ಲಕ್ಷ್ಮಣ ಸವದಿ ಕಾಂಗ್ರೆಸ್ಗೆ? 13ರಂದು ಬೆಂಬಲಿಗರ ಜತೆ ಚರ್ಚಿಸಿ ತೀರ್ಮಾನ
Team Udayavani, Apr 12, 2023, 6:50 AM IST
ಬೆಂಗಳೂರು: ಬೆಳಗಾವಿ ಜಿಲ್ಲೆಯ ಅಥಣಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ತಪ್ಪಿರುವಂತೆಯೇ ಉಪ ಮಾಜಿ ಮುಖ್ಯಮಂತ್ರಿ, ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರಿಗೆ ಕಾಂಗ್ರೆಸ್ ಗಾಳ ಹಾಕಿದಂತೆ ಕಾಣುತ್ತಿದೆ.
ಅಥಣಿ ಶಾಸಕ ಮಹೇಶ ಕುಮಟಳ್ಳಿ ಬದಲಿಗೆ ತಮಗೆ ಟಿಕೆಟ್ ಕೊಡಬೇಕೆಂದು ಪಟ್ಟು ಹಿಡಿ ದಿರುವ ಸವದಿ, ಟಿಕೆಟ್ ಗಿಟ್ಟಿಸಲು ಕಸರತ್ತು ನಡೆಸಿದ್ದಾರೆ. ಈ ವಿಷಯದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಜತೆಗೂ ಮನಸ್ತಾಪ ಮಾಡಿ ಕೊಂಡಿ ದ್ದಾರೆ. ಜಾರಕಿ ಹೊಳಿ ತಮ್ಮ ಆಪ್ತ ಕುಮಟಳ್ಳಿಗೆ ಟಿಕೆಟ್ ಕೊಡ ಬೇಕೆಂದು ಪಟ್ಟು ಹಿಡಿದಿದ್ದಾರೆ. ಬಹುತೇಕ ಕುಮಟಳ್ಳಿಗೆ ಟಿಕೆಟ್ ಖಚಿತವಾದ ಹಿನ್ನೆಲೆಯಲ್ಲಿ ಸವದಿ ಈಗ ಕಾಂಗ್ರೆಸ್ ಕಡೆ ಮುಖ ಮಾಡಿದ್ದಾರೆ. ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ಮಾಜಿ ಸಚಿವರೊಬ್ಬರು ಸವದಿ ಅವರನ್ನು ಪಕ್ಷಕ್ಕೆ ಕರೆತರಲು ಪ್ರಯತ್ನ ನಡೆಸಿದ್ದಾರೆ. ಈ ಬಗ್ಗೆ ಪಕ್ಷದ ವರಿಷ್ಠರ ಜತೆಗೂ ಸಮಾಲೋಚನೆ ನಡೆಸಿ ದ್ದಾರೆ ಎನ್ನಲಾಗಿದೆ. ಬಿಜೆಪಿ ಟಿಕೆಟ್ ನಿರಾಕರಿಸಿದರೆ ಮಾತ್ರ ಪಕ್ಷ ತ್ಯಜಿಸುವ ಬಗ್ಗೆ ಯೋಚಿಸುವೆ.
ಅಲ್ಲಿಯವರೆಗೂ ಯಾವುದೇ ನಿರ್ಧಾರ ತೆಗೆದು ಕೊಳ್ಳುವು ದಿಲ್ಲವೆಂದು ಹೇಳಿದರೆನ್ನಲಾಗಿದೆ. ಎ. 13ರಂದು ಸವದಿ ಬೆಂಬಲಿಗರ ಸಭೆ ಕರೆದು ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ.
ಲಕ್ಷ್ಮಣ ಸವದಿ ಜತೆಗೆ ಸಂಪರ್ಕದಲ್ಲಿದ್ದೇನೆ. ಕುಮಟಳ್ಳಿ ಅವರು ಸರಕಾರ ರಚನೆಗೆ ಕಾರಣರಾದವರು. ಹೀಗಾಗಿ ದುಡುಕಿನ ನಿರ್ಧಾರ ತೆಗೆದುಕೊಳ್ಳದಂತೆ ಸವದಿ ಅವರಿಗೆ ಸೂಚಿಸಿದ್ದೇನೆ.
- ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.