ಲಕ್ಷ್ಮೀ ಹೆಬ್ಬಾಳಕರ ಪರ ಶಿವರಾಜಕುಮಾರ್ ರೋಡ್ ಶೋಗೆ ಜನಸಾಗರ

ಸುಳೇಭಾವಿ ಶ್ರೀ ಮಹಾಲಕ್ಷ್ಮೀ ದೇವಿ ದರ್ಶನ ಪಡೆದ ಶಿವಣ್ಣ ದಂಪತಿ

Team Udayavani, May 6, 2023, 10:25 PM IST

1-shu

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಪರ ಪ್ರಚಾರಕ್ಕೆ ಆಗಮಿಸಿದ್ದ ಹ್ಯಾಟ್ರಿಕ್‌ ಹಿರೋ ಶಿವರಾಜಕುಮಾರ ಹಾಗೂ ಪತ್ನಿ ಗೀತಾ ಅವರೊಂದಿಗೆ ಶನಿವಾರ ಸುಳೇಭಾವಿ ಶ್ರೀ ಮಹಾಲಕ್ಷ್ಮೀ ದೇವಿಯ ದರ್ಶನ ಪಡೆದು ನಂತರ ವಿವಿಧ ಕಡೆಗೆ ರೋಡ್ ಶೋ ನಡೆಸಿದರು.

ಸುಳೇಭಾವಿಯಲ್ಲಿ ಸಂಜೆ 4 ಗಂಟೆಯಿಂದಲೇ ಜನರು ಶಿವಣ್ಣ ಅವರಿಗಾಗಿ ಕಾದು ಕುಳಿತಿದ್ದರು. ಜನಸಾಗರವೇ ಹರಿದು ಬಂದು ಶಿವಣ್ಣನನ್ನು ನೋಡಿ ಕಣ್ತುಂಬಿಕೊಂಡರು.

ಅಲ್ಲಿಂದ ಶಿಂಧೋಳ್ಳಿಗೆ ಆಗಮಿಸಿ ರೋಡ್ ಶೋ ನಡೆಸಿದರು. ರೋಡ್ ಶೋ ವೇಳೆ ನಾನಿರುವುದೇ ನಿಮಗಾಗಿ…. ಬೊಂಬೆ ಹೇಳುತೈತಿ… ಯಾರೇ ಕೂಗಾಡಲಿ ಹಾಡು ಹೇಳು ಮೂಲಕ ಅಭಿಮಾನಿಗಳ ಉತ್ಸಾಹ ಹೆಚ್ಚಿಸಿದರು.

ಈ ವೇಳೆ ಮಾತನಾಡಿದ ಶಿವಣ್ಣ, ದೇವರ ಆಶಿರ್ವಾದ, ನಿಮ್ಮೆಲ್ಲರ ಆಶಿರ್ವಾದದಿಂದ ಲಕ್ಷ್ಮೀ ಹೆಬ್ಬಾಳಕರ ಗೆಲ್ಲುವುದು ಖಚಿತ. ಅವರು ಈಗಾಗಲೇ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಇನ್ನೂ ಹೆಚ್ಚಿನ ಅಭಿವೃದ್ಧಿ ಮಾಡುತ್ತಾರೆ. ಅವರಿಗೆ ನಿಮ್ಮ ಆಶಿರ್ವಾದ ಹೀಗೆಯೇ ಇರಲಿ ಎಂದು ಕೋರಿದರು.

ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಮಾತನಾಡಿ, ಇನ್ನು ನಾಲ್ಕೇ ದಿನದಲ್ಲಿ ಚುನಾವಣೆ ನಡೆಯಲಿದೆ. ನನಗೆ ಆಶಿರ್ವಾದ ಮಾಡಿ, ನಾವೆಲ್ಲರೂ ಸೇರಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸೋಣ ಎಂದು ಹೇಳಿದರು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾರಹಾಕಿ ಗೌರವಿಸಿದರು. ನಂತರ ಹೊನ್ನಿಹಾಳದಲ್ಲಿಯೂ ಭಾರೀ ಜನಸ್ತೋಮದ ಮಧ್ಯೆ ಶಿವರಾಜಕುಮಾರ ಅವರಿಂದ ರೋಡ್ ಶೋ ನಡೆಯಿತು.

