Mallikarjuna Kharge ರಾಜಕೀಯ ಕಣದಲ್ಲಿ ಗೆಲುವಿಗಾಗಿ ಜಿದ್ದಾಜಿದ್ದಿ


Team Udayavani, May 2, 2023, 6:23 AM IST

ಮಲ್ಲಿಕಾರ್ಜುನ ಖರ್ಗೆ ರಾಜಕೀಯ ಕಣದಲ್ಲಿ ಗೆಲುವಿಗಾಗಿ ಜಿದ್ದಾಜಿದ್ದಿ

ಗುರುಮಠಕಲ್‌: ಇಲ್ಲಿಂದ ತಮ್ಮ ರಾಜಕೀಯ ಆರಂಭಿಸಿದ್ದ ಮಲ್ಲಿಕಾರ್ಜುನ ಖರ್ಗೆ ಇಂದು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೇರಿದ್ದಾರೆ. ಇನ್ನು ಕಣಕ್ಕಿಳಿದು ಅಬ್ಬರಿ ಸಿರುವ ಬಾಬುರಾವ್‌ ಚಿಂಚನಸೂರು ಕೂಡ ಸಪ್ತ ಖಾತೆ ಸಚಿವರಾಗಿ ಗಮನ ಸೆಳೆದಿದ್ದರು. ಅಂತಹ ಕ್ಷೇತ್ರದ 2023ರ ಚುನಾವಣೆ ತ್ರಿಕೋನ ಸ್ಪರ್ಧೆಯ ಕಣವಾಗಿ ಮಾರ್ಪಟ್ಟಿದೆ. ಅಲ್ಲದೆ ಒಂದೆಡೆ ಪತಿಗಾದ ಗಾಯದ ಅನುಕಂಪ, ಇನ್ನೊಂದೆಡೆ ಹೊಸ ಮುಖದ ಅದೃಷ್ಟ ಮತ್ತು ಯುವಕ ನಾಯಕತ್ವ ಅಗ್ನಿ ಪರೀಕ್ಷೆಯಲ್ಲಿದೆ.

ಕ್ಷೇತ್ರದಲ್ಲಿ ಕೋಲಿ ಸಮಾಜದ ಮತಗಳೇ ನಿರ್ಣಾಯಕ. ಇದರಿಂದಾಗಿಯೇ ಎಲ್ಲ ಪಕ್ಷಗಳು ಕೋಲಿ ಸಮಾಜದ ಮುಖಂಡರಿಗೆ ಮಣೆ ಹಾಕುವುದು ವಾಡಿಕೆ. ಮಾಜಿ ಸಚಿವ ಹಾಲಿ ಕಣದಲ್ಲಿರುವ ಅಭ್ಯರ್ಥಿ ಬಾಬುರಾವ್‌ ಚಿಂಚನಸೂರು 2 ಬಾರಿ ಕಾಂಗ್ರೆಸ್‌ನಿಂದ ಗೆಲುವು ಸಾಧಿಸಿ 2018ರಲ್ಲಿ ಬಿಜೆಪಿಗೆ ಜಿಗಿದು ಸೋಲುಂಡಿದ್ದರು. ಆದರೆ ಬದಲಾದ ರಾಜಕಾರಣದಲ್ಲಿ ಪುನಃ ಈ ಬಾರಿ ಚಿಂಚನಸೂರು ಕಾಂಗ್ರೆಸ್‌ ಅಭ್ಯರ್ಥಿ. ಪ್ರಚಾರ ಸಮಯದಲ್ಲಿ ಉಂಟಾದ ಅಪಘಾತದಲ್ಲಿ ದೊಡ್ಡ ಪ್ರಮಾಣದಲ್ಲಿ ಕಾಲಿಗೆ ಪೆಟ್ಟು ತಿಂದು ದೊಡ್ಡ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಜೀವಾಪಾಯದಿಂದ ಪಾರಾಗಿದ್ದಾರೆ. ಅವರ ಪತ್ನಿ ಅಮರೇಶ್ವರಿ ಚಿಂಚನಸೂರು ಕಾಲಿಗೆ ಚಕ್ರ ಕಟ್ಟಿಕೊಂಡು ಛಲ ಹೊತ್ತ ಮಹಿಳೆಯಾಗಿ ಪತಿಯನ್ನು ಗೆಲ್ಲಿಸಿ ಎಂದು ಸೆರಗೊಡ್ಡಿ ಪ್ರಚಾರ ಮಾಡುತ್ತಿದ್ದಾರೆ.

