ಕಾಂಗ್ರೆಸ್‌, ಜೆಡಿಎಸ್‌ಗೆ ಬಿಜೆಪಿ, ಪಕ್ಷೇತರರ ಸವಾಲು


Team Udayavani, May 6, 2023, 3:35 PM IST

ಕಾಂಗ್ರೆಸ್‌, ಜೆಡಿಎಸ್‌ಗೆ ಬಿಜೆಪಿ, ಪಕ್ಷೇತರರ ಸವಾಲು

ದೇವನಹಳ್ಳಿ: ಬೆಂಗಳೂರಿಗೆ ಸಮೀಪವಿರುವ ದೇವನ ಹಳ್ಳಿ ಮೀಸಲು ವಿಧಾನಸಭಾ ಕ್ಷೇತ್ರವಾಗಿದ್ದು, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಭದ್ರನೆಲೆಯಾಗಿದೆ. ಎರಡೂ ಪಕ್ಷಗಳ ನಡುವೆ ಈ ಬಾರಿ ನೇರ ಹಣಾಹಣಿ ಇದೆ. ಬಿಜೆಪಿಯೂ ಪ್ರಬಲ ಪೈಪೋಟಿ ಒಡ್ಡುವ ಲಕ್ಷಣಗಳು ಗೋಚರಿಸುತ್ತಿವೆ.

ದೇವನಹಳ್ಳಿ ವಿಧಾನಸಭಾ ಕ್ಷೇತ್ರವು ಮೀಸಲು ಕ್ಷೇತ್ರವಾಗಿದ್ದು 2.12ಲಕ್ಷ ಮತದಾರರನ್ನು ಹೊಂದಿದೆ. ಎಸ್‌.ಸಿ., ಎಸ್‌.ಟಿ., ಒಕ್ಕಲಿಗ, ಹಿಂದುಳಿದ ವರ್ಗದ ಮತದಾರರು ನಿರ್ಣಾಯಕ ಪಾತ್ರ ವಹಿಸುತ್ತಾರೆ. ಕಳೆದ ಎರಡೂ ಚುನಾವಣೆಗಳಲ್ಲಿ ಜೆಡಿಎಸ್‌ ಭದ್ರಕೋಟೆಯಂತಿರುವ ಮೀಸಲು ಕ್ಷೇತ್ರ ದಲ್ಲಿ ಕಾಂಗ್ರೆಸ್‌, ಬಿಜೆಪಿ ಜೊತೆಗೆ ಆಮ್‌ ಆದ್ಮಿ ಪಕ್ಷ ಹಾಗೂ ಪಕ್ಷೇತರ ಅಭ್ಯರ್ಥಿಯೂ ಸದ್ದು ಮಾಡುತ್ತಿದ್ದಾರೆ.

ಬಿಜೆಪಿಗೆ ಪ್ರಬಲ ನೆಲೆ ಇಲ್ಲ: ಈ ಕ್ಷೇತ್ರದಲ್ಲಿ ಹಿಂದಿನ ಚುನಾವಣೆಗಳ ಮತಗಳಿಕೆ ಪ್ರಮಾಣ ನೋಡಿದರೆ ಬಿಜೆಪಿಗೆ ಪ್ರಬಲವಾದ ನೆಲೆಯಿಲ್ಲ. ಆದರೆ, ಹಿಂದಿನ ಚುನಾವಣೆಗಳಲ್ಲಿ ಪಡೆದ ಮತಗಳಿ ಗಿಂತ ಈ ಬಾರಿ ಹೆಚ್ಚು ಮತಗಳು ಬಿಜೆಪಿ ತೆಕ್ಕೆಗೆ ದೊರೆಯುವ ಸಾಧ್ಯತೆಗಳಿವೆ.

ಕಣದಲ್ಲಿರುವ ನಾಲ್ವರು ಪ್ರಬಲ: 2023ರ ಚುನಾವಣೆಯಲ್ಲಿ ಕ್ಷೇತ್ರದಿಂದ ಜೆಡಿಎಸ್‌ನಿಂದ ಹಾಲಿ ಶಾಸಕ ಎಲ್‌.ಎನ್‌.ನಾರಾಯಣಸ್ವಾಮಿ, ಕಾಂಗ್ರೆಸ್ಸಿ ನಿಂದ ಮಾಜಿ ಕೇಂದ್ರ ಸಚಿವ ಕೆ.ಎಚ್‌.ಮುನಿಯಪ್ಪ, ಬಿಜೆಪಿಯಿಂದ ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ಹಾಗೂ ಆಮ್‌ ಆದ್ಮಿ ಪಕ್ಷದಿಂದ ತಾಪಂ ಮಾಜಿ ಅಧ್ಯಕ್ಷ ಬಿ.ಕೆ.ಶಿವಪ್ಪ, ಸಮಾಜ ಸೇವಕ ವೆಲ್ಫೇರ್‌ ಮಂಜು ನಾಥ್‌, ಇತರರು ಪಕ್ಷೇತರರಾಗಿ ಕಣದಲ್ಲಿದ್ದಾರೆ.

