ವಾಹನಗಳಲ್ಲಿ ಪಕ್ಷದ ಚಿಹ್ನೆ , ನಾಯಕರ ಭಾವಚಿತ್ರಕ್ಕೆ ಕಡಿವಾಣ; ಪರವಾನಿಗೆ ರದ್ದು ಎಚ್ಚರಿಕೆ
Team Udayavani, Apr 5, 2023, 6:22 AM IST
ಉಡುಪಿ: ಟ್ಯಾಕ್ಷಿ, ಬಸ್, ಕಾರು, ಆಟೋರಿಕ್ಷಾ, ದ್ವಿಚಕ್ರ ವಾಹನ ಸಹಿತ ವಿವಿಧ ವಾಹನಗಳಲ್ಲಿ ರಾಜಕೀಯ ಪಕ್ಷದ ಚಿಹ್ನೆ ಹಾಗೂ ಅಭ್ಯರ್ಥಿಗಳ ಫೋಟೋಗಳನ್ನು ಲಗತ್ತಿಸಿದರೆ ದಂಡ ಬೀಳುವುದು ಖಚಿತ.
ವಿಧಾನಸಭಾ ಚುನಾವಣೆ ನಿಮಿತ್ತ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣ ಆಯೋಗದ ನಿರ್ದೇಶನದಂತೆ ಜಿಲ್ಲೆಯ ಎಲ್ಲ ಆಟೋರಿಕ್ಷಾಗಳಲ್ಲಿ ರಾಜಕೀಯ ಸಂಬಂಧಿತ ಪೋಸ್ಟರ್‌ಗಳನ್ನು ತೆರವುಗೊಳಿಸಬೇಕು ಮತ್ತು ಯಾವುದೇ ರೀತಿಯ ರಾಜಕೀಯ ಸಂಬಂಧಿತ ಪೋಸ್ಟರ್‌ಗಳನ್ನು ಅಳವಡಿಸದಂತೆ ಆಟೋರಿಕ್ಷಾ ಚಾಲಕರು ಹಾಗೂ ಮಾಲಕರು ಕ್ರಮಕೈಗೊಳ್ಳಬೇಕು. ತಪ್ಪಿದಲ್ಲಿ ಅಂತಹ ವಾಹನ ಗಳ ಪರವಾನಿಗೆಯನ್ನು ರದ್ದುಗೊಳಿಸಿ, ಎಫ್‌ಐಆರ್ ದಾಖಲಿಸಲು ಶಿಫಾರಸು ಮಾಡಲಾಗುವುದು ಎಂದು ಆರ್‌ಟಿಒ ತಿಳಿಸಿದ್ದಾರೆ.
ಈ ಬಗ್ಗೆ ಈಗಾಗಲೇ ಆದೇಶ ಹೊರಡಿಸಲಾಗಿದೆ. ಕೆಲವು ವಾಹನಗಳಲ್ಲಿ ಇನ್ನೂ ಕೂಡ ರಾಜಕೀಯ ಪಕ್ಷಗಳ ನಾಯಕರ ಭಾವಚಿತ್ರಗಳು ರಾರಾಜಿಸುತ್ತಿದದ್ದು, ಈ ಬಗ್ಗೆಯೂ ಕಠಿನ ಕ್ರಮ ತೆಗೆದುಕೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
6 ತಿಂಗಳು ಪರವಾನಿಗೆ ರದ್ದು
ಆಯೋಗದ ಎಚ್ಚರಿಕೆಯ ಹೊರತು ಕೂಡ ಈ ನಿಯಮಾ ವಳಿಗಳನ್ನು ಉಲ್ಲಂ ಸಿದ್ದೇ ಆದಲ್ಲಿ ಅಂತಹ ವಾಹನದ ಪರವಾನಿಗೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸುವ ಬಗ್ಗೆ ಆರ್‌ಟಿಒ ತಿಳಿಸಿದ್ದಾರೆ. ಆಸೆ, ಆಮಿಷಗಳಿಗೆ ಒಳಗಾಗಿ ಅಭ್ಯರ್ಥಿಗಳಿಗೆ ಪುಕ್ಸಟೆ ಪ್ರಚಾರ ನೀಡುವ ಮುನ್ನ ತುಸು ಯೋಚಿಸುವುದು ಉತ್ತಮ. ಈಗಾಗಲೇ ಅಳವಡಿಸಿದವರು ಅದನ್ನು ತೆಗೆಯುವುದು ಕೂಡ ಉತ್ತಮ ಎನ್ನುತ್ತಾರೆ ಸಾರಿಗೆ ಇಲಾಖೆಯ ಅಧಿಕಾರಿಗಳು.
ತಪಾಸಣೆ ಚುರುಕು
ಬಸ್ಸು, ಆಟೋರಿಕ್ಷಾ ಸಹಿತ ವಾಹನಗಳಲ್ಲಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಾಗುತ್ತಿದೆಯೇ ಎಂಬ ಬಗ್ಗೆಯೂ ಪೊಲೀಸರು ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳು ತಪಾಸಣೆ ಮುಂದುವರಿಸಿದ್ದಾರೆ. ಚುನಾವಣೆ ನಿಮಿತ್ತ ಅಧಿಕೃತವಾಗಿ ಪ್ರಚಾರ ಮಾಡಬಯಸುವವರು ಮುಂಗಡವಾಗಿ ಅನುಮತಿ ತೆಗೆದುಕೊಳ್ಳುವುದು ಅತೀ ಅಗತ್ಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಹೊಸ ಸೇರ್ಪಡೆ
Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ
Bengaluru: ಅಪರಾಧ, ರೌಡಿಸಂ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಿ: ಡಿಜಿಪಿ ಸೂಚನೆ
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.