ಮಳೆಯಲ್ಲೇ ರಾಹುಲ್ ಗುಡುಗು: ಜೇವರ್ಗಿ ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಭಾಗಿ
ರಾಜ್ಯದ 40 ಪರ್ಸೆಂಟ್ ಕಳ್ಳರ ಸರಕಾರ ಕಿತ್ತೂಗೆಯಿರಿ
Team Udayavani, Apr 29, 2023, 7:53 AM IST
ಕಲಬುರಗಿ: ರಾಜ್ಯದಲ್ಲಿ ಶೇ. 40ರ ಭ್ರಷ್ಟ-ಕಳ್ಳರ ಬಿಜೆಪಿ ನೇತೃತ್ವದ ಸರಕಾರವನ್ನು ಜನತೆ ಕಿತ್ತೂಗೆಯಬೇಕು. ಬಿಜೆಪಿಗೆ 40 ಎಂದರೆ ಬಹಳ ಖುಷಿ. ಅದಕ್ಕಾಗಿ ಅವರನ್ನು 40 ಕ್ಷೇತ್ರಗಳಲ್ಲಿ ಮಾತ್ರವೇ ಗೆಲ್ಲಿಸಿ ಎಂದು ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಕರೆ ನೀಡಿದರು.
ಜೇವರ್ಗಿ ಪಟ್ಟಣದಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಸುರಿಯುವ ಮಳೆಯ ಮಧ್ಯೆ ಬಿಜೆಪಿ ವಿರುದ್ಧ ಗುಡುಗಿದ ಅವರು, ಕಾಂಗ್ರೆಸ್ ನೀಡಿದಂತೆ ನಮಗೆ ಗ್ಯಾರಂಟಿ ನೀಡುವುದು ಅಸಾಧ್ಯ ಎಂದು ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಹೇಳಿರುವುದು ಸತ್ಯ. ಶೇ. 40ರಷ್ಟು ಅವರೇ ತಿಂದು ಹಾಕಿದರೆ, ಇನ್ನು ಉಳಿದದ್ದರಲ್ಲಿ ಏನೂ ಮಾಡಲು ಸಾಧ್ಯ ವಿಲ್ಲ. ಅವರು ಸತ್ಯವನ್ನು ಒಪ್ಪಿಕೊಂಡಿದ್ದಾರೆ ಎಂದರು.
ಕೇವಲ ಶೇ. 12ರಷ್ಟು ಬಳಕೆ
ಮೂರ್ನಾಲ್ಕು ವರ್ಷಗಳಿಂದ ಬಿಜೆಪಿ ಸರಕಾರ ಸುಳ್ಳು ಹೇಳಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬಿಡುಗಡೆ ಮಾಡಿರುವ 3 ಸಾವಿರ ಕೋಟಿ ರೂ. ಅನುದಾನದಲ್ಲಿ ಶೇ. 12ರಷ್ಟು ಮಾತ್ರವೇ ಖರ್ಚು ಮಾಡಿದೆ. ಇವರಿಂದ ಇನ್ನೆಂತಹ ಅಭಿವೃದ್ಧಿ ನಿರೀಕ್ಷೆ ಮಾಡಬಹುದು? ಇವತ್ತಿನವರೆಗೂ ಬಿಜೆಪಿ ಸರಕಾರಕ್ಕೆ 50 ಸಾವಿರ ಸರಕಾರಿ ನೌಕರಿ ತುಂಬುವುದು ಸಾಧ್ಯವಾಗಿಲ್ಲ. ಇಂತಹ ಭ್ರಷ್ಟ ಮತ್ತು ಅಭಿವೃದ್ಧಿಗೇಡಿ ಸರಕಾರವನ್ನು ಕಿತ್ತೂಗೆಯಲು ಮನಸ್ಸು ಮಾಡಬೇಕು. ಈ ಬಾರಿ ಕಾಂಗ್ರೆಸ್ ಅಧಿ ಕಾರಕ್ಕೆ ಬರುವುದು ಶತಃಸಿದ್ಧ. ಕಾಂಗ್ರೆಸ್ಗೆ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಲಭಿಸಲಿದೆ ಎಂದರು.
ನಿಮ್ಮ ಆಶೀರ್ವಾದದಿಂದ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದರೆ ಖಾಲಿ ಇರುವ 50 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಐಐಟಿ, ಐಐಎಂ ಶಿಕ್ಷಣ ಸಂಸ್ಥೆಗಳ ಸ್ಥಾಪನೆ, ಕೆಕೆಆರ್ಡಿಬಿಗೆ 5,000 ಕೋಟಿ ರೂ., ಪ್ರತೀ ಗ್ರಾ.ಪಂ.ಗೆ 1 ಕೋಟಿ ರೂ. ಅನುದಾನ ನೀಡಲಾಗುವುದು. ಮಹಿಳೆಯರಿಗೆ ಸರಕಾರಿ ಬಸ್ಗಳಲ್ಲಿ ಓಡಾಡಲು ಉಚಿತ ಪಾಸ್ ನೀಡಲಾಗುವುದು.
– ರಾಹುಲ್ ಗಾಂಧಿ, ಎಐಸಿಸಿ ಮಾಜಿ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಹೊಸ ಸೇರ್ಪಡೆ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.