ಶೂನ್ಯ ಬಡ್ಡಿದರದಲ್ಲಿ ಶಿಕ್ಷಣ ಸಾಲ ನೀಡಿ
Team Udayavani, Mar 6, 2023, 6:15 AM IST
ಡಾ. ರೋಹಿಣಾಕ್ಷ ಶಿರ್ಲಾಲು, ಎಬಿವಿಪಿ
ರಾಜ್ಯ ಅಧ್ಯಕ್ಷರು
ಕರ್ನಾಟಕದ ಸಮಗ್ರ ಶಿಕ್ಷಣ ಕ್ಷೇತ್ರದ ಸುಧಾರಣೆಗಾಗಿ ದೂರದೃಷ್ಠಿಯ ಪ್ರಣಾಳಿಕೆ ಅಗತ್ಯವಿದೆ. ಸರಕಾರಗಳು ಶಿಕ್ಷಣ ಕ್ಷೇತ್ರವನ್ನು ಮೊದಲ ಆದ್ಯತೆಯಾಗಿ ಪರಿಗಣಿಸಬೇಕು. ಬಜೆಟ್‌ನಲ್ಲಿ ರಾಜ್ಯದ ಆದಾಯದ ಸೂಕ್ತ ಪಾಲನ್ನು ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಬೇಕು. ಮುಖ್ಯವಾಗಿ ನಮ್ಮ ರಾಜ್ಯದ ಶಾಲೆಗಳು, ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳು ಅಗತ್ಯ ಶಿಕ್ಷಕರ ಕೊರತೆಯಿಂದ ನಲುಗುತ್ತಿದೆ. ತರಗತಿಗೊಬ್ಬ ಶಿಕ್ಷಕರು ಶಾಲಾ ಶಿಕ್ಷಣದ ಅಗತ್ಯ. ಆದರೆ ನಮ್ಮ ಶಾಲೆಗಳಲ್ಲಿ ಹೀಗಿಲ್ಲ. ಕಾಲೇಜು ಮತ್ತು ವಿಶ್ವವಿದ್ಯಾನಿಲಯಗಳು ಅತಿಥಿ ಉಪನ್ಯಾಸಕರಿಂದಲೇ ನಡೆಯುತ್ತಿದೆ. ಹೀಗಿರುವಾಗ ಅತ್ಯುತ್ತಮ ಶಿಕ್ಷಣ ಸಿಗಲಾರದು. ಇದಕ್ಕಾಗಿ ಕಾಲ ಕಾಲಕ್ಕೆ ಭೋಧಕರ ನೇಮಕಾತಿಯಾಗಬೇಕು. ಹೊಸ ವಿಶ್ವ ವಿದ್ಯಾಲಯಗಳನ್ನು ಘೋಷಣೆ ಮಾಡಿದರೆ ಸಾಲದು. ನೇಮಕಾತಿ ಹಾಗೂ ಮೂಲಭೂತ ಅಗತ್ಯಗಳನ್ನು ಪೂರೈಸಬೇಕು. ಮುಂದಿನ 5 ವರ್ಷಗಳಲ್ಲಿ ಗುಣಮಟ್ಟದಲ್ಲಿ ನಂಬರ್ 1 ಆಗುವ ಕಾರ್ಯಯೋಜನೆ ರೂಪಿಸಬೇಕು.
ಶಿಕ್ಷಣ ಸಾಲ ಪಡೆಯುವ ವಿದ್ಯಾರ್ಥಿಗಳಿಗೆ ಹೊರೆಯಾಗಬಾರದು. ಕನಿಷ್ಠ 10 ಲಕ್ಷದ ವರೆಗೆ ಶೂನ್ಯ ಬಡ್ಡಿದರದಲ್ಲಿ ಶಿಕ್ಷಣ ಸಾಲ ನೀಡಬೇಕು.
