ಬಿಜೆಪಿ ಪಕ್ಷದ ಕಡೆಗೆ ರಾಮಸ್ವಾಮಿ ನಡೆ…
Team Udayavani, Mar 31, 2023, 6:52 AM IST
ಹಾಸನ: ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಅರಕಲಗೂಡು ಶಾಸಕ ಎ.ಟಿ.ರಾಮಸ್ವಾಮಿ ಈ ಹೊತ್ತಿಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಬೇಕಿತ್ತು. ಆದರೆ ಬದಲಾದ ಸನ್ನಿವೇಶದಲ್ಲಿ ಅವರು ಬಿಜೆಪಿ ಮನೆ ಬಾಗಿಲಲ್ಲಿ ನಿಂತುಕೊಂಡಿದ್ದಾರೆ.
ಮಾನಸಿಕವಾಗಿ ಜೆಡಿಎಸ್‌ನಿಂದ ಬಹಳ ಹಿಂದೆಯೇ ಹೊರಗೆ ಬಂದಿದ್ದ ರಾಮಸ್ವಾಮಿ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಪ್ರಯತ್ನಿಸಿದ್ದರು. ಆದರೆ ಕಾಂಗ್ರೆಸ್‌ನವರು ಟಿಕೆಟ್ ನೀಡುವ ಲಕ್ಷಣ ಕಾಣಿಸುತ್ತಿಲ್ಲ. ಹೀಗಾಗಿ ಕಮಲದ ಕಡೆ ಕಣ್ಣು ಹಾಯಿಸಿದ್ದಾರೆ. ಗುರುವಾರ ಬೆಂಗಳೂರಿನಲ್ಲಿ ಬಿಜೆಪಿ ನಾಯಕರೊಂದಿಗೆ ರಾಮಸ್ವಾಮಿ ಅವರು ಚರ್ಚೆ ನಡೆಸಿದ್ದು, ಇದಕ್ಕೆ ರಾಜ್ಯ ಮುಖಂಡರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಔಪಚಾರಿಕವಾಗಿ ದಿಲ್ಲಿ ನಾಯಕರ ಗಮನಕ್ಕೆ ತಂದು ಪಕ್ಷಕ್ಕೆ ಸೇರಿಸಿಕೊಳ್ಳುವುದನ್ನು ಖಚಿತಪಡಿಸುವುದಾಗಿ ರಾಜ್ಯ ನಾಯಕರು ಭರವಸೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.
ಕಳೆದ ಒಂದು ವರ್ಷದಿಂದಲೂ ಎ.ಟಿ.ರಾಮಸ್ವಾಮಿ ಅವರು ಜೆಡಿಎಸ್‌ನಿಂದ, ವಿಶೇಷವಾಗಿ ಎಚ್.ಡಿ.ರೇವಣ್ಣ ಅವರಿಂದ ಅಂತರಕಾಯ್ದುಕೊಂಡಿದ್ದರು. ಆದರೆ ದೇವೇಗೌಡರ ಸಂಪರ್ಕದಲ್ಲಿದ್ದರು. ಹಾಸನ ಜಿಲ್ಲೆಯಲ್ಲಿ ರೇವಣ್ಣ ಅವರನ್ನು ಎದುರು ಹಾಕಿಕೊಂಡು ಜೆಡಿಎಸ್‌ನಲ್ಲಿ ರಾಜಕಾರಣ ಮಾಡುವುದು ಕಷ್ಟ ಎಂದು ಭಾವಿಸಿದ್ದ ಅವರು ತಮ್ಮ ಮಾತೃಪಕ್ಷ ಕಾಂಗ್ರೆಸ್ ಸೇರುವ ಪ್ರಯತ್ನವನ್ನು ನಡೆಸಿದ್ದರು.
