Karnataka Elections; ವಿಕಾಸದ ಗಂಗಾನದಿ ಹರಿಯಲು ಬಿಜೆಪಿ ಬೆಂಬಲಿಸಿ: ಹಾವೇರಿಯಲ್ಲಿ ನಡ್ಡಾ
Team Udayavani, Apr 19, 2023, 3:20 PM IST
ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯದ ಅಭಿವೃದ್ಧಿಗೆ ಗರಿಷ್ಠ ಕೊಡುಗೆ ಕೊಟ್ಟಿದ್ದಾರೆ. ಇಲ್ಲಿನ ಜನೋತ್ಸಾಹ, ಭಾರಿ ಕರತಾಡನ ಗಮನಿಸಿದರೆ ಬೊಮ್ಮಾಯಿಯವರ ಗೆಲುವು ನಿಶ್ಚಿತವಾಗಿದೆ ಎಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದರು.
ಶಿಗ್ಗಾವಿಯಲ್ಲಿ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನಾಮಪತ್ರ ಸಲ್ಲಿಕೆ ಹಿನ್ನೆಲೆ ಆಯೋಜಿಸಿದ್ದ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕರ್ನಾಟಕದಲ್ಲಿ ವಿಕಾಸದ ಗಂಗಾನದಿ ಹರಿಯುವಂತಾಗಲು ಕಮಲದ ಚಿಹ್ನೆಗೆ ಮತ ಕೊಡಿ ಎಂದು ಅವರು ಮನವಿ ಮಾಡಿದರು.
ಕರ್ನಾಟಕದಲ್ಲಿ ವಿಕಾಸದ ಸ್ಥಿರತೆ ಇರಬೇಕು ಎಂಬುದು ಚುನಾವಣೆಯ ವಿಷಯ ಎಂದ ಅವರು, ಮೋದಿಜಿ ಅವರ ಆಶೀರ್ವಾದ ಮುಂದುವರಿಯಲು ಮತ್ತು ಅಭಿವೃದ್ಧಿಯನ್ನು ಮುಂದುವರಿಸಲು ಬಿಜೆಪಿಯನ್ನೇ ಗೆಲ್ಲಿಸಿ ಎಂದು ವಿನಂತಿಸಿದರು.
ಕಾಂಗ್ರೆಸ್ ಎಂದರೆ ಕಮಿಷನ್, ಭ್ರಷ್ಟಾಚಾರ, ಅಪರಾಧೀಕರಣದ ಪಕ್ಷ. ಕಾಂಗ್ರೆಸ್ ಮುಖಂಡರು ನೇತಾರರಾಗಿ ಉಳಿದಿಲ್ಲ. ಅವರು ಎಟಿಎಂ ಚಲಾಯಿಸುವ ವ್ಯಕ್ತಿಗಳಾಗಿದ್ದಾರೆ ಎಂದು ಟೀಕಿಸಿದರು.
ಮೋದಿಯವರು ಕಳುಹಿಸಿದ ಅಭಿವೃದ್ಧಿಗೆ ಸಂಬಂಧಿಸಿದ ಹಣವನ್ನು ದೆಹಲಿ ಕಾಂಗ್ರೆಸ್‍ಗೆ ವರ್ಗಾಯಿಸುವ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಬೇಕೇ ಎಂದು ಪ್ರಶ್ನಿಸಿದರು.
ಕರ್ನಾಟಕಕ್ಕೆ ಮೋದಿಜಿ ಅವರು ಕಳುಹಿಸಿದ ಹಣ ಸಮರ್ಪಕವಾಗಿ ಬಳಕೆಯಾಗಲು ಇಲ್ಲಿ ಅಭಿವೃದ್ಧಿ ಕಾರ್ಯ ನಿರಂತರವಾಗಿ ನಡೆಯಲು ಕಮಲದ ಚಿಹ್ನೆಯನ್ನು ಬೆಂಬಲಿಸಿ ಎಂದು ಕೋರಿದರು. ರಸ್ತೆಗಳ ನಿರ್ಮಾಣ, ಅಭಿವೃದ್ಧಿ, ತುಮಕೂರಿನಲ್ಲಿ ಹೆಲಿಕಾಪ್ಟರ್ ನಿರ್ಮಾಣದ ಕೈಗಾರಿಕೆ ಆರಂಭಿಸಿದ್ದನ್ನು ವಿವರಿಸಿದ ಅವರು, ವಿಮಾನನಿಲ್ದಾಣಗಳ ನಿರ್ಮಾಣ, ವಂದೇ ಭಾರತ್ ರೈಲುಗಳ ಆರಂಭಕ್ಕೆ ಕಮಲದ ಚಿಹ್ನೆಗೆ ಮತ ಕೊಡಿ ಎಂದು ತಿಳಿಸಿದರು.
ಇದಕ್ಕೂ ಮೊದಲು ಶಿಗ್ಗಾವಿಯಲ್ಲಿ ಸಿಎಂ ಬಸರಾಜ ಬೊಮ್ಮಾಯಿಯೊಂದಿಗೆ ಬೃಹತ್ ರೋಡ್ ಶೋ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಚಿತ್ರನಟ ಕಿಚ್ಚ ಸುದೀಪ್, ಸಚಿವರಾದ ಬಿ.ಸಿ.ಪಾಟೀಲ, ಗೋವಿಂದ ಕಾರಜೋಳ, ಮುರಗೇಶ ನಿರಾಣಿ, ಶಿಸ್ತು ಸಮಿತಿಯ ಅಧ್ಯಕ್ಷ ಲಿಂಗರಾಜ ಪಾಟೀಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.