ಮತ ಜಾತ್ರೆಗೆ ಕಾಶಿ ಯಾತ್ರೆ!


Team Udayavani, Mar 16, 2023, 5:15 AM IST

ಮತ ಜಾತ್ರೆಗೆ ಕಾಶಿ ಯಾತ್ರೆ!

ದಾವಣಗೆರೆ: ತಮ್ಮಾ ಹ್ಯಾಗಿದಿಯಪ್ಪಾ, ಆರಾಮಿದಿಯಾ, ನಾವೆಲ್ಲಾರೂ ಕೂಡಿ ಕಾಶಿ ನೋಡಾಕ ಹೊಂಟೇವಿ. ನಿಮ್ಮ ಅವ್ವ-ಅಪ್ಪಗೂ ಕಳ್ಸಿ ಕೊಡು. ನಿಮಗೆಲ್ಲಾ ಜೋಪಾನ ಮಾಡಾಕ ಅವ್ರು ಎಷ್ಟೆಲ್ಲಾ ಕಷ್ಟಾ ಪಟ್ಟಾರು, ಅವ್ರಿಗೆ ನೀನು ಕಾಶಿ ದರ್ಶನಾ ಮಾಡ್ಸು. ತಂದೆ-ತಾಯಿಗೆ ಕಾಶಿ ದರ್ಶನಾ ಮಾಡ್ಸಿದ್ರ ಮಕ್ಕಳಿಗೂ ಪುಣ್ಯ ಸಿಗ್ತದ, ಒಳ್ಳೆದಾಗ್ತದ..’ಇದು ಇತ್ತೀಚೆಗೆ ಸಂಬಂಧಿಕರು, ವಿವಿಧ ಸಮುದಾಯ ಹಾಗೂ ಸಂಘಟನೆಯವರಿಂದ ಪರಿಚಯಸ್ಥ ಯುವಜನತೆಗೆ ಬರುತ್ತಿರುವ ಕರೆಗಳ ಸಂಭಾಷಣೆ. ಪೋಷಕರಿಗೆ ಕಾಶಿಗೆ ಕಳುಹಿಸಿ ಕೊಡುವಂತೆ ಯುವಜನರಿಗೆ ಕೋರುವ ಇಂಥ ದೂರವಾಣಿ ಕರೆಗಳು ಧಾರವಾಡ, ಹಾವೇರಿ, ಗದಗ, ಕೊಪ್ಪಳ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಸಹಿತ ಹೀಗೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿಯೂ ಕೇಳಿ ಬರುತ್ತಿದೆ. ಇದರ ಪರಿಣಾಮ ಈ ವರ್ಷದ ಬೇಸಗೆಯಲ್ಲಿ ಕಾಶಿ ಯಾತ್ರೆಗೆ ಹೋಗುವವರ ಸಂಖ್ಯೆ ಗಣನೀಯವಾಗಿ ಏರುತ್ತಿದೆ.

ವಿವಿಧ ಸಂಘಟನೆಗಳ ಸದಸ್ಯರು ಪರಿಚಯಸ್ಥ ಯುವಜನತೆಯನ್ನು ಸಂಪರ್ಕಿಸಿ ಇಲ್ಲವೇ ದೂರವಾಣಿ ಕರೆ ಮಾಡಿ ಪೋಷಕರನ್ನು ಕಾಶಿಗೆ ಕಳುಹಿಸಿಕೊಡುವಂತೆ ಮನವೊಲಿಸುತ್ತಿದ್ದಾರೆ. ಇದರಲ್ಲಿ ಜಾತಿ ಸಂಘಟನೆಗಳು ಹೆಚ್ಚು ಕ್ರಿಯಾಶೀಲವಾಗಿದ್ದು ಕುಟುಂಬದವರು, ಹತ್ತಿರದ ಹಾಗೂ ದೂರದ ಸಂಬಂಧಿಕರು ಹೀಗೆ ಎಲ್ಲರೂ ಒಟ್ಟಾಗಿ ವಿಶ್ವನಾಥನ ದರ್ಶನ ಮಾಡಿ ಬರಬಹುದು ಎಂದು ಹೇಳುತ್ತಿದ್ದಾರೆ.

ಪೋಷಕರಿಗೆ ಪ್ರವಾಸ!: ಇತ್ತೀಚೆಗೆ ಜನರು ಅಧಿಕ ಸಂಖ್ಯೆಯಲ್ಲಿ ಕಾಶಿ ದರ್ಶನ ಯಾತ್ರೆಗೆ ಹೋಗುತ್ತಿ­ರುವುದನ್ನು ಕಂಡ ಕೆಲವು ರಾಜಕಾರಣಿಗಳು, ತಮ್ಮ ಬೆಂಬಲಿಗ ಯುವ ಕಾರ್ಯಕರ್ತರ ಪೋಷಕರನ್ನು ತಮ್ಮ ವೆಚ್ಚದಲ್ಲಿಯೇ ಕಾಶಿ ಯಾತ್ರೆಗೆ ಕಳುಹಿಸಿಕೊಡುವ ವ್ಯವಸ್ಥೆ ಮಾಡುತ್ತಿದ್ದಾರೆ. ಚುನಾವಣೆ ಸಮಯದಲ್ಲಿ ತಮ್ಮ ಪರವಾಗಿ ದುಡಿಯುವ ಕಾರ್ಯಕರ್ತರನ್ನು ಸೆಳೆಯುವ ಲೆಕ್ಕಾಚಾರ ರಾಜಕಾರಣಿಗಳದ್ದಾಗಿದೆ. ಅನೇಕ ಮುಖಂಡರು ಕಾರ್ಯಕರ್ತರ ಪೋಷಕರು ಮಾರ್ಚ್‌ ತಿಂಗಳ ಒಳಗಾಗಿಯೇ ಕಾಶಿ ದರ್ಶನ ಮಾಡಿ ಬರುವ ವ್ಯವಸ್ಥೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.