Karnataka poll 2023; ಕಾರ್ಕಳದಲ್ಲಿ ನನಗೆ ನಿಶ್ಚಿತವಾಗಿಯೂ ಗೆಲುವು ಸಿಗಲಿದೆ: ಮುತಾಲಿಕ್
ಶಿಷ್ಟರ ರಕ್ಷಣೆಯಾಗಲಿ, ದುಷ್ಟರಿಗೆ ಶಿಕ್ಷೆಯಾಗಲಿ...
Team Udayavani, Apr 5, 2023, 4:16 PM IST
ಮೈಸೂರು:’‘ಹಿಂದುತ್ವದ ರಕ್ಷಣೆ ಹಾಗೂ ಭ್ರಷ್ಟಾಚಾರದ ವಿರುದ್ಧ ಹೋರಾಡುವ ಸಲುವಾಗಿ ಕಾರ್ಕಳ ವಿಧಾನಸಭೆ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ನನಗೆ ನಿಶ್ಚಿತವಾಗಿಯೂ ಗೆಲುವು ಸಿಗಲಿದೆ” ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಬುಧವಾರ ಹೇಳಿಕೆ ನೀಡಿದ್ದಾರೆ.
ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ,”ಶಿಷ್ಟರ ರಕ್ಷಣೆಯಾಗಲಿ, ದುಷ್ಟರಿಗೆ ಶಿಕ್ಷೆಯಾಗಲಿ ಎಂದು ಬೇಡಿಕೊಳ್ಳಲು ಚಾಮುಂಡಿ ಬೆಟ್ಟಕ್ಕೆ ಹೋಗಿ ಆಶೀರ್ವಾದ ಪಡೆದುಕೊಂಡು ಹೋಗಲು ಬಂದಿದ್ದೆ” ಎಂದರು.
” ಹಾಸನ ಜಿಲ್ಲೆಯ ಬೇಲೂರಿನಲ್ಲಿ ಚನ್ನಕೇಶವಸ್ವಾಮಿ ರಥೋತ್ಸವದ ವೇಳೆ ಕುರಾನ್ ಪಠಣ ಮಾಡಿದ್ದು ಅಕ್ಷಮ್ಯ ಅಪರಾಧ.ಅಲ್ಲಿನ ಸ್ಥಳೀಯ ಜೆಡಿಎಸ್ ನಾಯಕರ ಒತ್ತಡಕ್ಕೆ ಮಣಿದು ಕುರಾನ್ ಪಠಣಕ್ಕೆ ಅವಕಾಶ ಮಾಡಿಕೊಡಲಾಗಿದೆ.ಚುನಾವಣೆ ದೃಷ್ಟಿಯಿಂದ ಕುರಾನ್ ಪಠಣಕ್ಕೆ ಜೆಡಿಎಸ್ ನಾಯಕರು ಒತ್ತಡ ಹೇರಿದ್ದಾರೆ. ಈ ಮೂಲಕ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಲಾಗಿದೆ. ಹಾಗಾಗಿ ಅಲ್ಲಿನ ಜಿಲ್ಲಾಡಳಿತ, ಚುನಾವಣಾ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಕಿಡಿ ಕಾರಿದರು.
”ನಂಜನಗೂಡಿನ ಶ್ರೀಕಂಠೇಶ್ವಸ್ವಾಮಿ ದೇಗುಲದ ಹುಂಡಿಯಲ್ಲಿ ಸಂಗ್ರಹವಾಗಿದ್ದ ಹಣವನ್ನು ಸ್ಥಳೀಯ ಶಾಸಕರು, ಶಾದಿ ಮಹಲ್ ನಿರ್ಮಾಣಕ್ಕೆ ಬಳಕೆ ಮಾಡಿಕೊಳ್ಳಲು ಮುಂದಾಗಿರುವುದು ಖಂಡನೀಯ.ಶಾದಿ ಮಹಲ್ ನಿರ್ಮಾಣಕ್ಕೆ ದೇಗುಲದ ಹುಂಡಿ ಹಣ ಬಳಕೆ ಮಾಡಿಕೊಳ್ಳಲು ಮುಂದಾಗಿರುವ ಶಾಸಕ ನಿಲುವು ಸರಿಯಾದ ಕ್ರಮವಲ್ಲ.ಹೀಗಾಗಿ ಈ ನಿರ್ಧಾರವನ್ನು ಕೂಡಲೇ ಕೈಬಿಡಬೇಕು. ಧಾರ್ಮಿಕ ದತ್ತಿ ಇಲಾಖೆಯ ನಿಯಮಕ್ಕೆ ವಿರುದ್ಧವಾಗಿ ದೇಗುಲದ ಹುಂಡಿ ಹಣವನ್ನು ಶಾದಿ ಮಹಲ್ ನಿರ್ಮಾಣಕ್ಕೆ ನೀಡಬಾರದು.ದೇಗುಲದ ಹುಂಡಿ ಹಣವನ್ನು ಹಿಂದೂಗಳ ದೇವಾಲಯಗಳ ಅಭಿವೃದ್ಧಿಗೆ ಮಾತ್ರ ಬಳಸಿಕೊಳ್ಳಬೇಕು”ಎಂದರು.
”ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದೆ. ಆದರೂ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡಲಾಗುತ್ತಿದೆ.ಅಕ್ರಮ ಗೋ ಸಾಗಾಟ ತಡೆಗಟ್ಟಲು ಮುಂದಾದ ಪುನಿತ್ ಕೆರೆಹಳ್ಳಿ ವಿರುದ್ಧ ಎಫ್ ಐ ಆರ್ ದಾಖಲಿಸಿರುವುದು ಸರಿಯಾದ ಕ್ರಮವಲ್ಲ.ಈ ವಿಚಾರದಲ್ಲಿ ವಿರೋಧ ಪಕ್ಷಗಳ ನಾಯಕರು ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ಧವರ ಪರ ನಿಂತಿರುವುದು ಸರಿಯಲ್ಲ.ಅಕ್ರಮ ಗೋ ಸಾಗಾಟ ತಡೆಯಲು ಮುಂದಾದವರ ಪರ ನಿಲ್ಲಬೇಕು” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.