Karkala: 5 ವರುಷಕ್ಕೊಮ್ಮೆ ಮನೆಬಾಗಿಲಿಗೆ ಬರುವ ಕಾಂಗ್ರೆಸ್ಸನ್ನು ತಿರಸ್ಕರಿಸಿ; ಸುನಿಲ್

ಹಿರ್ಗಾನ ಬಿಜೆಪಿ ಚುನಾವಣೆ ಕಾರ್ಯಾಲಯ ಉದ್ಘಾಟನೆ

Team Udayavani, Apr 25, 2023, 1:10 PM IST

Karkala: 5 ವರುಷಕ್ಕೊಮ್ಮೆ ಮನೆಬಾಗಿಲಿಗೆ ಬರುವ ಕಾಂಗ್ರೆಸ್ಸನ್ನು ತಿರಸ್ಕರಿಸಿ; ಸುನಿಲ್

ಕಾರ್ಕಳ; ಕೊರೊನಾ, ಪ್ರಾಕೃತಿಕ ಅವಘಡ ಸಂಭವಿಸಿ ಕ್ಷೇತ್ರದ ಜನ ಸಂಕಷ್ಟಕ್ಕೆ ಒಳಗಾಗಿ ನೋವಿನಲ್ಲಿದ್ದ ವೇಳೆ ಗುಹೆ ಸೇರಿಕೊಂಡಿದ್ದ ಕಾಂಗ್ರೆಸ್  ಈಗ ಚುನಾವಣೆ ವೇಳೆ ಯಾವ ಮುಖ ಹೊತ್ತುಕೊಂಡು ಜನರ ಬಳಿಗೆ ಹೋಗಿ ಮತ ಯಾಚಿಸುತ್ತಿದೆ?  5 ವರುಷಕ್ಕೊಮ್ಮೆ ಜನರ ಮನೆಬಾಗಿಲಿಗೆ  ಬರುವ ಕಾಂಗ್ರೆಸ್ಸನ್ನು ಕ್ಷೇತ್ರದ ಜನ ತಿರಸ್ಕರಿಸಬೇಕು ಎಂದು ಕಾರ್ಕಳ ಬಿಜೆಪಿ ಅಭ್ಯರ್ಥಿ ವಿ. ಸುನಿಲ್ ಕುಮಾರ್ ಕರೆ ನೀಡಿದರು.

ಕಾರ್ಕಳ ವಿಧಾನ ಸಭಾ ಕ್ಷೇತ್ರದ ಹಿರ್ಗಾನದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಕಾರ್ಯಾಲಯ ಉದ್ಘಾಟಿಸಿ ಅವರು ಮಾತನಾಡಿದರು. ಜನರ ಕಷ್ಟ- ಕಾರ್ಪಣ್ಯ ನೋವುಗಳಲ್ಲಿ ಬಿಜೆಪಿ ಜನರ ಜತೆ ನಿರಂತರವಾಗಿ ನಿಂತಿದೆ. ಜನಸಾಮಾನ್ಯರು ನಿತ್ಯ ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಅವರಿದ್ದ ಸ್ಥಳಕ್ಕೆ ತೆರಳಿ ಸಮಸ್ಯೆ ಆಲಿಸಿ ಅವರ ಕಷ್ಟಗಳನ್ನು ಪರಿಹರಿಸಿದ್ದೇವೆ. ಪ್ರತಿ ಹಳ್ಳಿಯ ಕಟ್ಟ ಕಡೆಯ ನಿವಾಸಿಯ ಕುಟುಂಬಕ್ಕೆ ಬಿಜೆಪಿ ಸ್ಪಂದಿಸಿದೆ. ಇತರೆಲ್ಲ ಸಮಯಗಳಲ್ಲಿ  ಸ್ಪಂದಿಸುವುದು ಇದ್ದಿದ್ದೆ, ಆದರೆ ಕೊರೊನಾ ಬಂದು   ಜನ ನೋವಿನಲ್ಲಿರುವಾಗ ಅವರ ಬಳಿ ತೆರಳಿ  ವೈದ್ಯಕೀಯ ಸೇವೆ, ಆರೋಗ್ಯ ತಪಾಸಣೆ, ಕಿಟ್  ನೀಡಿದಲ್ಲದೆ ನಾಗರಿಕರ ಆರೋಗ್ಯ, ಮಕ್ಕಳ ಆರೋಗ್ಯ ತಪಾಸಣೆ ನಡೆಸಿ ಹೆಚ್ಚಿನ ಹಾನಿ ಸಂಭವಿಸದಂತೆ ತಡೆದು ಕ್ರಮ ಕೈಗೊಂಡಿದ್ದೇವೆ.

