karnataka election 2023; ಹೊಸಮುಖಗಳ ಹಣಾಹಣಿಗೆ ಸಜ್ಜಾಗಿದೆ ಕಣ


Team Udayavani, Apr 15, 2023, 3:54 PM IST

karnataka election 2023; ಹೊಸಮುಖಗಳ ಹಣಾಹಣಿಗೆ ಸಜ್ಜಾಗಿದೆ ಕಣkarnataka election 2023; ಹೊಸಮುಖಗಳ ಹಣಾಹಣಿಗೆ ಸಜ್ಜಾಗಿದೆ ಕಣ

ಸುಳ್ಯ: ಕೇರಳದ ಕಾಸರಗೋಡು, ಕೊಡಗಿನ ಸಂಪಾಜೆ ಗಡಿಗೆ ತಾಗಿಕೊಂಡಿರುವ ದ.ಕ. ಜಿಲ್ಲೆಯ ಏಕೈಕ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರ ಸುಳ್ಯ. ಈ ಬಾರಿ ಹೊಸ ಮುಖಗಳ ನಡುವೆ ನೇರ ಹಣಾಹಣಿ ಇದೆ. ಜತೆಗೆ ಪಕ್ಷೇತರ ಅಭ್ಯರ್ಥಿಗಳು ಕಣಕ್ಕಿಳಿಯಲು ಯೋಚಿಸಿರುವುದು ಚುನಾವಣ ಕಣ ರಂಗೇರಿಸಿದೆ. ಇಲ್ಲಿ ಪುರುಷ ಮತದಾರರಿಗಿಂತ ಮಹಿಳಾ ಮತದಾರರ ಸಂಖ್ಯೆಯೇ ಹೆಚ್ಚಿದೆ.

1952ರಲ್ಲಿ ಮದ್ರಾಸ್‌ ರಾಜ್ಯ ಹಾಗೂ 1957ರಲ್ಲಿ ಮೈಸೂರು ರಾಜ್ಯ ವ್ಯಾಪ್ತಿಯಲ್ಲಿ ಚುನಾವಣೆಯನ್ನು ಕಡಿರುವ ಪುತ್ತೂರು ಆಗ ಸುಳ್ಯವನ್ನು ಒಳಗೊಂಡ ದ್ವಿ- ಸದಸ್ಯ ಕ್ಷೇತ್ರವಾಗಿತ್ತು. ಈ ಎರಡು ಅವಧಿಯಲ್ಲಿ ಸುಳ್ಯ ಪುತ್ತೂರಿನ ಕ್ಷೇತ್ರಕ್ಕೆ ಸೇರಿತ್ತು. 1962ರಲ್ಲಿ ಸುಳ್ಯವು ಪುತ್ತೂರು ಕ್ಷೇತ್ರದಿಂದ ಬೇರ್ಪಟ್ಟು ಪ್ರತ್ಯೇಕ ಕ್ಷೇತ್ರವಾಗಿ ಮೊದಲ ಚುನಾವಣೆ ಎದುರಿಸಿತು. ಪ್ರಸ್ತುತ ಈ ಕ್ಷೇತ್ರವು ಬಿಜೆಪಿಯ ಭದ್ರಕೋಟೆಯೆಂದು ಪರಿಗಣಿಸಲ್ಪಟ್ಟಿದೆ.

