ವರುಣಾ ಸ್ಪರ್ಧೆ ಖಚಿತವಾದರೂ ನಿಲ್ಲದ ಸಿದ್ದರಾಮಯ್ಯ ತಳಮಳ
Team Udayavani, Mar 29, 2023, 6:25 AM IST
ಮೈಸೂರು: ಕಳೆದ ಚುನಾವಣೆಯಲ್ಲಿಯೂ ಅವರು ಎರಡು ಅಸೆಂಬ್ಲಿ ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದರು. ಅದು ಅವರ ನಿರ್ಧಾರವಾಗಿತ್ತು. ಈ ಬಾರಿಯೂ ಎರಡು ಕ್ಷೇತ್ರಗಳಲ್ಲಿ ಕಣಕ್ಕಿಳಿಯಬೇಕೆಂಬುದು ಅವರ ಇಚ್ಛೆ. ಆದರೆ ಹೈಕಮಾಂಡ್ ಒಪ್ಪಿಗೆಗಾಗಿ ಕಾಯುವಂತಾಗಿದೆ.
ಇದು ರಾಜ್ಯ ರಾಜಕಾರಣದ ಮಾಸ್ ಲೀಡರ್, ಮಾಜಿ ಮುಖ್ಯಮಂತ್ರಿ ಕಾಂಗ್ರೆಸಿನ ಸಿದ್ದರಾಮಯ್ಯ ಅವರ ಪರಿಸ್ಥಿತಿ. ಸಿದ್ದರಾಮಯ್ಯ ತಮ್ಮ ಸ್ಪರ್ಧೆಯ ಬಗ್ಗೆ ಈ ಹಿಂದೆಂದೂ ಇಂತಹ ಪರಿಸ್ಥಿತಿಯನ್ನು ಎದುರಿಸಿರಲಿಲ್ಲ.
ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ವರುಣಾ ಕ್ಷೇತ್ರದಿಂದ ಟಿಕೆಟ್ ಘೋಷಿಸಿದೆ. ಅಷ್ಟಕ್ಕೆ ಸಿದ್ದರಾಮಯ್ಯ ಸುಮ್ಮನಾಗಿದ್ದರೆ ಗೊಂದಲ ಆಗುತ್ತಿರಲಿಲ್ಲ. ಆದರೆ ಅವರು ಕೋಲಾರದಿಂದ ಕಣಕ್ಕಿಳಿಯುವ ಬಯಕೆಯನ್ನು ಇನ್ನೂ ಬಿಟ್ಟುಕೊಟ್ಟಿಲ್ಲ. ಹೀಗಾಗಿ ಅವರ ಸ್ಪರ್ಧೆಯ ಗೊಂದಲ ಇನ್ನೂ ಮುಗಿದಿಲ್ಲ. ಹೈಕಮಾಂಡ್ ವರುಣಾದಿಂದ ಟಿಕೆಟ್ ಘೋಷಿಸಿದ ಅನಂತರವೂ ಸ್ವತಃ ಸಿದ್ದರಾಮಯ್ಯ ಕೋಲಾರದಿಂದಲೂ ಸ್ಪರ್ಧೆಗೆ ನಿರ್ಧರಿಸಿರುವ ಮಾತನ್ನು ಆಡಿದ್ದಾರೆ. ಅಂದರೆ ಅಲ್ಲಿಗೆ ಸಿದ್ದರಾಮಯ್ಯ ಅವರಿಗೆ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಇಚ್ಛೆ. ಆದರೆ ಹೈಕಮಾಂಡ್ ಒಪ್ಪಿಗೆಗೆ ಕಾಯುತ್ತಿದ್ದಾರೆ. ಚೆಂಡು ಹೈಕಮಾಂಡ್ ಅಂಗಳದಲ್ಲಿದೆ. ಸಿದ್ದರಾಮಯ್ಯ ತಳಮಳ ಮುಂದುವರಿದಿದೆ.