ಮುಂಬಯಿ, ಪೂನಾದಲ್ಲಿರುವ ನಮ್ಮ‌ ಸ್ನೇಹಿತರು  ಮರಳಿ ಕ್ಷೇತ್ರಕ್ಕೆ ಬಂದಾಗ ಅವರಿಗೆ ಯಾವುದೇ ತೊಂದರೆ ಆಗದಂತೆ ಕ್ವಾರಂಟೈನ್ ಸ್ಥಾಪಿಸಿ, ವ್ಯವಸ್ಥೆ ಕಲ್ಲಿಸಿದ್ದೇವೆ. ಆಗ ಇದೇ ಕಾಂಗ್ರೆಸ್ಸಿಗರು ಎಲ್ಲಿ ಅಡಗಿ ಕುಳಿತಿದ್ದರು ಎಂದು ಪ್ರಶ್ನಿಸಿರುವ ಅವರು 5 ವರುಷ ಜನಸಾಮಾನ್ಯರ ಕಡೆ ತಿರುಗಿಯು ನೋಡದವರು ಈಗ ಚುನಾವಣೆ ಹೊತ್ತಲ್ಲಿ ನಾನಾ ಭರವಸೆ, ಗ್ಯಾರಂಟಿ ಕಾರ್ಡ್ ಗಳನ್ನು ಹಿಡಿದುಕೊಂಡು ವಿವಿಧ  ಮುಖವಾಡ ಹೊತ್ತು ಜನರ ಮನೆ ಬಾಗಿಲಿಗೆ ಬಂದು ಭರವಸೆಗಳನ್ನು ನೀಡುತ್ತಿದ್ದಾರೆ.

ಇಷ್ಟು ದಿನವೂ ಒಮ್ಮೆಯು ಕ್ಷೇತ್ರದ ಕಡೆ ತಿರುಗಿ ನೋಡದವರಿಗೆ ಈಗ ಜನರ ನೆನಪಾಗಿರುವುದು ಹಾಸ್ಯಾಸ್ಪದ ಎಂದು ಹೇಳಿದರು. ಕ್ಷೇತ್ರದ ಜನ ಸಮಸ್ಯೆಗೆ ಒಳಗಾದಗ, ಮೂಲಭೂತ ಸೌಕರ್ಯ ಕೇಳಿ ಬಂದಾಗ ಯಾವುದೇ ಜಾತಿ, ಧರ್ಮ ಎಂಬ ತಾರತಮ್ಯ ಮಾಡದೆ ಎಲ್ಲರಿಗೂ ಸಮಾನ ನ್ಯಾಯ ನೀಡಿದ್ದೇವೆ. ಇದನ್ನು ಕ್ಷೇತ್ರದ ಮತದಾರರು ಖಂಡಿತ ಅರ್ಥ ಮಾಡಿಕೊಳ್ಳುತ್ತಾರೆ.

ಈ ಚುನಾವಣೆಯಲ್ಲಿ ಅಪಪ್ರಚಾರ ನಡೆಸುವವರನ್ನು, 5 ವರುಷಕ್ಕೆ ಒಮ್ಮೆ ಮನೆಗಳಿಗೆ ಬರುವವರನ್ನು ತಿರಸ್ಕರಿಸಿ ಜನರ ಜತೆಗೆ ಸದಾ ಕಾಲವು ಇದ್ದ ಬಿಜೆಪಿ ಶಾಸಕನಾದ ನನ್ನನ್ನು ಬೆಂಬಲಿಸುವಂತೆ ಅವರು  ಮನವಿ ಮಾಡಿದರು. ಪ್ರಮುಖರಾದ ಸಂತೋಷ್ ಶೆಟ್ಟಿ, ಶಂಭು ಹೆಗ್ಡೆ, ಹರಿಶ್ಚಂದ್ರ ಕುಲಾಲ್ ಸಹಿತ ಅನೇಕ ಮಂದಿ ಗಣ್ಯರು, ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಕಡ್ತಲ ಬಿಜೆಪಿ ಕಾರ್ಯಕರ್ತರ ಸಭೆ

ಕಾಂಗ್ರೆಸ್ಸಿಗೆ ಮತ ನೀಡಿದರೆ ಹಿಂದೂ ವಿರೋಧಿ ಶಕ್ತಿಗಳು ವಿಜ್ರಂಂಬಿಸುತ್ತವೆ. ಹಿಂದೂಗಳ ರಕ್ಷಣೆ ಬಿಜೆಪಿಯಿಂದ ಮಾತ್ರ ಸಾಧ್ಯ. ಕಾಂಗ್ರೆಸ್ಸಿನ  ಆಸೆ, ಅಮಿಷ, ಜಾತಿ ರಾಜಕಾರಣಕ್ಕೆ  ಮತ ಹಾಕದೆ ಅಭಿವೃದ್ದಿಯನ್ನು ಬೆಂಬಲಿಸಿ ಎಂದು ಕಾರ್ಕಳ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ವಿ. ಸುನಿಲ್ ಕುಮಾರ್ ಹೇಳಿದರು.