ವಿಚಿತ್ರವೆಂದರೆ, ಅದೇ ಹೊತ್ತಿಗೆ ಬಿಜೆಪಿಯಲ್ಲಿದ್ದ ಎ.ಮಂಜು ಕೂಡ ಕಾಂಗ್ರೆಸ್ ಸೇರ್ಪಡೆಗೆ ಪ್ರಯತ್ನ ನಡೆಸಿದ್ದರು. ಈ ಬೆಳವಣಿಗೆ ರಾಜ್ಯ ನಾಯಕರಿಗೇ ಗೊಂದಲ ಮೂಡಿಸಿತ್ತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎ.ಮಂಜು ಪರ ಬ್ಯಾಟಿಂಗ್ ನಡೆಸಿದ್ದರೆ, ಸಿದ್ದರಾಮಯ್ಯ ಎ.ಟಿ.ರಾಮಸ್ವಾಮಿ ಪರ ಒಲವು ತೋರಿ, ಎ.ಮಂಜು ಸೇರ್ಪಡೆಗೆ ಬಲವಾಗಿ ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಎ.ಮಂಜು ಜೆಡಿಎಸ್ ಸಹಿತ ಅರಕಲಗೂಡು ಟಿಕೆಟ್ ಖಚಿತಪಡಿಸಿಕೊಂಡರು.
ಎ.ಮಂಜು ಅವರು ಜೆಡಿಎಸ್ ಅಭ್ಯರ್ಥಿಯಾಗುವುದು ಖಚಿತವಾದ ಅನಂತರ ರಾಮಸ್ವಾಮಿ ಅವರು ಕಾಂಗ್ರೆಸ್ ಸೇರುವ ಪ್ರಯತ್ನ ತೀವ್ರಗೊಳಿಸಿದರು. ಆದರೆ ಅಷ್ಟರಲ್ಲಿ ಎಂ.ಟಿ.ಕೃಷ್ಣೇಗೌಡ ಅವರಿಗೆ ಕಾಂಗ್ರೆಸ್ ಟಿಕೆಟ್ ಅನ್ನು ಸಿದ್ದರಾಮಯ್ಯ ಅವರು ಖಚಿತಪಡಿಸಿದ್ದರು. ಹಾಗಾಗಿ ರಾಮಸ್ವಾಮಿ ಅವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳಲು ಸಿದ್ಧರಾಮಯ್ಯ ಅವರು ಉತ್ಸುಕರಾಗಿದ್ದರೂ ವಿಧಾನಸಭಾ ಚುನಾವಣೆ ಟಿಕೆಟ್ ಕೇಳಬೇಡಿ. ಲೋಕಸಭಾ ಚುನಾವಣೆಗೆ ಹಾಸನ ಕ್ಷೇತ್ರದ ಅಭ್ಯರ್ಥಿಯಾಗುವುದಾದರೆ ಕಾಂಗ್ರೆಸ್ ಸೇರ್ಪಡೆಗೆ ಸ್ವಾಗತ ಎಂದು ಸ್ಪಷ್ಟಪಡಿಸಿದ್ದರು.
ಬಿಜೆಪಿಯತ್ತ ಚಿತ್ತ
ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆಗಿಳಿಯದಿದ್ದರೆ ಲೋಕಸಭಾ ಚುನಾವಣೆ ವರೆಗೆ ತಮ್ಮ ಬೆಂಬಲಿಗರನ್ನು ಹಿಡಿದಿಟ್ಟುಕೊಳ್ಳುವುದು ಕಷ್ಟ. ಹಾಗಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲೇಬೇಕು ಎಂಬ ನಿರ್ಧಾರಕ್ಕೆ ಬಂದ ರಾಮಸ್ವಾಮಿ ಅವರು ಬಿಜೆಪಿ ಸೇರ್ಪಡೆಗೆ ನಿರ್ಧರಿಸಿದ್ದಾರೆ. ಆದರೆ ಈಗಾಗಲೇ ಕಳೆದ ಬಾರಿ ಬಿಜೆಪಿ ಅಭ್ಯರ್ಥಿಯಾಗಿದ್ದ ಯೋಗಾರಮೇಶ್ ಅವರು ಈ ಬಾರಿಯೂ ಬಿಜೆಪಿಯಿಂದ ಸ್ಪರ್ಧಿಸಬಯಸಿದ್ದರು. ಆದರೆ ಈಗ ಬಿಜೆಪಿ ಮುಖಂಡರು ಯೋಗಾರಮೇಶ್ ಅವರಿಗೆ ಯಾವ ಭರವಸೆ ನೀಡಿ ರಾಮಸ್ವಾಮಿ ಅವರನ್ನು ಸೇರಿಸಿಕೊಳ್ಳುತ್ತಿದ್ದಾರೆ ಎಂಬುದು ನಿಗೂಢವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಹೊಸ ಸೇರ್ಪಡೆ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.