BJP ಮಾಮನೊ.. ನಿಮ್ ಅತ್ತೇನೊ 30%.. ; ಸುದೀಪ್ ಗೆ ಟಾಂಗ್ ನೀಡಿದ ಪ್ರಕಾಶ್ ರಾಜ್
Team Udayavani, Apr 6, 2023, 9:09 PM IST
ಬೆಂಗಳೂರು : ಬಿಜೆಪಿ ಪರ ಪ್ರಚಾರ ಮಾಡುವುದಾಗಿ ಘೋಷಿಸಿದ ನಟ ಸುದೀಪ್ ವಿರುದ್ಧ ನಟ ಪ್ರಕಾಶ್ ರಾಜ್ ಅವರು ಆಕ್ರೋಶ ಹೊರ ಹಾಕಿದ್ದಾರೆ.
”ನೋಡ್ರಪ್ಪ… ನಿಮ್ ಮಾಮನೊ.. ನಿಮ್ ಅತ್ತೇನೊ.. ನಿಮ್ ಕಷ್ಟಕಾಲದಲ್ಲಿ ಸಹಾಯ ಮಾಡಿದ್ರೆ.. ನೀವು ದುಡಿದಿದ್ರಲ್ಲಿ 10%..20% ಇಲ್ಲ 30 % ಕೊಡಿ….. ಅದು ನಿಮ್ಮಿಷ್ಟ .. ಆದ್ರೆ .. ಪ್ರಜೆಗಳ 30% ಕೊಳ್ಳೆ ಹೊಡೆಯೊಕ್ ಬಿಡ್ಬೀಡಿ .. ಅಷ್ಟೆ..ಅಷ್ಟೇ..ಎಂದು ಟ್ವೀಟ್ ಮಾಡಿದ್ದಾರೆ.
”ಪ್ರೀತಿಯ ಸುದೀಪ್.. ಎಲ್ಲರೂ ಪ್ರೀತಿಸುವ ಕಲಾವಿದರಾಗಿ.. ನೀವು ಜನರ ಧ್ವನಿಯಾಗುತ್ತೀರಿ ಎಂದು ನಾನು ನಿರೀಕ್ಷಿಸಿದ್ದೆ. ಆದರೆ ನೀವು ರಾಜಕೀಯ ಪಕ್ಷದೊಂದಿಗೆ ಬಣ್ಣ ಹಚ್ಚಲು ಆಯ್ಕೆ ಮಾಡಿಕೊಂಡಿದ್ದೀರಿ.” ಎಂದು ಟ್ವೀಟ್ ನಲ್ಲಿ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.
Dear Sudeep.. as an artist loved by everyone one.. I had expected you to be a voice of the people. But you have chosen to colour yourself with a political party .. WELL .. Get ready to answer ..every question a citizen will ask YOU and YOUR party .@KicchaSudeep #justasking
— Prakash Raj (@prakashraaj) April 6, 2023
”..ಕರ್ನಾಟಕದಲ್ಲಿ ಸೋಲುವ ಭಯದಲ್ಲಿ .. ಭ್ರಷ್ಟ BJP ಹರಡುತ್ತಿರುವ ಸುಳ್ಳು ಸುದ್ದಿ ಎಂದು ನಾನು ನಂಬುತ್ತೇನೆ .. ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ..”ಎಂದು ಸುದೀಪ್ ಬೆಂಬಲ ಘೋಷಿಸುವುದಕ್ಕೂ ಮುನ್ನ ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದರು. ಈ ಕುರಿತು ಸುದ್ದಿಗೋಷ್ಠಿ ಯಲ್ಲಿ ಪ್ರತಿಕ್ರಿಯಿಸಿದ್ದ ಸುದೀಪ್ , ಪ್ರಕಾಶ್ ರಾಜ್ ಮೇರು ನಟ, ನಾನು ಯಾವಾಗ ಅವರೊಂದಿಗೆ ಮುಂದಿನ ಚಿತ್ರ ಮಾಡುವುದು ಎಂದು ಕಾಯುತ್ತಿದ್ದೇನೆ ಎಂದು ಹೇಳಿಕೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.