Karnataka Election ಯುಪಿ ಸಿಎಂ ಯೋಗಿ ಅವರಿಗೆ 10 ಸವಾಲೆಸೆದ ಸಿದ್ದರಾಮಯ್ಯ

ಆದಿತ್ಯನಾಥ್ ಮಾದರಿಯನ್ನು ಕರ್ನಾಟಕದಲ್ಲಿ ಬಿತ್ತಲು ಅವಕಾಶ ಕೊಡುವುದಿಲ್ಲ...

Team Udayavani, Apr 27, 2023, 4:04 PM IST

siddaramaiah

ಬೆಂಗಳೂರು : ರಾಜ್ಯದಲ್ಲಿ ಚುನಾವಣ ಪ್ರಚಾರ ಭರಾಟೆ ತೀವ್ರಗೊಂಡಿದ್ದು ಆರೋಪ-ಪ್ರತ್ಯಾರೋಪಗಳು ಒಂದಾದರ ಮೇಲೊಂದು ಕೇಳಿ ಬರುತ್ತಲೇ ಇದೆ. ಬಿಜೆಪಿಯ ಸ್ಟಾರ್ ಪ್ರಚಾರಕರಾಗಿರುವ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಮಾಜಿ ಸಿಎಂ ಸವಾಲುಗಳನ್ನೆಸೆದಿದ್ದಾರೆ.

”ಉತ್ತರ ಪ್ರದೇಶದ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್ ಅವರು ರಾಜ್ಯದ ಬಿಜೆಪಿಯ ಪರವಾಗಿ ಚುನಾವಣಾ ಪ್ರಚಾರ ಮಾಡಲು ಬಂದಿದ್ದಾರೆ. ನಿನ್ನೆ ರಾಜ್ಯದ ಮಂಡ್ಯ ಮುಂತಾದ ಕಡೆ ಉತ್ತರ ಪ್ರದೇಶದ ಮಾದರಿಯ ಬಗ್ಗೆ ಮಾತನಾಡಿದ್ದಾರೆ. ಉತ್ತರ ಪ್ರದೇಶದ ಮಾದರಿ ಎಂದರೆ ಏನು ಎಂದು ಇಡೀ ಜಗತ್ತಿಗೆ ಗೊತ್ತಾಗಿದೆ. ಆದರೂ ಅದರ ಬಗ್ಗೆ ಕರ್ನಾಟಕದಲ್ಲೂ ಪ್ರಸ್ತಾಪಿಸುವುದು ಹಾಸ್ಯಾಸ್ಪದವಾದ ಸಂಗತಿಯಾಗಿದೆ” ಎಂದು ಉಲ್ಲೇಖಿಸಿ ಸಿದ್ದರಾಮಯ್ಯ ಅವರು ಹತ್ತು ಸವಾಲುಗಳನ್ನು ಮುಂದಿಟ್ಟಿದ್ದಾರೆ.

1.ಕೇಂದ್ರ ಸರ್ಕಾರದ ದಾಖಲೆಗಳ ಪ್ರಕಾರ ಉತ್ತರಪ್ರದೇಶದಲ್ಲಿ 6 ವರ್ಷದ ಒಳಗಿನ ಮಕ್ಕಳ ಅನಿಮಿಯಾ ಪ್ರಮಾಣ ಶೇ. 66.4 ರಷ್ಟಿದೆ. ಇದು 2016 ರಲ್ಲಿ ಶೇ.63.2 ರಷ್ಟಿತ್ತು. ಶೇ.3.2 ರಷ್ಟು ಅಪೌಷ್ಟಿಕತೆಯನ್ನು ಹೆಚ್ಚಿಸಿ ಮಕ್ಕಳನ್ನು ರೋಗಗ್ರಸ್ತ ಮಾಡಿದ್ದು ಯೋಗಿ ಆದಿತ್ಯ ನಾಥ್ ಅವರ ಸಾಧನೆ.