ಹಾಲಿ ಮಾಜಿಗಳ ನಡುವೆ ಫೈಪೋಟಿ: ಮಾಜಿ ಕೇಂದ್ರ ಸಚಿವ ಕೆ.ಎಚ್‌.ಮುನಿಯಪ್ಪ ಸ್ಪರ್ಧೆಯಿಂದ ದೇವನಹಳ್ಳಿ ಕ್ಷೇತ್ರವು ರಾಜ್ಯಮಟ್ಟದಲ್ಲಿ ಗುರ್ತಿಸಿ ಕೊಂಡಿದೆ. ಕ್ಷೇತ್ರದಲ್ಲೀಗ ಹಾಲಿ, ಮಾಜಿ ಶಾಸಕರ ನಡುವೆ ತೀವ್ರ ಪೈಪೋಟಿ ಸೃಷ್ಟಿಯಾಗಿದೆ. 2013 ಮತ್ತು 2018ರ ಚುನಾವಣೆಗಳಲ್ಲಿ ಜೆಡಿಎಸ್‌ ಶಾಸ ಕರು ಗೆದ್ದಿದ್ದಾರೆ. ಈ ಬಾರಿ ಗೆದ್ದರೆ ಹ್ಯಾಟ್ರಿಕ್‌ ಆಗಲಿದ್ದಾರೆ.

ಶಾಪ ವಿಮೋಚನೆ ಆಗುತ್ತಾ: ಒಂದು ಬಾರಿ ಗೆದ್ದ ಶಾಸಕರು ಮತ್ತೂಮ್ಮೆ ಗೆದ್ದಿರುವುದಿಲ್ಲ ಎಂಬ ಶಾಪ ವಿದ್ದು, ಈ ಶಾಪ ಏನಾದರೂ ವಿಮೋಚನೆ ಆಗಬ ಹುದು ಎಂಬ ಲೆಕ್ಕಾಚಾರ ಸಾರ್ವಜನಿಕರಲ್ಲಿ ಮೂಡು ತ್ತಿದೆ. ಜೆಡಿಎಸ್‌ನಲ್ಲಿ 2013ರಲ್ಲಿ ಪಿಳ್ಳಮುನಿಶಾಮಪ್ಪ ಶಾಸಕರಾಗಿದ್ದರು. 2018ರಲ್ಲಿ ಜೆಡಿಎಸ್‌ನಿಂದ ಎಲ್‌. ಎನ್‌.ನಾರಾಯಣಸ್ವಾಮಿ ಶಾಸಕರಾಗಿದ್ದರು. ಕಳೆದ ಹತ್ತು ವರ್ಷದಿಂದ ಜೆಡಿಎಸ್‌ ಶಾಸಕರಿದ್ದಾರೆ.

ಕಳೆದ ಬಾರಿ ಜೆಡಿಎಸ್‌ನಿಂದ “ಸಿ’ ಫಾರಂ: ಕಳೆದ ಬಾರಿ ಪಿಳ್ಳಮುನಿಶಾಮಪ್ಪಗೆ ಜೆಡಿಎಸ್‌ ಬಿ ಫಾರಂ ನೀಡಲಾಗಿತ್ತು. ಕೊನೆ ಕ್ಷಣದಲ್ಲಿ ನಾರಾಯಣಸ್ವಾಮಿ ಅವರಿಗೆ ಸಿ ಫಾರಂ ನೀಡಲಾಯಿತು. ದೇವನಹಳ್ಳಿ ಕ್ಷೇತ್ರದ ಇತಿಹಾಸದಲ್ಲಿ ಇದುವರೆಗೂ ಬಿಜೆಪಿ ಶಾಸಕರು ಗೆದ್ದಿಲ್ಲ. ತಾಲೂಕಿನಲ್ಲಿ ಅಷ್ಟು ಪ್ರಭಾವ ಹೊಂದಿಲ್ಲ. ಈ ಬಾರಿ ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ಅವರಿಗೆ ಟಿಕೆಟ್‌ ನೀಡಿರುವುದರಿಂದ ತಾಲೂಕಿನ ಎಲ್ಲೆಡೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.

