ದಾವಣಗೆರೆ ಕಾಂಗ್ರೆಸ್‌ಗೆ ಶಾಮನೂರು ಹೈಕಮಾಂಡ್‌!


Team Udayavani, Feb 22, 2023, 6:02 AM IST

ದಾವಣಗೆರೆ ಕಾಂಗ್ರೆಸ್‌ಗೆ ಶಾಮನೂರು ಹೈಕಮಾಂಡ್‌!

ರಾಜ್ಯ ರಾಜಕಾರಣದಲ್ಲಿ ಇನ್ನೂ ಕೆಲವು ಕುಟುಂಬಗಳು ಇಡೀ ಕ್ಷೇತ್ರ ಅಥವಾ ಜಿಲ್ಲೆಯನ್ನು ತಮ್ಮ ಹಿಡಿತದಲ್ಲಿಟ್ಟುಕೊಂಡು ಪ್ರಾಬಲ್ಯ ಮೆರೆಯುತ್ತಿವೆ. ಪಕ್ಷವನ್ನು ಮೀರಿ ಬೆಳೆದಿರುತ್ತವೆ. ಬೆಳಗಾವಿಯಲ್ಲಿ ಜಾರಕಿಹೊಳಿ ಕುಟುಂಬ ಇದ್ದರೆ, ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಕುಟುಂಬ ಯಾವ ಹೈಕಮಾಂಡಿಗೂ ಬಗ್ಗದೆ ತಮ್ಮ ಕ್ಷೇತ್ರದಲ್ಲಿ ಹಿಡಿತ ಸಾಧಿಸಿಕೊಂಡಿದೆ.

ದಾವಣಗೆರೆ: ದಾವಣಗೆರೆ ಜಿಲ್ಲಾ ಕಾಂಗ್ರೆಸ್‌ಗೆ ಶಾಸಕ ಶಾಮನೂರು ಶಿವಶಂಕರಪ್ಪ ಕುಟುಂ ಬವೇ ಹೈಕಮಾಂಡ್‌ ಆಗಿದೆ!

ಗ್ರಾಮ ಪಂಚಾಯತ್‌ನಿಂದ ಹಿಡಿದು ಹಿಡಿದು ಲೋಕಸಭೆ ಚುನಾವಣೆಯವರೆಗೂ ಅಭ್ಯರ್ಥಿಗಳ ಆಯ್ಕೆ, ಪ್ರಚಾರ, ಕಾರ್ಯಕ್ರಮ, ಮುಖಂಡರ ಪ್ರವಾಸ ಹೀಗೆ ಪ್ರತೀ ವಿಷಯ ದಲ್ಲಿ ಶಾಮನೂರು ಶಿವಶಂಕರಪ್ಪ ಮತ್ತು ಅ ವರ ಪುತ್ರರಾದ ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ನಿರ್ಧಾರವೇ ಇಲ್ಲಿ ಅಂತಿಮ.

ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಯಲ್ಲಿ ಇಂತಹವರಿಗೇ ಟಿಕೆಟ್‌ ಎಂದು ಹೈಕಮಾಂಡ್‌ ನಿರ್ಧರಿಸುವುದು ಕಾಂಗ್ರೆಸ್‌ ಸಂಸ್ಕೃತಿ. ಆದರೆ ದಾವಣಗೆರೆ ಜಿಲ್ಲೆಯಲ್ಲಿ ಮಾತ್ರ ಶಾಮನೂರು ಶಿವಶಂಕರಪ್ಪ ಮತ್ತು ಮಲ್ಲಿಕಾರ್ಜುನ್‌ ನಿರ್ಧಾರ ಅಂತಿಮವಾಗು ತ್ತದೆ. ಇವರು ಯಾರನ್ನು ಸೂಚಿಸುತ್ತಾರೋ ಅವರಿಗೇ ಟಿಕೆಟ್‌.