ಇನ್ನು ಹಾಲಿ ಶಾಸಕ ನಾಗನಗೌಡ ಕಂದಕೂರು 2018ರಲ್ಲಿ ಕಾಂಗ್ರೆಸ್‌ ಕೋಟೆಯನ್ನು ಛಿದ್ರ ಮಾಡಿ ಅಖಾಡದಲ್ಲಿ ಗೆದ್ದು ಬೀಗಿದ್ದರು. ಇವರು ಕೂಡ ಇಡೀ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಯುವಕರ ದಂಡು ಕಟ್ಟಿಕೊಂಡು ಪ್ರಚಾರಕ್ಕೆ ಇಳಿದಿದ್ದಾರೆ. ಕುಮಾರಸ್ವಾಮಿ ಸಿಎಂ ಇದ್ದಾಗ ಮಾಡಿದ್ದ ಕಾರ್ಯ ಗಳು, ಈಗ ಘೋಷಣೆ ಮಾಡಿರುವ ಪ್ರಣಾಳಿಕೆ ಘೋಷಣೆಗಳನ್ನೇ ಗುರಾಣಿ ಮಾಡಿಕೊಂಡು ಸಂಚಲನ ಉಂಟು ಮಾಡಿದ್ದಾರೆ. ಅದಲ್ಲದೆ ಯುವಕರತ್ತ ಮತದಾರರು ಭರವಸೆಯಿಡುವಂತೆ ಕೆಲಸವೂ ಮಾಡಿ ತೋರಿಸುವ ಪಣವನ್ನು ತೊಟ್ಟಿದ್ದಾರೆ.

ಹೊಸ ಮುಖ ಹೊಸ ಸವಾಲು: ಕೋಲಿ ಸಮಾಜದವರೇ ಆಗಿರುವ ಬಿಜೆಪಿಯ ಹೊಸ ಅನ್ವೇಷಣೆ ಲಲಿತಾ ಅನಪೂರ. ಬಿಜೆಪಿಯಲ್ಲಿ ಕೊಟ್ಟ ಕೆಲಸ ವನ್ನು ನಿಷ್ಠೆಯಿಂದ ಮಾಡಿ ಮಹಿಳಾ ಪಡೆ ಬಲಗೊಳಿಸುವಲ್ಲಿ ಶ್ರಮಿಸಿದವರು. ಇವರಿಗೆ ಟಿಕೆಟ್‌ ನೀಡಿದ್ದು ರಾಜ್ಯದಲ್ಲಿಯೇ ಅಚ್ಚರಿ ಮೂಡಿಸಿತ್ತು. ಹಿಂದುಳಿದ ವರ್ಗದ ಕೋಟಾ ಕಾಪಾಡಲು ಈ ಆಯ್ಕೆ ಎಂದೂ ಹೇಳಲಾಗುತ್ತಿದೆ. ಈಗಾಗಲೇ ಯಾದಗಿರಿ ನಗರಸಭೆ ಅಧ್ಯಕ್ಷರಾಗಿ ತಮ್ಮ ಆಡಳಿತ ವೈಖರಿ ಪರಿಚ ಯಿಸಿದ್ದಾರೆ. ಇವರ ಓಡಾಟ, ಜನರ ಒಡನಾಟ ಇದ್ದರೂ ನಾಡಿಮಿಡಿತ ಅರಿವುದು ದೊಡ್ಡ ಸವಾಲಾಗಿದೆ. ಟಿಕೆಟ್‌ ಆಕಾಂಕ್ಷಿ ನಾಗರತ್ನ ಕುಪ್ಪಿ ಪ್ರಚಾರದಿಂದ ದೂರ ಉಳಿದಿರುವುದು ಬಿಜೆಪಿಗೆ ದೊಡ್ಡ ಹಿನ್ನಡೆ ಎಂದೇ ಭಾವಿಸಲಾಗುತ್ತಿದೆ. ಒಟ್ಟಾರೆಯಾಗಿ ಕ್ಷೇತ್ರದಲ್ಲಿ ತ್ರಿಕೋನ ಹೋರಾಟ ಕಾಣಿಸುತ್ತಿದ್ದು ಯಾರಿಗೆ ಗೆಲುವು ಎಂಬುದು ಕೂತುಹಲಕ್ಕೆಡೆ ಮಾಡಿದೆ.