ಶಾಲೆಗಳು ಆರಂಭವಾಗುತ್ತಿದ್ದಂತೆ ಮಕ್ಕಳಿಗೆ ಸಮವಸ್ತ್ರ ಶೂ ಗಳು ಸಿಗುವಂತಾಗಬೇಕು. ಸರಕಾರಿ ಕಾಲೇಜು ಮಕ್ಕಳು ನೀಟ್ ಸೇರಿ ದಂತೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಬೇಕಾದ ಉತ್ತಮ ತರಬೇತಿ ಕಲ್ಪಿಸಬೇಕು.
ಪ್ರಾಥಮಿಕ, ಪ್ರೌಢಶಾಲೆ ಹಂತದಲ್ಲಿ ಶಾಲೆ ತೊರೆಯುವ ಪ್ರಮಾಣ ಹೆಚ್ಚಾಗಿದ್ದು ಇದನ್ನು ತಪ್ಪಿಸಿ ಗರಿಷ್ಠ ಸಂಖ್ಯೆಯಲ್ಲಿ ಉನ್ನತ ಶಿಕ್ಷಣ ಪಡೆಯಲು ಬರುವಂತೆ ಮಾಡಲು ಪ್ರೇರಣೆ ನೀಡುವ ಯೋಜನೆ ರೂಪಿಸಬೇಕು.
ಇತ್ತೀಚಿಗೆ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು ಇದನ್ನು ತಡೆಗಟ್ಟಲು ಎಲ್ಲಾ ಶಾಲೆ ಕಾಲೇಜುಗಳಲ್ಲಿ ಕಡ್ಡಾಯವಾಗಿ ಆಪ್ತ ಸಮಾಲೋಚನೆ ವ್ಯವಸ್ಥೆ ಯನ್ನು ಜಾರಿ ತರಬೇಕು. ಇದಕ್ಕಾಗಿ ತರಬೇತಿ ಪಡೆದ ಆಪ್ತ ಸಮಾಲೋಚಕರ ನೇಮಕಾತಿ ಮಾಡಬೇಕು.
ರಾಷ್ಟ್ರೀಯ ಶಿಕ್ಷಣ ನೀತಿಯ ಪರಿಣಾಮಕಾರಿ ಜಾರಿಗೊಳಿಸಬೇಕು. ಪೂರ್ವ ಪ್ರಾಥಮಿಕ ಶಾಲೆಯ ಹಂತದಿಂದಲೇ ಇದನ್ನು ಜಾರಿಗೊಳಿಸಬೇಕು.
ಹಿಂದುಳಿದ ಜಿಲ್ಲೆಗಳ ಸಮಗ್ರ ಶಿಕ್ಷಣ ವ್ಯವಸ್ಥೆಯ ಸುಧಾರಣೆಗಾಗಿ 5 ವರ್ಷಗಳ ಪ್ರಾಯೋಗಿಕ ಕಾರ್ಯಯೋಜನೆ ರೂಪಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಹೊಸ ಸೇರ್ಪಡೆ
BBK11: ನಿಮ್ಮ ಸಹವಾಸನೇ ಬೇಡ.. ಎಲ್ಲದಕ್ಕೂ ಫುಲ್ ಸ್ಟಾಪ್ ಎಂದ ಮೋಕ್ಷಿತಾ; ಒಂಟಿಯಾದ ಮಂಜು
Waqf Land Issue: ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಕೆ ಶಿವಕುಮಾರ್
Jammu-Kashmir: ಕುಪ್ವಾರದಲ್ಲಿ ಸೇನಾ ಕಾರ್ಯಾಚರಣೆ… ಉಗ್ರನ ಹ*ತ್ಯೆ, ಶಸ್ತ್ರಾಸ್ತ್ರ ವಶ
Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ
Lalbag: ಪ್ಲಾಸ್ಟಿಕ್ ನಿಷೇಧ ಜಾರಿಗೆ ತಂಡಗಳ ರಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.