ದಾವಣಗೆರೆಯಲ್ಲಿ ಬಿಜೆಪಿಗೆ ನೆಲೆ ಕಲ್ಪಿಸಿದ್ದ “ಉತ್ತರಾಧಿಪತಿ’

Team Udayavani, Apr 5, 2023, 6:15 AM IST

ದಾವಣಗೆರೆಯಲ್ಲಿ ಬಿಜೆಪಿಗೆ ನೆಲೆ ಕಲ್ಪಿಸಿದ್ದ “ಉತ್ತರಾಧಿಪತಿ’

ದಾವಣಗೆರೆ: ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎ. ರವೀಂದ್ರನಾಥ್‌ ಈ ಬಾರಿ ಸ್ಪರ್ಧಿಸದಿರಲು ನಿರ್ಧರಿಸಿರುವುದು ದಾವಣಗೆರೆ ಜಿಲ್ಲೆಯ ಎಲ್ಲ ಏಳು ಕ್ಷೇತ್ರಗಳನ್ನು ಗೆದ್ದು ಭದ್ರಕೋಟೆ ಎಂದು ಮತ್ತೊಮ್ಮೆ ಸಾಬೀತುಪಡಿಸುವ ಉತ್ಸಾಹದಲ್ಲಿರುವ ಬಿಜೆಪಿಯಲ್ಲಿ ತಲ್ಲಣ ಮೂಡಿಸಿದೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಅಂದಿನ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ವಿರುದ್ಧ ಕಣಕ್ಕಿಳಿದಿದ್ದ ರವೀಂದ್ರನಾಥ್‌ ಗೆಲ್ಲುತ್ತಾರೆ ಎಂಬ ಆಸೆ ಸ್ವತಃ ಕಮಲ ಪಾಳಯಕ್ಕೂ ಇರಲಿಲ್ಲ. ಅದನ್ನೇ ಸವಾಲಾಗಿ ಸ್ವೀಕರಿಸಿದ್ದ ರವೀಂದ್ರನಾಥ್‌ ಮನೆ ಮನೆಗೆ ತೆರಳಿ ನಡೆಸಿದ ಅತ್ಯಂತ ವ್ಯವಸ್ಥಿತ ಪ್ರಚಾರ ಅವರನ್ನು ಗೆಲುವಿನ ದಡ ಸೇರಿಸಿತ್ತು. ಕಳೆದ ಚುನಾವಣೆಯಲ್ಲಿ ಊಹೆಗೂ ನಿಲುಕದ ರೀತಿಯಲ್ಲಿ ಕಾಂಗ್ರೆಸ್‌ಗೆ ಸೋಲುಣಿಸಿದ್ದಲ್ಲದೆ ಉತ್ತರ ಕ್ಷೇತ್ರವನ್ನು ಮತ್ತೆ ಬಿಜೆಪಿ ತೆಕ್ಕೆಗೆ ತಂದು ಕೊಟ್ಟಿದ್ದರು. ಆದರೆ ಈಗ 2023ರ ಚುನಾವಣೆ ರಂಗೇರುತ್ತಿರುವ ಸಂದರ್ಭದಲ್ಲೇ ಅನಾರೋಗ್ಯದ ಕಾರಣದಿಂದ ಸ್ಪರ್ಧೆಯಿಂದ ಹಿಂದೆ ಸರಿದಿರುವುದು ಬಿಜೆಪಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ.

70ರ ದಶಕದಲ್ಲಿ ಸ್ವಗ್ರಾಮ ಶಿರಮಗೊಂಡನಹಳ್ಳಿಯ ಸೊಸೈಟಿಯಲ್ಲಿ ಮಹಿಳೆಯೊಬ್ಬರಿಗೆ ಅರ್ಧ ಕೆಜಿ ಸಕ್ಕರೆ ಕೊಡಲು ನಿರಾಕರಿಸಿದ್ದನ್ನು ಪ್ರಶ್ನಿಸಲು ಹೋಗಿದ್ದ ರವೀಂದ್ರನಾಥ್‌ ಅವರಿಗೆ ಕೆಲವರು ಆಡಿದ್ದ ಮಾತನ್ನೇ ಸವಾಲಾಗಿ ಸ್ವೀಕರಿಸಿ ರಾಜಕೀಯ ಕ್ಷೇತ್ರ ಪ್ರವೇಶಿಸಿದ್ದರು. ಅನಂತರ ಯಡಿಯೂರಪ್ಪ ಅವರ ಸಂಪುಟದಲ್ಲಿ ಸಕ್ಕರೆ ಖಾತೆಯನ್ನೇ ನಿರ್ವಹಿಸುವಷ್ಟರ ಮಟ್ಟಿಗೆ ಬೆಳೆದರು ಎಂಬುದೇ ರೋಚಕ.

