ಸಾಗರ: ಕೊನೆ ಕ್ಷಣದಲ್ಲಿ ಜೆಡಿಎಸ್ ಅಭ್ಯರ್ಥಿಯಿಂದ ನಿವೃತ್ತಿ ಘೋಷಣೆ !
ಬೇಳೂರು ಆಮಿಷಕ್ಕೆ ಬಲಿಯಾದೆ ಎಂಬ ವದಂತಿ ಹರಡಬಹುದು...
Team Udayavani, May 8, 2023, 10:32 PM IST
ಸಾಗರ: ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿದ್ದ ನಗರಸಭೆ ಸದಸ್ಯ ಸೈಯ್ಯದ್ ಜಾಕೀರ್ ಚುನಾವಣಾ ಕಣದಿಂದ ಹಿಂದಕ್ಕೆ ಸರಿದಿರುವುದಾಗಿ ಸೋಮವಾರ ಹೇಳಿಕೆ ನೀಡಿದ್ದಾರೆ. ಕಳೆದ ಮೂರ‍್ನಾಲ್ಕು ದಿನಗಳಿಂದ ಕಾಡಿರುವ ಅನಾರೋಗ್ಯ ಹಾಗೂ ಕೌಟುಂಬಿಕ ಕಾರಣಗಳಿಂದ ಈ ರೀತಿಯ ನಿವೃತ್ತಿಯ ಘೋಷಣೆ ಮಾಡಬೇಕಾಯಿತು ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.
ನನ್ನ ನಿರ್ಧಾರದ ಹಿಂದೆ ಯಾರದ್ದೇ ಒತ್ತಡ ಇಲ್ಲ. ಕೆಲವು ಹಿರಿಯರು ಈ ಬಾರಿ ಚುನಾವಣೆಯ ಸ್ಪರ್ಧೆ ಬೇಡ ಎಂದು ಸಲಹೆ ನೀಡಿದ್ದರಷ್ಟೇ. ನನ್ನ ನಿರ್ಧಾರದ ಕುರಿತು ಪಕ್ಷದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಹಾಗೂ ಹಿರಿಯರಾದ ವೈ.ಎಸ್.ವಿ.ದತ್ತ ಅವರನ್ನು ಸಂಪರ್ಕಿಸುವ ಪ್ರಯತ್ನ ನಡೆಸಿದರೂ ಯಶಸ್ವಿಯಾಗಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಜಾತ್ಯಾತೀತ ಶಕ್ತಿಗಳನ್ನು ಬೆಂಬಲಿಸಬೇಕು ಎಂಬುದಷ್ಟೇ ನನ್ನ ವೈಯಕ್ತಿಕ ನಿಲುವು. ಚುನಾವಣೆಗೆ ಸ್ಪರ್ಧಿಸಿದಾಗ ಬಿಜೆಪಿಯ ಹಾಲಪ್ಪ ಅವರಿಂದ ಹಣ ಪಡೆದೆ ಎಂದು ವದಂತಿ ಹಬ್ಬಿತ್ತು. ಈಗ ಬೇಳೂರು ಅವರ ಆಮಿಷಕ್ಕೆ ಬಲಿಯಾದೆ ಎಂಬ ವದಂತಿ ಹರಡಬಹುದು. ನಾನು ಯಾರಿಂದಲೂ ಹಣ ಪಡೆದಿಲ್ಲ. ಒಂದೊಮ್ಮೆ ಹಣ ಕೊಟ್ಟವರು ನಾನು ನಿವೃತ್ತನಾದರೆ ಸುಮ್ಮನೆ ಬಿಡುತ್ತಾರೆಯೇ ಎಂಬುದನ್ನಾದರೂ ಯೋಚಿಸಬೇಕು. ತಾಲೂಕು ಜೆಡಿಎಸ್ ಕಣದಲ್ಲಿರುವ ಯಾವ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ಘೋಷಿಸುವ ಅಧಿಕಾರ ತಾಲೂಕು ಅಧ್ಯಕ್ಷ ಕನ್ನಪ್ಪ ಹಾಗೂ ಇತರ ಪದಾಧಿಕಾರಿಗಳದ್ದೇ ವಿನಾ ನನ್ನದಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.