ಜನತಾ ದಳ ಹೋಳು; ಘಟಾನುಘಟಿಗಳ ಸೋಲು
Team Udayavani, Mar 31, 2023, 5:32 AM IST
1989ರಲ್ಲಿ ಹೀಗೂ ಆಗಿತ್ತು. ಜನತಾ ದಳದಲ್ಲಿ ಆಗ ಎಚ್.ಡಿ.ದೇವೇಗೌಡರು, ಎಸ್.ಆರ್.ಬೊಮ್ಮಾಯಿ, ರಾಮಕೃಷ್ಣ ಹೆಗಡೆ ಅವರು ಪ್ರಮುಖ ನಾಯಕರು. ಆಗ ಸ್ವಪಕ್ಷೀಯ ನಾಯಕರ ಜತೆ ಮುನಿಸಿಕೊಂಡ ದೇವೇಗೌಡರು, ಜನತಾದಳದಿಂದ ಆಚೆ ಕಾಲಿಟ್ಟು, ಜನತಾ ಪಾರ್ಟಿ(ಜೆಪಿ) ಕಟ್ಟಿಕೊಂಡಿದ್ದರು. ಇದರ ರಾಷ್ಟ್ರೀಯ ಅಧ್ಯಕ್ಷರು ಸುಬ್ರಮಣಿಯನ್ ಸ್ವಾಮಿ. 1989ರಲ್ಲಿ ನಡೆದ ಚುನಾವಣೆಯಲ್ಲಿ ಜನತಾ ದಳ ಮತ್ತು ಜನತಾ ಪಾರ್ಟಿ ಬೇರೆ ಬೇರೆಯಾಗಿಯೇ ಸ್ಪರ್ಧೆ ಮಾಡಿದ್ದವು. ವಿಶೇಷವೆಂದರೆ ಹೊಳೆನರಸೀಪುರದಲ್ಲಿ ಸ್ಪರ್ಧೆ ಮಾಡಿದ್ದ ದೇವೇಗೌಡರೂ ಸೋತಿದ್ದರು.
ಈ ಚುನಾವಣೆಯಲ್ಲಿ ಜನತಾದಳ ಮತ್ತು ಜನತಾ ಪಾರ್ಟಿ ಎರಡೂ ಸೋತವು. ಜನತಾ ದಳ 209 ಕಡೆಗಳಲ್ಲಿ ಸ್ಪರ್ಧೆ ಮಾಡಿ ಕೇವಲ 24 ಸ್ಥಾನಗಳಲ್ಲಿ ಗೆದ್ದಿತು. ಆಗ ಸಿಎಂ ಆಗಿದ್ದ ಎಸ್.ಆರ್.ಬೊಮ್ಮಾಯಿ ಅವರೂ ಸೋತಿದ್ದರು. ಜನತಾ ಪಾರ್ಟಿ 217 ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಕೇವಲ 2ರಲ್ಲಿ ಮಾತ್ರ ಜಯಗಳಿಸಿತ್ತು. ಜನತಾ ದಳ ಮತ್ತು ಜನತಾ ಪಾರ್ಟಿ ಪ್ರತ್ಯೇಕವಾಗಿ ಸ್ಪರ್ಧೆ ಮಾಡಿದ್ದರಿಂದ ಮತ ಚಲ್ಲಾಪಿಲ್ಲಿಯಾಗಿದ್ದವು. ಹೀಗಾಗಿ ಕಾಂಗ್ರೆಸ್ ನಿರಾಯಾಸವಾಗಿ ಗೆಲುವು ಸಾಧಿಸಿತ್ತು. 221ರಲ್ಲಿ ಸ್ಪರ್ಧೆ ಮಾಡಿದ್ದ ಕಾಂಗ್ರೆಸ್ 178ರಲ್ಲಿ ಗೆದ್ದಿತ್ತು. ಮುಂದೆ ವೀರೇಂದ್ರ ಪಾಟೀಲ್ ಅವರು ಮುಖ್ಯಮಂತ್ರಿಯಾದರು. 1990ರಲ್ಲಿ ದೇವೇಗೌಡರು ಮತ್ತೆ ಜನತಾದಳಕ್ಕೆ ಬಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಹೊಸ ಸೇರ್ಪಡೆ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.