ಕಾಂಗ್ರೆಸ್‌ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾ ರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್‌, ವಿಧಾನಸಭೆ ವಿಪಕ್ಷದ ನಾಯಕ ಸಿದ್ದರಾಮಯ್ಯ ಸಹಿತ ಎಲ್ಲ ನಾಯಕರೊಂದಿಗೂ ನಿಕಟ ಸಂಬಂಧ ಹೊಂದಿರುವ ಶಾಮನೂರು ಶಿವಶಂಕರಪ್ಪ ಮತ್ತು ಮಲ್ಲಿಕಾರ್ಜುನ್‌ ಪಕ್ಷದ ವಿಚಾರದಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ. ಇವರಿಗೆ ಯಾವುದೇ ಬಣ ಇಲ್ಲ. ಹಾಗಾಗಿ ದಾವಣಗೆರೆ ಜಿಲ್ಲೆಯಲ್ಲಿ ಕಾಂಗ್ರೆಸ್‌ ಗೆಲುವು ಮತ್ತು ಸೋಲು ಎಲ್ಲದರ ಜವಾಬ್ದಾರಿಯೂ ಶಾಮನೂರು ಕುಟುಂಬದ್ದೇ ಆಗಿರುತ್ತದೆ.

ಈಗ ಬಿಜೆಪಿ ಪ್ರಾಬಲ್ಯ ಹೊಂದಿರುವ ದಾವಣಗೆರೆ ಜಿಲ್ಲೆ ಹಿಂದೊಮ್ಮೆ ಕಾಂಗ್ರೆಸ್‌ನ ಭದ್ರಕೋಟೆಯಾಗಿತ್ತು. ಹಿಂದೆ, ಕಾರ್ಮಿಕರ ನಗರಿ ದಾವಣಗೆರೆ ನಗರದಲ್ಲಿ ಸಿಪಿಐ ದಟ್ಟ ಪ್ರಭಾವ ಹೊಂದಿತ್ತು. ಸತತ ಮೂರು ಬಾರಿ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿತ್ತು. ಸಿಪಿಐ ನಾಗಾಲೋಟಕ್ಕೆ ತಡೆಯೊಡ್ಡಿ ದ್ದಲ್ಲದೇ ಕಾಂಗ್ರೆಸ್‌ ತೆಕ್ಕೆಗೆ ದಾವಣ ಗೆರೆಯನ್ನು ತೆಗೆದು ಕೊಂಡಿದ್ದರು. ಅಲ್ಲಿಂದ ಮತ್ತೆ ಪ್ರಬಲಗೊಂಡ ಕಾಂಗ್ರೆಸ್‌ ಈಗಲೂ ಗಟ್ಟಿಯಾಗಿ ಇರುವುದಕ್ಕೆ ಅವರೇ ಕಾರಣ.