ಸಿದ್ದರಾಮಯ್ಯ 2018ರ ಅಸೆಂಬ್ಲಿ ಚುನಾವಣೆಯಲ್ಲಿ ತವರು ಕ್ಷೇತ್ರ ವರುಣವನ್ನು ಪುತ್ರ ಡಾ| ಯತೀಂದ್ರ ಸಿದ್ದರಾಮಯ್ಯ ಅವರಿಗೆ ಬಿಟ್ಟುಕೊಟ್ಟು ತಾವು ಪಕ್ಕದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದರು. ಅನಂತರದ ದಿನಗಳಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಬಹುದೆಂಬ ಸುಳಿವು ಸಿಕ್ಕ ಕೂಡಲೇ ಬಾದಾಮಿಗೆ ದೌಡಾಯಿಸಿ ಅಲ್ಲಿಯೂ ನಾಮಪತ್ರ ಸಲ್ಲಿಸಿದರು. ಈ ಎರಡೂ ಕ್ಷೇತ್ರಗಳ ಆಯ್ಕೆ ಹಾಗೂ ಸ್ಪರ್ಧೆ ಸಿದ್ದರಾಮಯ್ಯ ಅವರದ್ದೇ ನಿರ್ಧಾರವಾಗಿತ್ತು. ಆದರೆ ಈಗ ಹೈಕಮಾಂಡ್ ವರುಣಾದಲ್ಲಿ ಮಾತ್ರ ಟಿಕೆಟ್ ನೀಡಿದೆ. ಆದರೆ ಸಿದ್ದರಾಮಯ್ಯ ಅವರಿಗೆ ಕೋಲಾರವೂ ಬೇಕಿದೆ. ಇದಕ್ಕೆ ಹೈಕಮಾಂಡ್ ಅಸ್ತು ಎನ್ನಬೇಕು. ಅದರಲ್ಲೂ ಈಗ ಕನ್ನಡಿಗರೇ ಆದ ಹಿರಿಯ ರಾಜಕೀಯ ಮುತ್ಸದ್ಧಿ ಮಲ್ಲಿಕಾರ್ಜುನ ಖರ್ಗೆ ಅವರು ಅಖೀಲ ಭಾರತ ಕಾಂಗ್ರೆಸ್ ಅಧ್ಯಕ್ಷರಾಗಿರುವಾಗ ಸಿದ್ದರಾಮಯ್ಯ ಅವರ ಕೋಲಾರ ಸ್ಪರ್ಧೆ ಬಗ್ಗೆ ಗ್ರೀನ್ ಸಿಗ್ನಲ್ ಸಿಗುವುದು ಅಷ್ಟು ಸುಲಭದ ಮಾತಲ್ಲ.
ಸಿದ್ದರಾಮಯ್ಯ ಅವರು ಈ ಬಾರಿ ತಾವು ಸ್ಪರ್ಧಿಸುವ ಕ್ಷೇತ್ರದ ಬಗ್ಗೆ ಅನಗತ್ಯವಾಗಿ ಗೊಂದಲ ಮಾಡಿಕೊಂಡರೆಂಬ ಮಾತು ಕಾಂಗ್ರೆಸ್‌ನಲ್ಲೇ ಇದೆ. ಅನೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯ ಅವರಿಗಾಗಿ ತಮ್ಮ ಕ್ಷೇತ್ರ ಬಿಟ್ಟು ಕೊಡಲು ಮುಂದಾದರು. ಸಿದ್ದರಾಮಯ್ಯ ಅವರಿಗೆ ವರುಣಾದಲ್ಲಿ ಸ್ಪರ್ಧಿಸುವ ಇರಾದೆ ಇರಲಿಲ್ಲ. ಏಕೆಂದರೆ ವರುಣ ಕ್ಷೇತ್ರದಲ್ಲಿ ಅವರ ಪುತ್ರ ಡಾ| ಯತೀಂದ್ರ ಸಿದ್ದರಾಮಯ್ಯ ಹಾಲಿ ಶಾಸಕರು. ಹೀಗಾಗಿ ವರುಣಾಕ್ಕೆ ತಾವು ವಾಪಸ್ ಬಂದರೆ ಪುತ್ರ ಡಾ| ಯತೀಂದ್ರ ಅವರ ರಾಜಕೀಯ ಭವಿಷ್ಯದ ಚಿಂತೆ ಸಿದ್ದರಾಮಯ್ಯ ಅವರನ್ನು ಕಾಡಿತ್ತು. ಹೀಗಾಗಿ ಕೋಲಾರ ಆಯ್ಕೆ ಮಾಡಿಕೊಂಡಿದ್ದರು. ಆದರೆ ಸಮೀಕ್ಷಾ ವರದಿಗಳು ಹಾಗೂ ಕೋಲಾರ ಜಿಲ್ಲಾ ಕಾಂಗ್ರೆಸಿನ ಒಳಜಗಳಗಳು ಸಿದ್ದರಾಮಯ್ಯ ಅವರ ಚುನಾವಣೆ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂಬ ಆತಂಕ ಹೈಕಮಾಂಡ್ ಅನ್ನು ಕಾಡಿತು. ಹೀಗಾಗಿ ಸಿದ್ದರಾಮಯ್ಯ ಅವರನ್ನು ತವರು ಕ್ಷೇತ್ರಕ್ಕೆ ತಂದು ನಿಲ್ಲಿಸಿದೆ. ಆದರೆ ಸಿದ್ದರಾಮಯ್ಯ ಅವರು ಮಾತ್ರ ತವರು ಕ್ಷೇತ್ರದ ಜತೆಗೆ ಕೋಲಾರವೂ ಬೇಕೆಂದು ಬಯಸಿದ್ದಾರೆ. ಇದರ ಹಿಂದೆ ಪುತ್ರ ಡಾ| ಯತೀಂದ್ರ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಚಿಂತೆ ಅವರಲ್ಲಿದೆ.