2.2016ರಲ್ಲಿ ಉತ್ತರ ಪ್ರದೇಶದ ಮಹಿಳೆಯರ ಸರಾಸರಿ ಜೀವಿತಾವಧಿ 68.5 ರಷ್ಟಿತ್ತು. 2019 ರಲ್ಲಿ ಅದು ಶೇ.66.2 ಕ್ಕೆ ಕುಸಿದಿದೆ. ಎಲ್ಲ ರಾಜ್ಯಗಳ ಜನರ ಜೀವಿತಾವಧಿ ಹೆಚ್ಚುತ್ತಿದ್ದರೆ ಉತ್ತರ ಪ್ರದೇಶದಲ್ಲಿ ಕುಸಿಯುತ್ತಿದೆ. ಇದೇ ಅಲ್ಲವೆ ಆದಿತ್ಯನಾಥ್ ಮಾದರಿ.

3.ತಲಾವಾರು ವಿದ್ಯುತ್ ಲಭ್ಯತೆಯು ಕರ್ನಾಟಕದಲ್ಲಿ 1184 ಕಿಲೋವ್ಯಾಟ್‍ಗಳಷ್ಟಿದ್ದರೆ, ಉತ್ತರ ಪ್ರದೇಶದಲ್ಲಿ ಕೇವಲ 642 ಕಿಲೋವ್ಯಾಟ್‍ಗಳಷ್ಟಿದೆ. ಆದಿತ್ಯನಾಥರು ಮುಖ್ಯಮಂತ್ರಿಗಳಾದ ಮೇಲೆ ಗಮನಾರ್ಹ ಬದಲಾವಣೆಯೇನೂ ಸಂಭವಿಸಿಲ್ಲ. ಅಭಿವೃದ್ಧಿಗೂ ವಿದ್ಯುತ್ ಬಳಕೆಗೂ ಸಂಬಂಧವಿದೆ.

4.2021 ರ ದಾಖಲೆಗಳ ಪ್ರಕಾರ ಉತ್ತರ ಪ್ರದೇಶದಲ್ಲಿ 3012 ತಜ್ಞ ವೈದ್ಯರುಗಳ ಹುದ್ದೆಗಳು ಮಂಜೂರಾಗಿದ್ದರೆ, ಕೆಲಸ ಮಾಡುತ್ತಿರುವವರು ಕೇವಲ 872 ಜನ ಮಾತ್ರ. 2030 ಹುದ್ದೆಗಳು ಖಾಲಿ ಇವೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡಬೇಕಾದ ವೈದ್ಯರುಗಳ 1355 ಹುದ್ದೆಗಳು ಖಾಲಿ ಇವೆ. ಜನರ ಆರೋಗ್ಯ ಸುಧಾರಿಸದೆ ರಾಜ್ಯವನ್ನು ಅಭಿವೃದ್ಧಿ ಮಾಡುವುದು ಹೇಗೆ?