ಮೂಲತಃ ರೈತಾಪಿ ಕುಟುಂಬದ ಅವರು, ದಾವಣಗೆರೆ ಭಾಗದ ಜೀವನಾಡಿ ಭದ್ರಾ ಅಚ್ಚುಕಟ್ಟು ಕೊನೆಯ ಭಾಗದಲ್ಲಿ ನೀರಿಗಾಗಿ ಸಾಕಷ್ಟು ಹೋರಾಟ ನಡೆಸಿ ಶಿಕ್ಷೆಗೂ ಒಳಗಾದವರು. ಕೃಷಿಯನ್ನೇ ಅವಲಂಬಿಸಿದ್ದ ಅವರು ಕೃಷಿ ಇಲಾಖೆ ಸಚಿವರಾಗಿದ್ದರು. ಜತೆಗೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯನ್ನೂ ನಿರ್ವಹಣೆ ಮಾಡಿದ್ದರು.

ಬಿಜೆಪಿಗೆ ನೆಲೆ ಒದಗಿಸಿದ ನಾಯಕ:
ದಾವಣಗೆರೆ ಎಪಿಎಂಸಿಯಲ್ಲಿ ದಲ್ಲಾಳಿ ಅಂಗಡಿ ಇಟ್ಟುಕೊಂಡಿದ್ದ ರವೀಂದ್ರನಾಥ್‌, ವಿದ್ಯಾರ್ಥಿ ದೆಸೆಯಿಂದಲೇ ಜನಸಂಘದತ್ತ ಒಲವು ಹೊಂದಿದ್ದರು. ಜನಸಂಘದ ಬೆರಳೆಣಿಕೆಯಷ್ಟು ಕಾರ್ಯಕರ್ತರಲ್ಲಿ ಮುಂಚೂಣಿಯಲ್ಲಿದ್ದ ಅವರು 1983ರಲ್ಲಿ ಅಸ್ತಿತ್ವಕ್ಕೆ ಬಂದ ಬಿಜೆಪಿಯೊಂದಿಗೆ ಗುರುತಿಸಿಕೊಂಡರು.

ಬಿಜೆಪಿಯಲ್ಲೇ ಇದ್ದರೆ ಯಾವುದೇ ಕಾರಣಕ್ಕೂ ಉದ್ಧಾರ ಆಗೋಲ್ಲ, ಬರೀ ಬಾವುಟ ಹಿಡಿಯೋಕೆ, ಧ್ವಜ ಕಟ್ಟೋಕೆ ಮಾತ್ರ ಇರಿ¤àಯಾ, ಬಿಜೆಪಿ ಬಿಟ್ಟು ಬೇರೆ ಪಕ್ಷ ಸೇರಿಕೋ’ ಎಂಬ ಮಾತುಗಳನ್ನು ರವೀಂದ್ರನಾಥ್‌ ಅನೇಕ ಬಾರಿ ಕೇಳಿದ್ದರು. ತಮ್ಮ ನಾಯಕ ಯಡಿಯೂರಪ್ಪ ಅವರೇ ಪಕ್ಷ ತೊರೆದು ಕೆಜೆಪಿ ಕಟ್ಟಿದರೂ ಬಿಜೆಪಿಯಲ್ಲೇ ಮುಂದುವರೆದಿದ್ದು ಅವರ ಪಕ್ಷ ನಿಷ್ಠೆಗೆ ಸಾಕ್ಷಿ.

