Karnataka Election; ಕಚೇರಿಯಲ್ಲಿನ ಮೋದಿ ಮತ್ತು ಶಾ ಫೋಟೋ ತೆಗೆಯುವುದಿಲ್ಲ: ಶೆಟ್ಟರ್
ಇದು ನನ್ನ ಕೊನೆಯ ವಿಧಾನಸಭಾ ಚುನಾವಣೆ
Team Udayavani, May 3, 2023, 8:45 PM IST
ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಫೋಟೋಗಳು ತಮ್ಮ ಮನೆ-ಕಚೇರಿಯಲ್ಲಿ ಗೋಡೆಯ ಮೇಲಿದ್ದು ಅವುಗಳನ್ನು ತೆಗೆದುಹಾಕುವುದು ಸರಿಯಲ್ಲ ಎಂದು ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸುತ್ತಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
1994 ರಿಂದ ಬಿಜೆಪಿ ಟಿಕೆಟ್‌ನಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಅನ್ನು ಪ್ರತಿನಿಧಿಸಿರುವ ಶೆಟ್ಟರ್, ಬಿಜೆಪಿಯೊಂದಿಗೆ ದಶಕಗಳ ಹಳೆಯ ಸಂಬಂಧವನ್ನು ಕಡಿದುಕೊಂಡ ನಂತರ, ತಮ್ಮ ರಾಜಕೀಯ ಜೀವನದ ಕೊನೆಯ ಹಂತದಲ್ಲಿ ತಮ್ಮ ಕಾರಿನ ಮೇಲೆ ಕಾಂಗ್ರೆಸ್ ಧ್ವಜವನ್ನು ಹಾಕಿಕೊಂಡು ಪಕ್ಷದ ಕಾರ್ಯಕರ್ತರೊಂದಿಗೆ ಪ್ರಚಾರಕ್ಕೆ ಹೊರಟಿದ್ದಾರೆ.
ಶೆಟ್ಟರ್ ಅವರು ಪಿಟಿಐಗೆ ನೀಡಿದ ಸಂದರ್ಶನದಲ್ಲಿ, ಬಿಜೆಪಿಯಿಂದ ಹೊರಬಂದ ನಂತರ ಫೋಟೋಗಳನ್ನು ಏಕೆ ತೆಗೆದುಹಾಕಿಲ್ಲ ಎಂದು ಪ್ರಶ್ನಿಸಿದಾಗ, “ಇದರಲ್ಲಿ ಆಶ್ಚರ್ಯವೇನು. ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಬದಲಾದ ತಕ್ಷಣ ಹಿಂದಿನ ನಾಯಕರ ಫೋಟೋ ತೆಗೆಯುವುದು ಒಳ್ಳೆಯದಲ್ಲ. ನಾನು ಅದನ್ನು ಮಾಡಲು ಸಾಧ್ಯವಿಲ್ಲ ” ಎಂದಿದ್ದಾರೆ.
ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಶೆಟ್ಟರ್ , ಇದು ನನ್ನ ಕೊನೆಯ ವಿಧಾನಸಭಾ ಚುನಾವಣೆ ಎಂದಿದ್ದಾರೆ. ಚುನಾವಣೆ ನನ್ನ ಸ್ವಾಭಿಮಾನದ ಹೋರಾಟವಾಗಿದೆ, ರಾಜಕೀಯ ಆಕಾಂಕ್ಷೆಗಾಗಿ ಅಲ್ಲ. ನನ್ನ ಆತ್ಮಗೌರವಕ್ಕೆ ಧಕ್ಕೆಯಾದ ಕಾರಣ ಷರತ್ತನ್ನು ಹಾಕದೆ ನನ್ನ ನೆಮ್ಮದಿಗಾಗಿ ಕಾಂಗ್ರೆಸ್ ಸೇರಿದ್ದೇನೆ ಎಂದಿದ್ದಾರೆ.
“ಜನಪ್ರಿಯತೆ, ವಯಸ್ಸು, ಕ್ರಿಮಿನಲ್ ಹಿನ್ನೆಲೆ ಮತ್ತು ಭ್ರಷ್ಟಾಚಾರ/ಸಿಡಿ ಇಲ್ಲದಿದ್ದರೂ ನನಗೆ ಏಕೆ ಟಿಕೆಟ್ ನಿರಾಕರಿಸಲಾಗಿದೆ ಎಂಬುದು ಯಾರಿಗೂ ತಿಳಿದಿಲ್ಲ. ಆದರೆ ಬಿಜೆಪಿ 75 ವರ್ಷ ವಯಸ್ಸಿನವರು, ಕುಟುಂಬ ಸದಸ್ಯರು ಮತ್ತು ಕ್ರಿಮಿನಲ್ ಹಿನ್ನೆಲೆ ಹೊಂದಿರುವವರಿಗೆ ಟಿಕೆಟ್ ನೀಡಿದೆ”ಎಂದರು.
“ಅಭಿವೃದ್ಧಿ ಪರ ಕೆಲಸಗಳಿಂದಾಗಿ ನಾನು ಇನ್ನೂ ಜನಪ್ರಿಯತೆಯನ್ನು ಉಳಿಸಿಕೊಂಡಿದ್ದೇನೆ. ಯಾವುದೇ ವಿರೋಧಿ ಅಲೆಯಿಲ್ಲ. ಈ ಬಾರಿ ಅತ್ಯಧಿಕ ಬಹುಮತದಿಂದ ಗೆಲ್ಲುವ ವಿಶ್ವಾಸವಿದೆ. ಕಳೆದ ಆರು ಸತತ ಚುನಾವಣೆಗಳಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಮರಾಠರ ಬೆಂಬಲದಿಂದ ಗೆದ್ದಿದ್ದೇನೆ ಎಂಬ ತಪ್ಪು ಸಂವಹನ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.