5.ಉತ್ತರ ಪ್ರದೇಶದಲ್ಲಿ ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ಮಹಿಳೆ ಮತ್ತು ರೈತರು ಮುಂತಾದ ದಮನಿತ ವರ್ಗಗಳು ಬದುಕಲಾಗದಷ್ಟು ಪರಿಸ್ಥಿತಿ ಹಾಳಾಗಿದೆಯೆಂಬ ಮಾಹಿತಿ ಇದೆ. ಶತಮಾನಗಳಿಂದ ದಮನಿಸಲ್ಪಟ್ಟ ಜನರನ್ನು ಬಾಬಾಸಾಹೇಬರ ಆಶಯಗಳು, ಮಚ್ಚೇಂದ್ರನಾಥ್, ಗೋರಖ್‍ನಾಥರ, ಕಬೀರರ ಆಶಯಗಳಿಗೆ ವಿರುದ್ಧವಾಗಿ ದಮನಿಸಿ ನಾಶ ಮಾಡುವುದೆ ಉತ್ತರ ಪ್ರದೇಶ ಮಾದರಿಯೆಂಬುದನ್ನು ಆದಿತ್ಯನಾಥರು ಸಾಬೀತು ಮಾಡಿದ್ದಾರೆ. ಇದನ್ನು ಉತ್ತರ ಪ್ರದೇಶದ ಮಾದರಿ ಎನ್ನುವುದಕ್ಕಿಂತ ಆದಿತ್ಯನಾಥ್ ಮಾದರಿ ಎನ್ನಬೇಕಾಗುತ್ತದೆ. ಇಂಥ ಮಾದರಿಯನ್ನು ಕರ್ನಾಟಕದಲ್ಲಿ ಬಿತ್ತಲು ರಾಜ್ಯದ ಜನರು ಯಾವ ಕಾರಣಕ್ಕೂ ಅವಕಾಶ ಕೊಡುವುದಿಲ್ಲ. ಇಲ್ಲಿ ಬಸವಣ್ಣನವರು, ಕನಕದಾಸರು, ಶ್ರೀ ನಾರಾಯಣ ಗುರುಗಳು, ಮಹಾಕವಿ ಕುವೆಂಪು ಅವರು, ಬಾಬಾಸಾಹೇಬರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮತ್ತು ದೇವರಾಜ ಅರಸು ಅವರಂಥ ಧೀಮಂತರ ಮಹಾನ್ ಮಾದರಿಗಳು ಕರ್ನಾಟಕದಲ್ಲಿದೆ. ಅವುಗಳನ್ನು ಬೇಕಿದ್ದರೆ ಆದಿತ್ಯನಾಥರು ಕಲಿತುಕೊಂಡು ಹೋಗಿ ಅಲ್ಲಿ ಅಳವಡಿಸಿಕೊಳ್ಳಲಿ. ಆಗಲಾದರೂ ಅಲ್ಲಿನ ದಮನಿತರಾದ ನನ್ನ ಸೋದರ ಜಾತಿ-ಜನಾಂಗಗಳ ಜನರು ತುಸು ನೆಮ್ಮದಿಯಾಗಿ ಊಟ ಮಾಡಿ, ದುಡಿಮೆ ಮಾಡಿ ಜೀವಿಸಲಿ.

6. ಯೋಗಿ ಆದಿತ್ಯನಾಥರೆ ನೀವು ಯಾವ ಮುಖ ಹೊತ್ತು ರಾಜ್ಯದಲ್ಲಿ ಮತ ಕೇಳುತ್ತೀರಿ ಹೇಳಿ? ನಿಮ್ಮ ಅಂದಾದುಂದಿ ಆಡಳಿತ ನಡೆಸುವುದಕ್ಕಾಗಿ ದಕ್ಷಿಣದ ರಾಜ್ಯಗಳ ಜನರ ಜೀವ ಹಿಂಡಿ ಮೋದಿ ಸರ್ಕಾರ ನಿಮಗೆ ಅನುದಾನಗಳನ್ನು ಕೊಡುತ್ತಿದೆ. ನಿಮ್ಮ ರಾಜ್ಯದ ಬಜೆಟ್‍ನ ಶೇ.50 ರಷ್ಟು ಅನುದಾನವನ್ನು ಮೋದಿ ಸರ್ಕಾರ ಕೊಡುತ್ತಿದೆ. ಆದರೆ ಕರ್ನಾಟಕಕ್ಕೆ ಕೇವಲ ಶೇ. 16.25 ರಷ್ಟನ್ನು ಮಾತ್ರ ಕೊಡುತ್ತಿದೆ.