ಕಡ್ತಲ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಕಾಂಗ್ರೆಸ್ ಮತೀಯವಾದಿಗಳ ಪರವಿದೆ. ಕಾಂಗ್ರೆಸ್ಸಿಗೆ ಹಾಕುವ ಒಂದೊಂದು ಮತವೂ ಅದು ಪಿಎಪ್ ಐ ಸಂಘಟನೆ ಬಲಪಡಿಸಿದಂತೆ. ಕಾಂಗ್ರೆಸ್ಸಿಗೆ ಮತ ನೀಡಿದರೆ ಹಿಂದೂ ವಿರೋಧಿಗಳು ಸಮಾಜದಲ್ಲಿ ವಿಜ್ರಂಭಿಸಿ ಕೇಕೆ ಹಾಕುತ್ತವೆ. ಮತ್ತೊಂದು ಅಪಘಾನಿಸ್ತಾನ ಆಗಲು ಬಿಡಬಾರದು ಎಂದರು. ಬಿಜೆಪಿ ಸರಕಾರ  ಗೋಹತ್ಯೆ, ಲವ್ ಜಿಹಾದ್, ಮತಾಂತರ ನಿಷೇಧ ಕಾನೂನುಗಳನ್ನು ತಂದು ಹಿಙದೂಗಳ ರಕ್ಷಣೆಗೆ ಕಂಕಣ ಬದ್ದವಾಗಿದೆ.

ಕಾಂಗ್ರೆಸ್ ನೇತ್ರತ್ವದ ಸರಕಾರ ಅಧಿಕಾರಕ್ಕೆ ಬಂದರೆ ಗೋ ಹತ್ಯೆ ನಿಷೇಧ, ಮತಾಂತರ ಕಾನೂನು ವಾಪಸ್ ಪಡೆಯುವ ಭರವಸೆಯನ್ನು ಈಗಾಗಲೇ ಆ ಪಕ್ಷದ ಮುಖಂಡರು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಇಂತಹವರಿಗೆ ಅಧಿಕಾರ ಸಿಕ್ಕರೆ  ರಾಜ್ಯದ ಜನತೆಯ ಅದರಲ್ಲೂ ಹಿಂದೂಗಳ ಪರಿಸ್ಥಿತಿ ಯಾವ ರೀತಿ ಇರಬಹುದು ಎಂದು ನೀವೊಮ್ಮೆ ಊಹಿಸಿ, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾಂಗ್ದೆಸ್ ಅಧಿಕಾರಕ್ಕೆ ಬರಬಾರದು. ಅದನ್ನು ತಡೆಯಲು ರಾಜ್ಯದಲ್ಲಿ ಮತ್ತು ಕಾರ್ಕಳ ವಿಧಾನ ಸಭಾ ಕ್ಷೇತ್ರ ಎರಡೂ  ಕಡೆ  ಬಿಜೆಪಿ ಶಾಸಕ ಇರಬೇಕು.  ಕ್ಷೇತ್ರದ ಮತದಾರರು ಈ ಎಲ್ಲ ಅಂಶವನ್ನು ಮನದಲ್ಲಿ ಇಟ್ಟುಕೊಂಡು ಬಿಜೆಪಿಯನ್ನು ಗೆಲ್ಲಿಸಿಕೊಡಬೇಕು ಎಂದರು.

ಪ್ರಮುಖರಾದ ದಿನೇಶ್ ಪೈ, ಸಂಜೀವ ಪೂಜಾರಿ, ದಯಾನಂದ ಹೆಗ್ಡೆ ಮೊದಲಾದ ಮುಖಂಡರು, ಕಾರ್ಯಕರ್ತರು ಉಪಸ್ಣಿತರಿದ್ದರು.

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

Kota-Shrinivas

Manipal: ಕೇಂದ್ರ ಸರಕಾರದ ಯೋಜನೆ ಫ‌ಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ

puttige-5

Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.