ವಿಜಯೇಂದ್ರ ಬರುತ್ತಾರಾ?
ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವುದು ಖಚಿತವಾಗುತ್ತಿದ್ದಂತೆ ಅವರು ಪ್ರಚಾರಕ್ಕಾಗಿ ರಾಜ್ಯದ ಇತರ ಭಾಗಗಳಿಗೆ ಹೆಚ್ಚು ತೆರಳದಂತೆ ಕ್ಷೇತ್ರದಲ್ಲಿಯೇ ಕಟ್ಟಿ ಹಾಕಲು ಬಿಜೆಪಿ ತಂತ್ರಗಳನ್ನು ಹೆಣೆಯುತ್ತಿದೆ. ಬಿಜೆಪಿಗೆ ಇಲ್ಲಿ ಮತದಾರರಿದ್ದಾರೆ. ಆದರೆ ಕ್ಷೇತ್ರ ವ್ಯಾಪ್ತಿ ಪ್ರಭಾವವಿರುವ ವರ್ಚಸ್ಸುಳ್ಳ ಸಮರ್ಥ ಅಭ್ಯರ್ಥಿಗಳಿಲ್ಲ. ಹೀಗಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ವರುಣಾದಲ್ಲಿ ಕಣಕ್ಕಿಳಿಸುವ ಚರ್ಚೆ ಬಿಜೆಪಿ ಹೈಕಮಾಂಡ್‌ನಲ್ಲೂ ನಡೆದಿದೆ. ವಿಜಯೇಂದ್ರ ಅವರು ಶಿಕಾರಿಪುರದಲ್ಲಿ ಸ್ಪರ್ಧಿಸುವುದು ಬಹುತೇಕ ಖಚಿತ ಎನ್ನುವಾಗಲೇ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರಿಗೆ ಟಿಕೆಟ್ ಘೋಷಣೆಯಾದ ಅನಂತರ ಬಿಜೆಪಿಯಲ್ಲಿ ವಿಜಯೇಂದ್ರ ಅವರನ್ನು ವರುಣಾದಿಂದ ಕಣಕ್ಕಿಳಿಸುವ ಕಸರತ್ತಿಗೆ ಮತ್ತೆ ಚಾಲನೆ ದೊರೆತಿದೆ. ಕಳೆದ ಬಾರಿಯೇ ವರುಣಾದಿಂದ ವಿಜಯೇಂದ್ರ ಸ್ಪರ್ಧೆಗೆ ಅಖಾಡ ಸಿದ್ಧವಾಗಿತ್ತು. ಆದರೆ ಬಿಜೆಪಿ ಹೈಕಮಾಂಡ್ ಒಪ್ಪಲಿಲ್ಲ. ಆಗ ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರು ಅಸಮಾಧಾನಗೊಂಡಿದ್ದು ನಿಜ. ಈ ಬಾರಿ ಬಿಜೆಪಿ ಹೈಕಮಾಂಡ್ ವರುಣಾದಿಂದ ವಿಜಯೇಂದ್ರ ಅವರಿಗೆ ಟಿಕೆಟ್ ನೀಡಿದರೂ ಕಳೆದ ಬಾರಿ ಅವರಿಗಿದ್ದ ಅನುಕೂಲಕರ ಪರಿಸ್ಥಿತಿ ಈಗಿಲ್ಲ ಎಂಬುದು ಅಷ್ಟೇ ವಾಸ್ತವ.
-ಕೂಡ್ಲಿ ಗುರುರಾಜ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.