ಜಗದೀಶ್‌ ಶೆಟ್ಟರ್‌ ಅಕ್ಷಮ್ಯ ಅಪರಾಧ ಮಾಡುತ್ತಿದ್ದಾರೆ: B. S. Yediyurappa ಕಿಡಿ

ಈಶ್ವರಪ್ಪ, ಅಂಗಾರ, ರಘುಪತಿ ಭಟ್ ಅವರನ್ನು ಅಭಿನಂದಿಸುತ್ತೇನೆ...

Team Udayavani, Apr 16, 2023, 2:40 PM IST

1-js

ಬೆಂಗಳೂರು : ಬಿಜೆಪಿ ತೊರೆದಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಿರುದ್ಧ ಮಾಜಿ ಸಿಎಂ,ಕೇಂದ್ರೀಯ ಚುನಾವಣಾ ಸಮಿತಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ಕಿಡಿ ಕಾರಿದ್ದು, ಅವರು ಮಾಡುತ್ತಿರುವುದು ಅಕ್ಷಮ್ಯ ಅಪರಾಧ ಎಂದಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ ಅವರು ”ಜಗದೀಶ್‌ ಶೆಟ್ಟರ್‌ ಅವರ ಹೇಳಿಕೆ ಮತ್ತು ನಿರ್ಧಾರ ಅವರು ನಂಬಿದ ಸಿದ್ಧಾಂತಕ್ಕೆ ತದ್ವಿರುದ್ಧವಾಗಿದೆ. ಬಿಜೆಪಿ ಪಕ್ಷ ಅವರಿಗೆ ಎಲ್ಲವನ್ನೂ ನೀಡಿತ್ತು. ಆದರೂ ಕಾಂಗ್ರೆಸ್ ಜೊತೆ ಹೊರಟಿರುವುದು ಅಕ್ಷಮ್ಯ ಅಪರಾಧ” ಎಂದರು.

ಜಗದೀಶ್ ಶೆಟ್ಟರ್ ಅವರು ಜನಸಂಘದ ಕಾಲದಿಂದ ಬಿಜೆಪಿ ಕುಟುಂಬದಲ್ಲಿದ್ದವರು. ಪಕ್ಷದ ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕ, ಸಚಿವ ಮತ್ತು ಮುಖ್ಯಮಂತ್ರಿ ಸ್ಥಾನಗಳನ್ನು ಬಿಜೆಪಿ ನೀಡಿತ್ತು. ಬಿ.ಬಿ.ಶಿವಪ್ಪ ಅವರನ್ನು ಎದುರು ಹಾಕಿಕೊಂಡು ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡಲಾಯಿತು. ತಾವು ಮತ್ತು ಅನಂತಕುಮಾರ್ ಅವರ ಪರವಾಗಿ ನಿಂತು ಅವರನ್ನು ಮುಖ್ಯಮಂತ್ರಿಯನ್ನಾಗಿಯೂ ಮಾಡಿದೆವು ಎಂದರು.

ನರೇಂದ್ರ ಮೋದಿಜಿ ಅವರ ನೇತೃತ್ವದಲ್ಲಿ ದೇಶ ಮುಂದುವರೆಯುತ್ತಿರುವ ವೇಳೆ ಅವರಿಗೆ ಶಕ್ತಿ ತುಂಬುವುದು ನಮ್ಮ ಜವಾಬ್ದಾರಿಯಾಗಿದೆ. ವಿಶ್ವದಲ್ಲಿ ಭಾರತಕ್ಕೆ ಗೌರವ ತಂದು ಒಳ್ಳೆಯ ಸ್ಥಾನ ನೀಡಿದ್ದಾರೆ. ಇಂತಹ ಸಂದರ್ಭದಲ್ಲಿ ಜಗದೀಶ್ ಶೆಟ್ಟರ್ ಅವರ ವಿಚಾರಧಾರೆಗೆ ತದ್ವಿರುದ್ಧದ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದರು.