7.ಉತ್ತರ ಪ್ರದೇಶದ 2023-24ರ ಬಜೆಟ್ ಗಾತ್ರ 6.9 ಲಕ್ಷ ಕೋಟಿ ರೂ. ಅದರಲ್ಲಿ ತೆರಿಗೆ ಪಾಲು 183238 ಕೋಟಿ ರೂಪಾಯಿ ಮತ್ತು ಕೇಂದ್ರ ಪುರಸ್ಕೃತ ಯೋಜನೆಗಳಿಗೆ 114213 ಕೋಟಿ ರೂಪಾಯಿಗಳು ಎರಡೂ ಸೇರಿ 297451 ಕೋಟಿ ರೂಪಾಯಿಗಳನ್ನು ಉತ್ತರ ಪ್ರದೇಶವು ಕೇಂದ್ರದಿಂದ ಪಡೆಯುತ್ತಿದೆ. ಇದರಲ್ಲಿ ಹಣಕಾಸು ಆಯೋಗದ ನೇರ ಅನುದಾನಗಳು ಸೇರಿಲ್ಲ. ಸೇರಿದರೆ ಶೇ.50 ಅನ್ನೂ ಮೀರುತ್ತದೆ. ಉತ್ತರ ಪ್ರದೇಶದಲ್ಲಿ ಈ ವರ್ಷ ಜಿಎಸ್‍ಟಿ ಮತ್ತು ಆದಾಯ ತೆರಿಗೆಗಳಿಂದ ಸಂಗ್ರಹವಾಗುವ ಅಂದಾಜು ಮೊತ್ತ 1.34 ಲಕ್ಷ ಕೋಟಿ ರೂಪಾಯಿಗಳು.

8.ಕರ್ನಾಟಕದ ಜನರಿಂದ ಮೋದಿ ಸರ್ಕಾರ ಜಿಎಸ್‍ಟಿ ಮತ್ತು ನೇರ ತೆರಿಗೆಗಳಿಂದ ಈ ವರ್ಷ 3.72 ಲಕ್ಷ ಕೋಟಿ ರೂಪಾಯಿಗಳಿಗೂ ಹೆಚ್ಚಿನ ಆದಾಯ ಸಂಗ್ರಹಿಸುತ್ತದೆ. ಆದರೆ ನಮ್ಮ ರಾಜ್ಯಕ್ಕೆ ಸಿಗುವ ತೆರಿಗೆ ಪಾಲು 37 ಸಾವಿರ ಕೋಟಿ ಮತ್ತು ಕೇಂದ್ರ ಪುರಸ್ಕøತ ಯೋಜನೆಗಳಿಗೆ ಸಿಗುವ ಪಾಲು 13 ಸಾವಿರ ಕೋಟಿ ರೂ. ಎರಡೂ ಸೇರಿದರೆ 50 ಸಾವಿರ ಕೋಟಿ ಆಗುತ್ತದೆ ಎಂದು ಅಂದಾಜಿಸಲಾಗಿದೆ. ಈ ಹಣವೂ ಪೂರ್ಣ ಪ್ರಮಾಣದಲ್ಲಿ ಬರುವುದು ಅನುಮಾನ. 1.34 ಲಕ್ಷ ಕೋಟಿ ತೆರಿಗೆ ಸಂಗ್ರಹಿಸಿ 3 ಲಕ್ಷ ಕೋಟಿಗೂ ಹೆಚ್ಚು ಅನುದಾನ ಪಡೆಯುವ ಉತ್ತರ ಪ್ರದೇಶವೆಲ್ಲಿ? 3.72 ಲಕ್ಷ ಕೋಟಿ ತೆರಿಗೆ ಪಾವತಿಸಿ 50 ಸಾವಿರ ಕೋಟಿ ರೂ ಪಾಲು ಪಡೆಯುವ ಕರ್ನಾಟಕವೆಲ್ಲಿ?

