Karnataka election ಮನೆ ಮನೆಗೆ ಕೋಳಿ ಹಂಚಿಕೆ ; ವಾಹನ ಸಮೇತ ಜಪ್ತಿ
Team Udayavani, Apr 20, 2023, 9:32 PM IST
ಕುಷ್ಟಗಿ:ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆಗೆ ಕೋಳಿ ಹಂಚಿಕೆಯಲ್ಲಿ ನಿರತರಾಗಿದ್ದು, ಕೋಳಿಗಳ ಸಮೇತ ವಾಹನವನ್ನು ಫ್ಲೈಯಿಂಗ್ ಸ್ಕ್ವಾಡ್ ತಂಡ ವಶಕ್ಕೆ ತೆಗೆದುಕೊಂಡಿದೆ.
ಕುಷ್ಟಗಿ ವಿಧಾನಸಭೆ ಚುನಾವಣಾಧಿಕಾರಿಗಳ ಕಾರ್ಯಾಲಯಕ್ಕೆ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಸುರೇಂದ್ರ ಕಾಂಬಳೆ ನೇತೃತ್ವದ ಫ್ಲೈಯಿಂಗ್ ಸ್ಕ್ವಾಡ್ ತಂಡ ಬುಧವಾರ ರಾತ್ರಿ ದೌಡಾಯಿಸಿತು. ಸದರಿ ಗ್ರಾಮದ ಶ್ರೀ ಶರಣಬಸವೇಶ್ವರ ದೇವಸ್ಥಾನದ ಬಳಿ 80 ಕೋಳಿಗಳು ಹಾಗೂ ವಾಹನ ಸಮೇತ ವಶಕ್ಕೆ ತೆಗೆದುಕೊಳ್ಳಲಾಗಿದೆ.
ಚಾಲಕ ಶರಣಗೌಡ ರಾಮನಗೌಡ ಪಾಟೀಲ ಪರಾರಿಯಾಗಿದ್ದಾನೆ. ಸ್ಥಳೀಯರ ವಿಚಾರಣೆಯಿಂದ ಕಾಂಗ್ರೆಸ್ ಅಭ್ಯರ್ಥಿ ರೋಡ್ ಶೋದಲ್ಲಿ ಭಾಗವಹಿಸಿದವರಿಗೆ ಹಾಗೂ ಮತದಾನ ಮಾಡಲು ಆಮಿಷದ ಹಿನ್ನೆಲೆಯಲ್ಲಿ ಕೋಳಿಗಳ ಹಂಚಿಕೆ ನಿರತರಾಗಿರುವುದು ಗೊತ್ತಾಗಿದೆ. ವಾಹನದ ಅಂದಾಜು ಮೌಲ್ಯ 1.50ಲಕ್ಷ ರೂ. 80 ಕೋಳಿಗಳ ಮೌಲ್ಯ 6,400 ರೂ. ಎಂದುಅಂದಾಜಿಸಲಾಗಿದೆ. ಫ್ಲೈಯಿಂಗ್ ಸ್ಕ್ವಾಡ್ ತಂಡದಲ್ಲಿ ಎಎಸೈ ವಸಂತ, ಚಾಲಕ ಶಿವಾನಂದಪ್ಪ ತಳವಾರ ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.