ಸ್ಥಾನ ಸಿಗದಿದ್ದರೂ ದೇಶಕ್ಕಾಗಿ ಶ್ರಮಿಸಬೇಕಿದೆ. ಶೆಟ್ಟರ್ ಅವರನ್ನು ಗುರುತಿಸಿದ್ದು ಬಿಜೆಪಿ. ವ್ಯಕ್ತಿ ಎಷ್ಟೇ ದೊಡ್ಡವನಾದರೂ ಪಕ್ಷದ ಬೆಂಬಲವಿಲ್ಲದೆ ಎತ್ತರಕ್ಕೇರಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಪದವಿ ಅಲಂಕರಿಸಲು ಸಾಧ್ಯವಿಲ್ಲ. ಧಮೇಂದ್ರ ಪ್ರಧಾನ್, ಪ್ರಹ್ಲಾದ್ ಜೋಷಿ ಹುಬ್ಬಳ್ಳಿಯಲ್ಲಿ ಶೆಟ್ಟರ್ ಅವರ ಮನೆಗೆ ಭೇಟಿ ನೀಡಿ ಅವರ ಮನವೊಲಿಸಲು ಪ್ರಯತ್ನಿಸಿದರು.ಕೇಂದ್ರದಲ್ಲಿ ಸಚಿವರಾಗಿ ಮಾಡುತ್ತೇವೆ ಎಂದೂ ಹೇಳಿದ್ದಾರೆ. ಆದರೆ, ಹಠಮಾಡಿ ಶೆಟ್ಟರ್ ಕಾಂಗ್ರೆಸ್ ಪಕ್ಷ ಸೇರಲು ಹೊರಟಿರುವುದು ಅಕ್ಷಮ್ಯ ಅಪರಾಧ. ನಾಡಿನ ಜನತೆ ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ. ಇದು ಪಕ್ಷಕ್ಕೆ ಮಾಡಿರುವ ದ್ರೋಹ ಎಂದರು.

ಲಕ್ಷಣ ಸವದಿ ಅವರು ಶಾಸಕರು, ಸಚಿವರಾಗಿದ್ದರು. ಸೋತಮೇಲೆ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿ ಉಪ ಮುಖ್ಯಮಂತ್ರಿಯನ್ನಾಗಿ ಮಾಡಲಾಯಿತು. ಕೋರ್ ಕಮಿಟಿಯಲ್ಲಿ ಸ್ಥಾನವನ್ನೂ ನೀಡಲಾಯಿತು. ಅವರ ವಿಧಾನಪರಿಷತ್ ಸದಸ್ಯ ಅವಧಿ ಇನ್ನೂ 5 ವರ್ಷ ಇದ್ದರೂ ಪಕ್ಷವನ್ನು ತೊರೆದಿದ್ದಾರೆ. ಪಕ್ಷದಲ್ಲಿದ್ದಿದ್ದರೆ ಮುಂದೆಯೂ ಅವರನ್ನು ಸಚಿವರನ್ನಾಗಿ ಮಾಡುತ್ತಿದ್ದೆವು. ಬಿಜೆಪಿ ಅವರಿಗೆ ಅನ್ಯಾಯ ಮಾಡಿಲ್ಲ. ಬಿಜೆಪಿ ಅವರನ್ನು ಗುರುತಿಸಿದೆ. ಕಾಂಗ್ರೆಸ್ ಹೋಗುವ ಅವರ ಪ್ರಯತ್ನ ಜನತೆಗೆ, ಪಕ್ಷಕ್ಕೆ, ನಂಬಿಕೆ-ವಿಶ್ವಾಸಕ್ಕೆ ಮಾಡಿದ ದ್ರೋಹ. ಅವರ ನಿರ್ಧಾರವನ್ನು ಜನತೆ ಕ್ಷಮಿಸುವುದಿಲ್ಲ. ಈ ಬೆಳವಣಿಗೆಗಳಿಂದ ಕಾರ್ಯಕರ್ತರು ವಿಚಲಿತರಾಗುವ ಅಗತ್ಯವಿಲ್ಲ. ಯಾವುದೇ ಸಮಸ್ಯೆಯೂ ಆಗುವುದಿಲ್ಲ. ಯಾವುದೇ ಅಭ್ಯರ್ಥಿ ಇದ್ದರೂ ಕಾರ್ಯಕರ್ತರು ಹಗಲಿರುಳು ಕೆಲಸ ಮಾಡಬೇಕು. ತಾವು ಆ ಭಾಗದಲ್ಲಿ ಪ್ರವಾಸ ಮಾಡಿ ಜನರಿಗೆ ವಾಸ್ತವ ಸಂಗತಿ ತಿಳಿಸುತ್ತೇನೆ ಎಂದು ಹೇಳಿದರು.