9.ಕೇಂದ್ರದಿಂದ ಇನ್ನೂ ಹೆಚ್ಚು ಅನುದಾನ ತೆಗೆದುಕೊಳ್ಳಿ ಅಡ್ಡಿಯಿಲ್ಲ. ತೆಗೆದುಕೊಂಡು ದಮನಿತ ಜಾತಿ ಸಮುದಾಯಗಳನ್ನು ಅಭಿವೃದ್ಧಿ ಮಾಡಿ ನಾನು ಸಂತೋಷ ಪಡುತ್ತೇನೆ. ಆದರೆ ಕೇಂದ್ರ ಉಳಿಸಿಕೊಳ್ಳುವ ಯಥೇಚ್ಛ ಸಂಪನ್ಮೂಲಗಳಲ್ಲಿ ನಮಗೆ ವಿಶೇಷ ಅನುದಾನಗಳನ್ನು ಕೊಡಿ, ಕರ್ನಾಟಕ ಮುಂತಾದ ದಕ್ಷಿಣದ ರಾಜ್ಯಗಳ ಕಾಮಧೇನುವಿನಂಥ ಕೆಚ್ಚಲು ಕೊಯ್ದು ನಮಗೆ ಪಾಲು ಕೊಡುವುದು ಬೇಡ ಎಂದು ನರೇಂದ್ರಮೋದಿಯವರಿಗೆ ನೀವು ಪತ್ರ ಬರೆದೊ ಇಲ್ಲ ಮನವಿ ಮಾಡಿಯೊ ಒತ್ತಾಯಿಸಿದ್ದರೆ, ನಿಮಗೆ ಕರ್ನಾಟಕಕ್ಕೆ ಬಂದು ಮತ ಕೇಳುವ ನೈತಿಕತೆ ಇರುತ್ತಿತ್ತು. ಈಗ ನಿಮ್ಮಲ್ಲಿ ಆ ನೈತಿಕತೆ ಉಳಿದಿಲ್ಲ. ಹಾಗಿದ್ದರೂ ಯಾವ ಮುಖ ಹೊತ್ತು ಮತ ಕೇಳುತ್ತೀರಿ?

10.ನೀವು ರಾಜ್ಯದಲ್ಲಿ ಹಲವು ಸುಳ್ಳು ಹೇಳಿದ್ದೀರಿ. ಸುಳ್ಳು ನಿಮ್ಮ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ. ನೀವು ಹೇಳಿದ ಸುಳ್ಳುಗಳಲ್ಲಿ ಪಿಎಫ್‍ಐ ವಿಚಾರವೂ ಸೇರಿದೆ. ಕರ್ನಾಟಕದಲ್ಲಿ ಪಿಎಫ್‍ಐ ಮತ್ತು ಎಸ್‍ಡಿಪಿಐ ಸಂಘಟನೆಗಳ ಕಾರ್ಯಕರ್ತರ ಮೇಲಿನ ಪ್ರಕರಣವನ್ನು ಬಿಜೆಪಿ ಸರ್ಕಾರವೆ ಹಿಂಪಡೆದಿದೆ ಎಂದು ಬೊಮ್ಮಾಯಿ ಸರ್ಕಾರವೆ ನನಗೆ ಮಾಹಿತಿ ನೀಡಿದೆ. ಉತ್ತರ ಕರ್ನಾಟಕದ ಹೊನ್ನಾವರದಲ್ಲಿ ದಾಖಲಾಗಿದ್ದ ಸಿಸಿ.ನಂ.483/2019 ಕ್ಕೆ ಸಂಬಂಧಿಸಿದ ಪ್ರಕರಣವನ್ನು ದಿನಾಂಕ 13-10-2020 ರಂದು ರಾಜ್ಯ ಬಿಜೆಪಿ ಸರ್ಕಾರ ಹಿಂದಕ್ಕೆ ಪಡೆದಿದೆ. ಇದಕ್ಕೆ ಏನು ಹೇಳುತ್ತೀರಿ ಯೋಗಿ ಆದಿತ್ಯನಾಥ್ ಅವರೆ? ನೀವು ಸುಳ್ಳು ಹೇಳುತ್ತಾ ಹೋಗಿ. ನಾವು ಸತ್ಯವೇನೆಂದು ನಿಮ್ಮ ಮುಖದ ಮುಂದೆ ಇಡುತ್ತೇವೆ. ಯಾರು ಸರಿ ಎಂದು ಜನರೆ ತೀರ್ಮಾನಿಸಲಿ.

ಟಾಪ್ ನ್ಯೂಸ್

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.