-ಚನ್ನಕೇಶವಲು ಗೌಡ

ಟಾಪ್ ನ್ಯೂಸ್

Road Mishap: ತೆಕ್ಕಟ್ಟೆ: ಇನ್ನೋವಾ, ಮೀನಿನ ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಗಂಭೀರ

Road Mishap: ಕುಂಭಾಶಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ… ಇಬ್ಬರು ಗಂಭೀರ

police crime

UP bypolls; ನಿಯಮ ಉಲ್ಲಂಘನೆ: 7 ಪೊಲೀಸರನ್ನು ಅಮಾನತುಗೊಳಿಸಿದ ಚುನಾವಣ ಆಯೋಗ

Terror 2

Pakistan;ಬಲೂಚಿಸ್ಥಾನದಲ್ಲಿ ಉಗ್ರರ ವಿರುದ್ಧ ಸಮಗ್ರ ಕಾರ್ಯಾಚರಣೆಗೆ ಮುಂದಾದ ಪಾಕ್

Bagheera OTT Release: ಭರ್ಜರಿ ಸಕ್ಸಸ್‌ ಕಂಡ ʼಬಘೀರʼ ಓಟಿಟಿ ಎಂಟ್ರಿಗೆ ಡೇಟ್‌ ಫಿಕ್ಸ್

Bagheera OTT Release: ಭರ್ಜರಿ ಸಕ್ಸಸ್‌ ಕಂಡ ʼಬಘೀರʼ ಓಟಿಟಿ ಎಂಟ್ರಿಗೆ ಡೇಟ್‌ ಫಿಕ್ಸ್

1-eeqweqweqwe

India Gate; ಅಸಹ್ಯ ಟವೆಲ್ ಡ್ಯಾನ್ಸ್ ಮಾಡಿದ ಮಾಡೆಲ್: ಆಕ್ರೋಶ

court

Kallakurichi ಕಳ್ಳಭಟ್ಟಿ ದುರಂತ: ಪ್ರಕರಣ ಸಿಬಿಐಗೆ ನೀಡಿದ ಮದ್ರಾಸ್ ಹೈಕೋರ್ಟ್

Ram Charan: ಅಯ್ಯಪ್ಪನ ಮಾಲೆ ಧರಿಸಿ ದರ್ಗಾಕ್ಕೆ ಭೇಟಿ ಕೊಟ್ಟ ರಾಮ್ ಚರಣ್; ಭಾರೀ ಟೀಕೆ

Ram Charan: ಅಯ್ಯಪ್ಪನ ಮಾಲೆ ಧರಿಸಿ ದರ್ಗಾಕ್ಕೆ ಭೇಟಿ ಕೊಟ್ಟ ರಾಮ್ ಚರಣ್; ಭಾರೀ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

14-uv-fusion

UV Fusion: ಮೊದಲ ಬಾರಿ ಲೇಖನಿ ಹಿಡಿದ ಅನುಭವ

13–uv-fusion

UV Fusion: ಹೃದಯದಲ್ಲಿ ಬಾಲ್ಯದ ಮಿಡಿತ

Road Mishap: ತೆಕ್ಕಟ್ಟೆ: ಇನ್ನೋವಾ, ಮೀನಿನ ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಗಂಭೀರ

Road Mishap: ಕುಂಭಾಶಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ… ಇಬ್ಬರು ಗಂಭೀರ

12-uv-fusion

UV Fusion: ಇನ್ನಾದರು ಎಚ್ಚೆತ್ತುಕೊಂಡು ಕನ್ನಡ ಶಾಲೆ ರಕ್ಷಿಸಿ

11-uv-fusion

UV Fusion: ಕುಟುಂಬ ಎಂಬ ಬೆಚ್ಚಗಿನ ರಕ್ಷಾ ಕವಚ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.