ತಮಗೆ, ಶೆಟ್ಟರ್ ಅವರಿಗೆ, ಈಶ್ವರಪ್ಪ ಅವರಿಗೆ ಸೇರಿದಂತೆ ಎಲ್ಲರಿಗೂ ಪಕ್ಷ ಸ್ಥಾನಮಾನ ಅವಕಾಶ ನೀಡಿದೆ. ತಮ್ಮಂತ ಸಾಮಾನ್ಯ ಕಾರ್ಯಕರ್ತರು ರಾಜ್ಯದ ಮೂಲೆ ಮೂಲೆಯಲ್ಲಿ ವಿಶ್ವಾಸ ಗಳಿಸಲು ಬಿಜೆಪಿ ಕಾರಣ ಎಂಬುದನ್ನು ಎಂದಿಗೂ ಮರೆಯುವುದಿಲ್ಲ. ಸ್ವಇಚ್ಛೆಯಿಂದ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದೇನೆ. ಈಶ್ವರಪ್ಪ, ಅಂಗಾರ, ರಘುಪತಿ ಭಟ್ ಅವರು ಪಕ್ಷದ ತೀರ್ಮಾನವನ್ನು ಗೌರವಿಸಿದ್ದು, ಅವರನ್ನು ಅಭಿನಂದಿಸುತ್ತೇನೆ. ಶೆಟ್ಟರ್ ಮತ್ತು ಸವದಿ ನಾಲ್ಕೈದು ದಿನಗಳಲ್ಲಿ ತಮ್ಮ ತಪ್ಪಿನ ಅರಿವಾಗಿ ಪಕ್ಷಕ್ಕೆ ಬರುವುದಾದರೆ ವಾಪಸ್ ಸೇರಿಸಿಕೊಳ್ಳಲಾಗುವುದು ಎಂದರು.

ಜಗತ್ತಿನ ಯಾವುದೇ ಶಕ್ತಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಸಾಧ್ಯವಿಲ್ಲ. ಚುನಾವಣೆಯಲ್ಲಿ ಎಲ್ಲ ಜಾತಿ-ವರ್ಗಗಳಿಗೆ ಅವಕಾಶ ನೀಡಲಾಗಿದೆ. ಹೊಸತನ, ಹೊಸಹುರುಪು, ಹೊಸ ಹುಮ್ಮಸ್ಸಿನೊಂದಿಗೆ ಬಿಜೆಪಿ ಸಾಗುತ್ತಿದೆ. ಸ್ವಾತಂತ್ರ್ಯ ಬಂದ ನಂತರ ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಶೋಷಿತರಿಗೆ, ಬಡವರ ಕಲ್ಯಾಣಕ್ಕೆ ಏನೂ ಮಾಡಲಿಲ್ಲ. ಇವರನ್ನು ವೋಟ್ ಬ್ಯಾಂಕ್ ಆಗಿಯೇ ಪರಿಗಣಿಸುತ್ತಾ ಬಂದಿದೆ. ಆದರೆ, ಬಿಜೆಪಿ ಸರ್ಕಾರ ಸಾಮಾಜಿಕ ನ್ಯಾಯ ಪಾಲಿಸುತ್ತಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಪ್ರಮಾಣ ಹೆಚ್ಚಿಸಿದೆ ಎಂದರು.

2018ರಲ್ಲಿ ಕಾಂಗ್ರೆಸ್ ವಿಷಯದಲ್ಲಿ ಧರ್ಮದ ಹೆಸರಿನಲ್ಲಿ ವೀರಶೈವ-ಲಿಂಗಾಯತರನ್ನು ಒಡೆಯಲು ಪ್ರಯತ್ನಿಸಿತು. ಆದರೆ, ಕಾಂಗ್ರೆಸ್ ನಾಯಕರ ಪ್ರಯತ್ನ ವಿಫಲವಾಯಿತು. ರಾಜ್ಯದ ಜನರು ಕಾಂಗ್ರೆಸ್ ಅನ್ನು ತಿರಸ್ಕರಿಸಿದರು. ಹಿಂದಿನ ಲೋಕಸಭೆ ಚುನಾವಣೆ ವೇಳೆ ಬಿಜೆಪಿ 25 ಸ್ಥಾನಗಳನ್ನು ಗೆಲ್ಲುವುದಾಗಿ ತಾವು ಹೇಳಿದ್ದು, ಅದರಂತೆ 25 ಸ್ಥಾನಗೆದ್ದಿದೆ. ಮುಂದಿನ ಚುನಾವಣೆಯಲ್ಲೂ 25ಕ್ಕೂ ಅಧಿಕ ಸ್ಥಾನಗಳಲ್ಲಿ ಬಿಜೆಪಿ ಗೆಲ್ಲಲಿದೆ. ಈ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ 125ರಿಂದ 130 ಸ್ಥಾನ ಗೆದ್ದು ಸ್ಪಷ್ಟ ಬಹುಮತ ಪಡೆದು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದರು.

ಕರ್ನಾಟಕದ ಚುನಾವಣಾ ಉಸ್ತುವಾರಿ ಮತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಕೇಂದ್ರ ಸಚಿವೆ ಮತ್ತು ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್, ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಟಾಪ್ ನ್ಯೂಸ್

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.