜರುಗಲಿದ್ದ ಪಕ್ಷದ ರೋಡ್ ಶೋಗೂ ಮುನ್ನ, ಮಳೆ ಬಂದಾಗ ಕಂಡ ಅಪೂರ್ವ ದೃಶ್ಯ.#NaMo #BJPYeBharavase pic.twitter.com/S3WlvtlWqr
— BJP Karnataka (@BJP4Karnataka) April 21, 2023
”ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇಶದ ಜನತೆ ತಮ್ಮ ಮನೆಯವರಲ್ಲಿ ಒಬ್ಬನೆಂದು ಭಾವಿಸಿದ್ದಾರೆ.ದೇಶದ ರಾಜಕೀಯ ಇತಿಹಾಸದಲ್ಲಿ ಈ ಪರಿಯ ಪ್ರೀತಿ, ಗೌರವಕ್ಕೆ ಪಾತ್ರರಾದ ವ್ಯಕ್ತಿತ್ವ ಮತ್ತೊಂದಿಲ್ಲ.ಇಂದು ದೇವನಹಳ್ಳಿಯಲ್ಲಿ ಜರುಗಲಿದ್ದ ಪಕ್ಷದ ರೋಡ್ ಶೋಗೂ ಮುನ್ನ, ಮಳೆ ಬಂದಾಗ ಕಂಡ ಅಪೂರ್ವ ದೃಶ್ಯ.”ಎಂದು ಬಿಜೆಪಿ ಹೇಳಿಕೊಂಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಹೊಸ ಸೇರ್ಪಡೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.