ಸಾಕಷ್ಟು ಪ್ರಭಾವ, ಜಾತಿ, ಹಣ, ಸಮಾಜದ ಬೆಂಬಲ ಹೊಂದಿದ್ದರೂ ಶಾಮನೂರು ಶಿವಶಂಕರಪ್ಪ ಅವರಿಗೆ 90ರ ದಶಕದವರೆಗೆ ಸಕ್ರಿಯವಾಗಿ ರಾಜಕೀಯದಲ್ಲಿ ಬೆಳಕಿಗೆ ಬರಲು ಆಗಲಿಲ್ಲ. ಎಪ್ಪತ್ತರ ದಶಕದಲ್ಲೇ ನಗರಸಭೆ ಮೂಲಕ ರಾಜಕೀಯ ಪ್ರವೇಶಿಸಿದ್ದ ಶಾಮನೂರು, ಕೆಪಿಸಿಸಿಯಲ್ಲಿ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಖಜಾಂಚಿ ಆಗಿದ್ದರು. ಎಸ್‌.ಎಸ್‌. ಮಲ್ಲಿಕಾರ್ಜುನ್‌ ಸಚಿವರಾದ ದಶಕದ ಅನಂತರ ಅವರಿಗೆ ಸಚಿವಸ್ಥಾನ ಒಲಿದು ಬಂದಿತ್ತು. ಅದು ಸಹ ಬಹಳ ಕಾಲ ಅಲ್ಲ. ಇಳಿವಯಸ್ಸಿನಲ್ಲಿ ಸಚಿವ ಸ್ಥಾನದ ಜವಾಬ್ದಾರಿ ನಿರ್ವಹಿಸಿದರೂ ಎರಡೂವರೆ ವರ್ಷಕ್ಕೆ ಸಚಿವಸ್ಥಾನ ಹಿಂಪಡೆದು ಮತ್ತೆ ಪುತ್ರ ಮಲ್ಲಿಕಾರ್ಜುನ್‌ಗೆ ನೀಡಲಾ ಯಿತು. ನಾನೇಕೆ ಮುಖ್ಯಮಂತ್ರಿ ಆಗಬಾ ರದು, ನನಗೇನೂ ಸಚಿವಗಿರಿ ಮುಖ್ಯ ಅಲ್ಲ. ಬೇಕಾದರೆ ಈಗಲೇ ಸರಕಾರಿ ಕಾರು ಬಿಟ್ಟು, ಹೆಲಿಕಾಪ್ಟರ್‌ನಲ್ಲಿ ದಾವಣಗೆರೆಗೆ ಹೋಗುತ್ತೇನೆ’ ಎಂದ ಹೇಳಿದ್ದ ಮಾತು ಶಾಮನೂರು ಅವರಿಗೆ ಮುಳುವಾಯ್ತಾ’ ಎಂಬ ಪ್ರಶ್ನೆಯೂ ಇದೆ.

ಸತತ ಎರಡು ಬಾರಿಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಶಾಮನೂರು, ಸಚಿವರಾಗಿದ್ದ ಸಂದರ್ಭ ಎದುರಾದ ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಲ್ಲಿ  ತ ಮ್ಮದೇ ಪಕ್ಷದ ಸರಕಾರದ ವಿರುದ್ಧ ತೊಡೆ ತಟ್ಟಿದ್ದರು.

ಎಲ್ಲ ಪಕ್ಷಗಳ ನಾಯಕರ ಜತೆಯೂ ನಂಟು ಹೊಂದಿದ್ದಾರೆ. ಮಾಜಿ ಸಿಎಂ ಜಗದೀಶ್‌ಶೆಟ್ಟರ್‌, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್‌, ಸಿಎಂ ಬಸವರಾಜ ಬೊಮ್ಮಾಯಿ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಾಜಿ ಅಧ್ಯಕ್ಷ ಶಿವರಾಜ್‌ ಪಾಟೀಲ್‌, ಮಾಜಿ ಮುಖ್ಯ ಕಾರ್ಯದರ್ಶಿ ಬಿ.ಎಸ್‌. ಪಾಟೀಲ್‌ ಕುಟುಂಬಗಳೊಂದಿಗೆ ಸಂಬಂಧ ಬೆಸೆದಿರುವ ಶಾಮನೂರು ಕುಟುಂಬ ರಾಜಕೀಯವೇ ಬೇರೆ ಕೌಟುಂಬಿಕ ಸಂಬಂಧವೇ ಬೇರೆ ಎಂಬುದಕ್ಕೆ ಮಾದರಿ.

-ರಾ.ರವಿಬಾಬು

ಟಾಪ್ ನ್ಯೂಸ್

4-ptr

Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Man enters church and chants Jai Shri Ram in Meghalaya: Case registered

Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್‌ ಘೋಷಣೆ: ಕೇಸು ದಾಖಲು

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

3-kunigal

Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ‌ ಸಾವು

Central government approves land for Manmohan Singh memorial

Memorial: ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5-snehamayi

Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ

4-ptr

Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Man enters church and chants Jai Shri Ram in Meghalaya: Case registered

Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್‌ ಘೋಷಣೆ: ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.