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮುಖಂಡರಾದ ಮಹೇಶ ಸುಗಣೆನ್ನವರ, ಬಸನಗೌಡ ಹುಂಕರಿಪಾಟೀಲ, ಮೃಣಾಲ್ ಹೆಬ್ಬಾಳಕರ, ಶಂಕರಗೌಡ ಪಾಟೀಲ, ನಾಗೇಶ ದೇಸಾಯಿ, ಗಂಗಣ್ಣ ಕಲ್ಲೂರ, ಬಸವರಾಜ ಮ್ಯಾಗೋಟಿ, ನೀಲೇಶ ಚಂದಗಡಕರ, ರಜತ ಉಳ್ಳಾಗಡ್ಡಿಮಠ ಇತರರು ಇದ್ದರು.

ತಂಗಿ ನಿನ್ನ ನಗುವಲ್ಲೊಂದು ಪುಟ್ಟ ನಗುವಿದೆ…ಹಾಡಿನ ಮೂಲಕ ಲಕ್ಷ್ಮೀ ಗೆ ಶಿವಣ್ಣ ಹಾರೈಕೆ

ಶಿವಣ್ಣ ಶ್ರೀ ಮಹಾಲಕ್ಷ್ಮೀ ದೇವಿಗೆ ಪೂಜೆ ಸಲ್ಲಿಸಿದರು. ಸುಳೇಭಾವಿಗೆ ಶಿವರಾಜ ಕುಮಾರ ಆಗಮಿಸುತ್ತಿದ್ದಂತೆ ಸೇರಿದ್ದ ಜನಸ್ತೋಮ ಶಿವರಾಜ ಕುಮಾರ ಪರ ಹಾಗೂ ಲಕ್ಷ್ಮೀ ಹೆಬ್ಬಾಳಕರ ಪರ ಘೋಷಣೆ ಕೂಗಿದರು. ಶಿವಣ್ಣಗೆ ಜಯವಾಗಲಿ, ಕಾಂಗ್ರೆಸ್ ಗೆ ಜಯವಾಗಲಿ ಎಂಬ ಘೋಷಣೆ ಮೊಳಗಿತು. ನಂತರ ಶಿವಣ್ಣ, ತಂಗಿ ನಿನ್ನ ನಗುವಲ್ಲೊಂದು ಪುಟ್ಟ ನಗುವಿದೆ… ಆ ನಗುವಿಗಾಗಿ ತವರು ಕಾದಿದೆ ಎಂಬ ಹಾಡು ಹಾಡುವ ಮೂಲಕ‌ ಜನರನ್ನು ರಂಜಿಸಿದರು. ಈ‌ ಹಾಡಿನ ಮೂಲಕವೇ ಹೆಬ್ಬಾಳಕರ ಅವರನ್ನು ಹಾರೈಸಿದರು. ಹೆಣ್ಮಕ್ಕಳೇ‌ ಸ್ಟ್ರಾಂಗು ಗುರು ಎಂದು ಹೆಬ್ಬಾಳಕರ ಪರ ಮತಯಾಚಿಸಿದರು.

ಟಾಪ್ ನ್ಯೂಸ್

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

2-bng

Bengaluru: ಪಾನಮತ್ತ ವೈದ್ಯ, ನರ್ಸ್‌ನಿಂದ ರೋಗಿಗೆ ಬೇಕಾಬಿಟ್ಟಿ ಇಂಜೆಕ್ಷನ್‌ ?

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

7-bunts

Mangaluru: ಡಿ. 7: ಮುಂಬಯಿಯಲ್ಲಿ ವಿಶ್ವ ಬಂಟರ ಸಮಾಗಮ

6-udupi

Udupi: ಪ್ರಧಾನಿ ಸಹೋದರ ಸೋಮು ಬಾೖ ಶ್ರೀ ಕೃಷ್ಣಮಠಕ್ಕೆ ಭೇಟಿ

Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ

Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ

5-MAHE

MAHE Convocation: ನ. 8-10: ಮಾಹೆ ಘಟಿಕೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.