ಭಿನ್ನಮತ ಶಮನ: ಮಾಜಿ ಕೇಂದ್ರ ಸಚಿವ ಕೆ.ಎಚ್‌. ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧಿ ಸುತ್ತಿರುವುದರಿಂದ ರಾಜ್ಯ ರಾಜಕಾರಣಕ್ಕೆ ಬಂದಿರು ವುದರಿಂದ ದೇವನಹಳ್ಳಿ ಕ್ಷೇತ್ರವು ಪ್ರತಿಷ್ಠೆಯ ಕಣವಾಗಿದೆ. ಕಾಂಗ್ರೆಸ್ಸಿನಲ್ಲಿದ್ದ ಭಿನ್ನಮತವನ್ನು ಶಮನ ಮಾಡಿ ಒಗ್ಗಟ್ಟಿನಿಂದ ಚುನಾವಣೆ ಎದುರಿಸುತ್ತಿದ್ದಾರೆ. ಕಾಂಗ್ರೆಸ್‌ ಕಳೆದ ಹತ್ತು ವರ್ಷಗಳಿಂದ ಶಾಸಕರನ್ನು ಕಳೆದುಕೊಂಡಿದೆ. ಆದರೆ, ಈ ಬಾರಿ ಕಾಂಗ್ರೆಸ್ಸಿನ ಎಲ್ಲಾ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಿನಿಂದ ಏನೇ ಆದರೂ ಕಾಂಗ್ರೆಸ್‌ ಶಾಸಕರನ್ನು ಗೆಲ್ಲಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ.

ಕೈ ತೆನೆಗೆ ನೇರ ಸ್ಪರ್ಧೆ: ದೇವನಹಳ್ಳಿಯಲ್ಲಿ ಕಳೆದೆರಡು ದಶಕದಲ್ಲಿ ಮೂರು ಬಾರಿ ಜೆಡಿಎಸ್‌, ಒಂದು ಬಾರಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. ಈ ಚುನಾವಣೆ ಯಲ್ಲೂ ಜೆಡಿಎಸ್‌, ಕಾಂಗ್ರೆಸ್‌ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ. ಆದರೆ, ಜೆಡಿಎಸ್‌ನಿಂದಲೇ ಟಿಕೆಟ್‌ ಕೈತಪ್ಪಿ ಪಿಳ್ಳಮುನಿಶಾಮಪ್ಪ ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ. ಇದು ಕಾಂಗ್ರೆಸ್‌ಗೆ ಲಾಭವಾಗುವ ಸಾಧ್ಯತೆಯಿದೆ. ಜೊತೆಗೆ ಮಾಜಿ ಸಂಸದ ಕೆ.ಎಚ್‌.ಮುನಿಯಪ್ಪ ಕ್ಷೇತ್ರಾದ್ಯಂತ ಬಿರುಸಿನ ಮತ ಪ್ರಚಾರ ನಡೆಸುತ್ತಿದ್ದು ಗೆಲುವು ದಕ್ಕುತ್ತ ಕಾದು ನೋಡಬೇಕು. ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಪರಸ್ಪರ ಸ್ಟಾರ್‌ ಪ್ರಚಾರಕರ ಮೊರೆ ಹೋಗುತ್ತಿದ್ದು, ಈ ಮಧ್ಯೆ ಆಮ್‌ ಆದ್ಮಿ, ಪಕ್ಷೇತರ ಅಭ್ಯರ್ಥಿಗಳು ಸಹ ಕಣದಲ್ಲಿ ಸದ್ದು ಮಾಡುತ್ತಿದ್ದಾರೆ. ಅಂತಿಮವಾಗಿ ಅದೃಷ್ಟ ಲಕ್ಷ್ಮೀ ಯಾರಿಗೆ ಒಲಿಯಲಿದ್ದಾಳೆ ಎನ್ನುವ ಕುತೂಹಲ ಸೃಷ್ಟಿಯಾಗಿದೆ.

