ಜೆಡಿಎಸ್ ಟಿಕೆಟ್ ಘೋಷಣೆಗೂ ಮುನ್ನ BJP ಶಕ್ತಿ ಪ್ರದರ್ಶಿಸಿದ ಪ್ರೀತಂ ಗೌಡ
ಜನಸಾಗರ ಕಂಡು ಹೊಳೆನರಸೀಪುರದವರು ಟಿಕೆಟ್ ಬೇಡ ಎಂದು ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದಾರೆ...
Team Udayavani, Apr 14, 2023, 9:02 PM IST
ಹಾಸನ : ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಶಾಸಕ ಪ್ರೀತಂ ಗೌಡ ಗೌಡ ಅವರು ಶುಕ್ರವಾರ ಬೃಹತ್ ರೋಡ್ ಶೋ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಿದ್ದಾರೆ.
ಸಾವಿರಾರು ಕಾರ್ಯಕರ್ತರು ಬೃಹತ್ ರೋಡ್ ಶೋನಲ್ಲಿ ಭಾಗಿಯಾಗುವ ಮೂಲಕ ಪ್ರೀತಂ ಗೌಡ ಅವರಲ್ಲಿ ಹೊಸ ರಣೋತ್ಸಾಹ ಮೂಡಿಸಿದರು.
ಸಾಲಗಾಮೆ ರಸ್ತೆ, ಕ್ರೀಡಾಂಗಣದ ಮುಂಭಾಗದಿಂದ ಹೊರಟ ಬೃಹತ್ ರೋಡ್ ಶೋ ಬಿ.ಎಂ.ರಸ್ತೆಯಲ್ಲಿ ಮುಕ್ತಾಯವಾಯಿತು. ಬಸ್ ಗೂಡ್ಸ್ ವಾಹನಗಳಲ್ಲಿ ಜಿಲ್ಲೆಯ ವಿವಿಧೆಡೆಯಿಂದಲೂ ಬಂದಿದ್ದ ಸಾವಿರಾರು ಕಾರ್ಯಕರತರು ತಲೆಗೆ ಬಿಳಿ ಕ್ಯಾಪ್ ಧರಿಸಿ ಗಮನ ಸೆಳೆದರು. ಬಿಜೆಪಿ ಮುಖಂಡರು ಕುಡಿಯುವ ನೀರು, ಊಟ ಮತ್ತಿತರ ವ್ಯವಸ್ಥೆಯನ್ನು ಮಾಡಿದ್ದರು. ಮೆರವಣಿಗೆಯುದ್ದಕ್ಲೂ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಪ್ರೀತಂಗೌಡ ಅವರು ಈ ವೇಳೆ ಮಾತನಾಡಿ, ನಾಮಪತ್ರ ಸಲ್ಲಿಕೆಗೂ ಮೊದಲು ಸಾವಿರಾರು ಜನರನ್ನು ಸೇರಿಸಿ ಹಾಸನದಲ್ಲಿ ಇತಿಹಾಸ ನಿರ್ಮಾಣ ಮಾಡಿದ್ದೇನೆ. ಸಾಮಾನ್ಯ ಕುಟುಂಬದಿಂದ ಬಂದ ನನ್ನನ್ನು ಮತ್ತೆ ಗೆಲ್ಲಿಸಬೇಕು ಎಂದು ನೀವು ಬಂದಿದ್ದೀರಿ, ನಿಮಗೆಲ್ಲ ನನ್ನ ಸಾಷ್ಟಾಂಗ ನಮಸ್ಕಾರಗಳು ಎಂದರು. ಇಂದಿನ ಜನಸಾಗರ ಕಂಡು ಹೊಳೆನರಸೀಪುರದವರು ಹಾಗೂ ಹಾಸನದ ಹೇಮಾವತಿ ನಗರದವರು ಟಿಕೆಟ್ ಬೇಡ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದು ಪರೋಕ್ಷವಾಗಿ ಭವಾನಿ ರೇವಣ್ಣ ಮತ್ತು ಹೆಚ್.ಪಿ.ಸ್ವರೂಪ್ ಅವರನ್ನು ಗೇಲಿ ಮಾಡಿದರು.
ಹೆಚ್.ಪಿ.ಸ್ವರೂಪ್ ಅವರಿಗೆ ಶುಕ್ರವಾರ ಜೆಡಿಎಸ್ ಟಿಕೆಟ್ ಘೋಷಿಸಿ ಬಿ ಫಾರ್ಮ್ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.