ದಾವಣಗೆರೆಯಲ್ಲಿ ಕಾಂಗ್ರೆಸ್‌ ಅಭೇದ್ಯ ಕೋಟೆಯನ್ನೇ ಹೊಂದಿತ್ತು.ಅಂತಹ ಸಂದರ್ಭದಲ್ಲೂ ಜಿಲ್ಲೆಯಲ್ಲಿ ಬಿಜೆಪಿ ಗಟ್ಟಿಯಾಗಿ ಬೇರೂರಲು ರವೀಂದ್ರನಾಥ್‌ ಪ್ರಮುಖರು ಎಂದರೆ ಅತಿಶಯೋಕ್ತಿ ಎನಿಸದು. 1992ರ ಲೋಕಸಭಾ ಚುನಾವಣೆಯಲ್ಲಿ ಚನ್ನಯ್ಯ ಒಡೆಯರ್‌ ವಿರುದ್ಧ ಸ್ಪ ರ್ಧಿಸಿದ್ದ ರವೀಂದ್ರನಾಥ್‌, ಕೆಲವೇ ಮತಗಳ ಅಂತರದಲ್ಲಿ ಸೋತರೂ ದಾವಣಗೆರೆಯಲ್ಲಿ ಬಿಜೆಪಿಗೆ ಭದ್ರ ನೆಲೆ ಒದಗಿಸಿಕೊಟ್ಟಿದ್ದರು. 1994ರ ಮಾಯಕೊಂಡ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಚಿವೆ ನಾಗಮ್ಮ ಕೇಶವಮೂರ್ತಿ ಅವರನ್ನು ಸೋಲಿಸಿದ ರವೀಂದ್ರನಾಥ್‌, ಅವಿಭಜಿತ ಚಿತ್ರದುರ್ಗ ಜಿಲ್ಲೆಯ ಮೊಟ್ಟ ಮೊದಲ ಬಿಜೆಪಿ ಶಾಸಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ನಂತರದ ಎರಡೂ ಚುನಾವಣೆಯಲ್ಲಿ ಸತತ ಗೆಲುವು ಸಾಧಿ ಸುವ ಮೂಲಕ ಹ್ಯಾಟ್ರಿಕ್‌ ಸಾಧನೆ ಮಾಡಿದರು. 2008ರಲ್ಲಿ ಅಸ್ತಿತ್ವಕ್ಕೆ ಬಂದ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಈವರೆಗೆ ನಡೆದಿರುವ ಮೂರು ಚುನಾವಣೆಗಳಲ್ಲಿ ರವೀಂದ್ರನಾಥ್‌ ಎರಡು ಬಾರಿ ಗೆಲುವು ಸಾಧಿಸಿದ್ದಾರೆ.

ಪರ್ಯಾಯ ಅಭ್ಯರ್ಥಿ ಯಾರು?
ದಾವಣಗೆರೆ ಉತ್ತರಾ ಧಿಪತಿ ಸ್ಥಾನಕ್ಕೆ ಸಮರ್ಥ ಪರ್ಯಾಯ ಅಭ್ಯರ್ಥಿ ಆಯ್ಕೆಗೆ ಬಿಜೆಪಿ ಮುಂದಾಗಿದೆ. ದಾವಣಗೆರೆ ಉತ್ತರ ಕ್ಷೇತ್ರದಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಮಾಜಿ ಮೇಯರ್‌ ಎಸ್‌.ಟಿ. ವೀರೇಶ್‌, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಸ್‌. ಜಗದೀಶ್‌, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಲೋಕಿಕೆರೆ ನಾಗರಾಜ್‌, ಬಯಲುಸೀಮೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಅಣಬೇರು ಜೀವನಮೂರ್ತಿ ಜೊತೆಗೆ ಅಚ್ಚರಿ ಎನ್ನುವಂತೆ ಸಂಸದ ಜಿ.ಎಂ. ಸಿದ್ದೇಶ್ವರ ಅವರ ಪುತ್ರ ಜಿ.ಎಸ್‌.ಅನಿತ್‌ಕುಮಾರ್‌ ಹೆಸರು ಸಹ ಕೇಳಿ ಬರುತ್ತಿದೆ. ಯಾರಿಗೆ ಟಿಕೆಟ್‌ ದೊರೆಯಬಹುದು ಎಂಬುದೇ ಕುತೂಹಲ ಮೂಡಿಸಿದೆ. ಇನ್ನು ಎರಡು ದಿನಗಳಲ್ಲಿ ವಿಶೇಷ-ಅಚ್ಚರಿಯ ಬೆಳವಣಿಗೆಯನ್ನು ಕಾಣಬಹುದು ಎಂದು ಸ್ವತಃ ರವೀಂದ್ರನಾಥ್‌ ಹೇಳಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.

-ರಾ. ರವಿಬಾಬು

ಟಾಪ್ ನ್ಯೂಸ್

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.