1962ರ ಮೊದಲ ಚುನಾವಣೆ ವೇಳೆ ಈ ಕ್ಷೇತ್ರ ಪರಿಶಿಷ್ಟ ವರ್ಗಕ್ಕೆ ಮೀಸಲಾಗಿತ್ತು. ಈ ಅವಧಿಯಲ್ಲಿ ಈ ಕ್ಷೇತ್ರವನ್ನು ಕಾಂಗ್ರೆಸ್‌ ಗೆದ್ದುಕೊಂಡಿತು. 1967ರಿಂದ ಪರಿಶಿಷ್ಟ ಜಾತಿಗೆ ಮೀಸಲಾಯಿತು. ಈ ಅವಧಿಯಲ್ಲಿ ಸ್ವತಂತ್ರ ಪಕ್ಷ, 1972ರಲ್ಲಿ ಕಾಂಗ್ರೆಸ್‌, 1978ರಲ್ಲಿ ಜನತಾ ಪಕ್ಷ, 1983ರಲ್ಲಿ ಬಿಜೆಪಿ, 1985 ಹಾಗೂ 1989ರಲ್ಲಿ ಕಾಂಗ್ರೆಸ್‌ ಪಕ್ಷ ಇಲ್ಲಿ ಗೆಲುವು ಸಾಧಿಸಿತು. 1994ರಿಂದ 2018ರ ತನಕ ಆರು ಅವಧಿಯಲ್ಲಿ ಬಿಜೆಪಿ ಇಲ್ಲಿ ಗೆಲುವು ದಾಖಲಿಸುವ ಮೂಲಕ ಕ್ಷೇತ್ರದಲ್ಲಿ ತನ್ನ ಹಿಡಿತ ಸಾಧಿಸಿದೆ. 1962ರಿಂದ 2018ರ ವರೆಗೆ ಈ ಕ್ಷೇತ್ರದಲ್ಲಿ ನಡೆದಿರುವ ಒಟ್ಟು 13 ಚುನಾವಣೆ ಗಳಲ್ಲಿ 7 ಬಾರಿ ಬಿಜೆಪಿ 4 ಬಾರಿ ಕಾಂಗ್ರೆಸ್‌, 1 ಬಾರಿ ಜನತಾ ಪಾರ್ಟಿ, 1 ಬಾರಿ ಸ್ವತಂತ್ರ ಪಕ್ಷ ಜಯ ಗಳಿಸಿವೆ.
ಕ್ಷೇತ್ರದಲ್ಲಿ ಪರಿಶಿಷ್ಟ ವರ್ಗದ ಓರ್ವ ಹಾಗೂ ಉಳಿದ 12 ಅವಧಿಗೆ 12 ಪರಿಶಿಷ್ಟ ಜಾತಿಯ ಸಮುದಾಯದವರು ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಕ್ಷೇತ್ರದಲ್ಲಿ ಒಕ್ಕಲಿಗ ಮತದಾರರು ಅತ್ಯಧಿಕ ಸಂಖ್ಯೆಯಲ್ಲಿದ್ದರೆ, ಅನಂತರದ ಸ್ಥಾನದಲ್ಲಿ ಪರಿಶಿಷ್ಟ ಜಾತಿ- ಪಂಗಡ, ಮುಸ್ಲಿಂ, ಬಂಟ, ತಮಿಳು ಮತದಾರರಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಈವರೆಗಿನ ಚುನಾವಣ ಇತಿಹಾಸ ಅವಲೋಕಿಸಿದರೆ ಇಲ್ಲಿ ನಿಕಟ ಸ್ಪರ್ಧೆ ಏರ್ಪಟ್ಟಿದ್ದು ಕಾಂಗ್ರೆಸ್‌ ಹಾಗೂ ಬಿಜೆಪಿ ಮಧ್ಯೆ ಮಾತ್ರ. ಈ ಬಾರಿಯು ಅದೇ ವಾತಾವರಣ ಇದೆ.

ಉನ್ನತ ಸ್ಥಾನಮಾನ
ಕಳೆದ ಹನ್ನೆರಡು ಅವಧಿಯಲ್ಲಿ ಈ ಕ್ಷೇತ್ರದಿಂದ ಆಯ್ಕೆಯಾದ ಶಾಸಕರಿಗೆ ಸಚಿವ ಸಹಿತ ಉನ್ನತ ಸ್ಥಾನಗಳು ಸಿಕ್ಕಿರಲಿಲ್ಲ. 2020ರಲ್ಲಿ ಆರು ಬಾರಿ ಕ್ಷೇತ್ರದಲ್ಲಿ ಶಾಸಕರಾಗಿದ್ದ ಎಸ್‌. ಅಂಗಾರ ಅವರನ್ನು ಸಚಿವರನ್ನಾಗಿ ಮಾಡುವ ಮೂಲಕ ಆ ಕೊರತೆ ನೀಗಿತು.

ವೇದಿಕೆ ಸಜ್ಜು !
ಸುಳ್ಯ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿಯ ಟಿಕೆಟ್‌ ಘೋಷಣೆಯಾಗಿದೆ. ಕಾಂಗ್ರೆಸ್‌ನಿಂದ ವಿ. ಕೃಷ್ಣಪ್ಪ, ಬಿಜೆಪಿಯಿಂದ ಭಾಗೀರಥಿ ಮುರುಳ್ಯ ಕಣದಲ್ಲಿದ್ದಾರೆ. ಇಲ್ಲಿ ಕಾಂಗ್ರೆಸ್‌ಗೆ ಬಂಡಾಯದ ಬಿಸಿ ಇದ್ದು ಮಡಿಕೇರಿ ನಗರಸಭೆ ಮಾಜಿ ಅಧ್ಯಕ್ಷ ನಂದಕುಮಾರ್‌ ಪಕ್ಷೇತರರಾಗಿ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ. ಆಮ್‌ ಆದ್ಮಿಯಿಂದ ಮಾಜಿ ಶಾಸಕಿ ಕೆ. ಕುಶಲ ಅವರ ಪುತ್ರಿ ಸುಮನಾ ಅಖಾಡದಲ್ಲಿದ್ದಾರೆ.

-  ದಯಾನಂದ ಕಲ್ನಾರು

ಟಾಪ್ ನ್ಯೂಸ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

2(1)

Puttur: ವಿದ್ಯುತ್‌ ಕಂಬ ಏರುವ ತರಬೇತಿ!; ಪವರ್‌ಮನ್‌ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ

1(1)

Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.