ಕಳೆದೆರಡು ವರ್ಷಗಳಿಂದ ಕ್ಷೇತ್ರದಲ್ಲಿ ಸಮಾಜಸೇವೆ ಮಾಡಿಕೊಂಡು ಬಂದಿರುವ ವೆಲ್ಫೇರ್‌ ಫೌಂಡೇಷನ್‌ನ ಸಂಸ್ಥಾಪಕ ಮಂಜುನಾಥ್‌ ಪಕ್ಷೇತರರಾಗಿ ಸ್ಪರ್ಧಿಸಿ ತಾಲೂಕಾದ್ಯಂತ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ತಾಪಂ ಮಾಜಿ ಅಧ್ಯಕ್ಷ ಹಾಗೂ ಜಿಲ್ಲಾ ಹೋರಾಟ ಸಮಿತಿ ಸಂಚಾಲಕರಾಗಿದ್ದ ಬಿ.ಕೆ.ಶಿವಪ್ಪ ಪಕ್ಷದಿಂದ ಅಭ್ಯರ್ಥಿಯಾಗಿ ತಾಲೂಕಾ ದ್ಯಂತ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ದೇವನಹಳ್ಳಿ ಮೀಸಲು ವಿಧಾನಸಭಾ ಕ್ಷೇತ್ರವು ಕಾಂಗ್ರೆಸ್‌, ಜೆಡಿಎಸ್‌ ನಡುವೆ ನೇರ ಹಣಾಹಣಿಯಿದ್ದರೂ ಬಿಜೆಪಿಯು ತನ್ನದೇ ಆದ ಲೆಕ್ಕಾಚಾರವಿಟ್ಟುಕೊಂಡು ತಂತ್ರಗಾರಿಕೆ ರೂಪಿಸುತ್ತಿದೆ. ಮತದಾರ ಯಾರಿಗೆ ಮಣೆ ಹಾಕಲಿದ್ದಾನೆ ಎಂಬುವುದು ಚುನಾವಣಾ ಫ‌ಲಿತಾಂಶದ ಬಳಿಕ ಉತ್ತರ ಸಿಗಲಿದೆ.

ಮಂಡಲ್‌ ಪಂಚಾಯ್ತಿ, ಜಿಪಂ ಸದಸ್ಯ ನಾಗಿ, ಶಾಸಕನಾಗಿ, ಯಾವುದೇ ಕಳಂಕ ಇಲ್ಲದೆ ದೇವನಹಳ್ಳಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದೇನೆ. ಪ್ರತಿ ಹೋಬ ಳಿಗೆ ವಸತಿ ಶಾಲೆ, ರಸ್ತೆ ಅಭಿವೃದ್ಧಿ, ಜಿಲ್ಲಾಡಳಿತ ಭವನ ನಿರ್ಮಿಸಿದ್ದೇನೆ. ಇದು ನನಗೆ ಶ್ರೀರಕ್ಷೆ – ಪಿಳ್ಳಮುನಿಶಾಮಪ್ಪ, ಬಿಜೆಪಿ ಅಭ್ಯರ್ಥಿ

ಕಾಂಗ್ರೆಸ್‌ ಸರ್ಕಾರಕ್ಕೆ ಅಧಿಕಾರಕ್ಕೆ ಬಂದ್ರೆ 10 ಕೇಜಿ ಅಕ್ಕಿ, ಗೃಹ ಜ್ಯೋತಿ ಯೋಜನೆಯಡಿ 200 ಯೂನಿಟ್‌ ಉಚಿತ ವಿದ್ಯುತ್‌, ಯುವನಿಧಿ ಹೀಗೆ ಎಲ್ಲಾ ವರ್ಗದ ಬಲವರ್ಧನೆಗೆ ಶ್ರಮಿಸಲಾಗುವುದು. ಕೇಂದ್ರ ಸಚಿವನಾಗಿದ್ದಾಗ ಗ್ರಾಮಾಂತರ ಜಿಲ್ಲೆಗೆ ಕೊಡುಗೆ ನೀಡಿದ್ದು, ನನ್ನ ಗೆಲವಿಗೆ ಶ್ರೀರಕ್ಷೆ – ಕೆ.ಎಚ್‌.ಮುನಿಯಪ್ಪ, ಕಾಂಗ್ರೆಸ್‌ ಅಭ್ಯರ್ಥಿ

ನಾನು ಶಾಸಕನಾದ ಮೇಲೆ ತಾಲೂ ಕಿನಲ್ಲಿ 75 ವರ್ಷಗಳಿಂದ ಆಗದಂತಹ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಒಂದು ಗ್ರಾಮಕ್ಕೆ 1 ರಿಂದ 5 ಕೋಟಿ ರೂ.ವರೆಗೆ ಅನುದಾನ ನೀಡಿದ್ದೇನೆ. ನನ್ನ ಅಭಿವೃದ್ಧಿ ಕಾರ್ಯ ನೋಡಿ ಜನ ಆಯ್ಕೆ ಮಾಡುತ್ತಾರೆ. – ನಾರಾಯಸ್ವಾಮಿ, ಜೆಡಿಎಸ್‌ ಅಭ್ಯರ್ಥಿ.

ಎಸ್‌.ಮಹೇಶ್‌

ಟಾಪ್ ನ್ಯೂಸ್

Chalavadi

Ambedkar Row: ಕಾಂಗ್ರೆಸ್‌ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chalavadi

Ambedkar Row: ಕಾಂಗ್ರೆಸ್‌ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.