GTD ವಿರುದ್ಧ “ಜಾತಿ’ಯ ಅಸ್ತ್ರ ಬಳಸಿದ Siddaramiah
Team Udayavani, Apr 7, 2023, 6:00 AM IST
ಮೈಸೂರು: ಇತ್ತೀಚಿನವರೆಗೂ ಅವರಿಬ್ಬರೂ ಆಪ್ತರಾಗಿದ್ದವರು. ಈಗ ಅಖಾಡದಲ್ಲಿ ಮುಖಾಮುಖೀಯಾಗಿ ನಿಂತಿದ್ದಾರೆ.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮೈಸೂರು ಡೇರಿ ಮಾಜಿ ಅಧ್ಯಕ್ಷ ಮಾವಿನಹಳ್ಳಿ ಸಿದ್ದೇಗೌಡ ಅವರಿಗೆ ಟಿಕೆಟ್ ನೀಡಿದೆ. ಆ ಮೂಲಕ ಹಾಲಿ ಶಾಸಕ ಜೆಡಿಎಸ್‌ನ ಜಿ.ಟಿ.ದೇವೇಗೌಡ ಹಾಗೂ ಕಾಂಗ್ರೆಸ್‌ನ ಸಿದ್ದೇಗೌಡ ಪೈಪೋಟಿಗೆ ಇಳಿದಿದ್ದಾರೆ. ಕಳೆದ ಬಾರಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತಾವೇ ಸ್ಪರ್ಧಿಸಿ ಪರಾಭವಗೊಂಡ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಒಕ್ಕಲಿಗ ಸಮಾಜದ ಸಿದ್ದೇಗೌಡ ಅವರಿಗೆ ಟಿಕೆಟ್ ಕೊಡಿಸಿ ಅದೇ ಒಕ್ಕಲಿಗ ಸಮಾಜಕ್ಕೆ ಸೇರಿದ ಶಾಸಕ ದೇವೇಗೌಡ ಅವರನ್ನು ಮಣಿಸಲು ಹೊರಟಿದ್ದಾರೆ.
ಸಿದ್ದೇಗೌಡ ಮೊನ್ನೆವರೆಗೂ ಜಿ.ಟಿ.ದೇವೇಗೌಡರಿಗೆ ಆಪ್ತರಾಗಿ ಜೆಡಿಎಸ್‌ನಲ್ಲಿದ್ದವರು. ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿ.ಟಿ.ದೇವೇಗೌಡ ಮಧ್ಯೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹಣಾಹಣಿ ನಡೆದಾಗ ಸಿದ್ದೇಗೌಡ ಅವರು ಜಿ.ಟಿ.ದೇವೇಗೌಡ ಪರ ಕೆಲಸ ಮಾಡಿದವರು. ಸಿದ್ದೇಗೌಡ ಕೆಲವು ತಿಂಗಳ ಹಿಂದೆ ಜಿ.ಟಿ. ದೇವೇಗೌಡರಿಂದ ದೂರ ಸರಿದರು. ಜಿ.ಟಿ.ದೇವೇಗೌಡ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಂದ ದೂರ ಸರಿದಾಗ ಕುಮಾರಸ್ವಾಮಿ ಅವರಿಗೆ ಹತ್ತಿರವಾದವರು ಸಿದ್ದೇಗೌಡ.
ಜಿ.ಟಿ.ದೇವೇಗೌಡ ಜೆಡಿಎಸ್‌ನಿಂದ ಒಂದು ವೇಳೆ ಹೊರ ಬಂದರೆ ಜೆಡಿಎಸ್‌ನಿಂದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಉಮೇದುವಾರರಾಗಬೇಕೆಂದು ಸಿದ್ದೇಗೌಡ ಪ್ರಯತ್ನಿಸಿದವರು. ಆದರೆ ಜಿ.ಟಿ.ದೇವೇಗೌಡ ಅವರ ಮನಸ್ತಾಪ ಬಗೆಹರಿದು ಅವರು ಜೆಡಿಎಸ್‌ನಲ್ಲೇ ಉಳಿದುಕೊಂಡಾಗ ಸಿದ್ದೇಗೌಡ ಹಾಗೂ ಅವರ ಬೆಂಬಲಿಗರು ಅತಂತ್ರರಾದರು. ಜೆಡಿಎಸ್‌ನಿಂದ ಹೊರ ಬಂದು ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಸಿದ್ದರಾಮಯ್ಯ ಅವರು ಮೈಸೂರಿನ ಸಮಾರಂಭವೊಂದರಲ್ಲಿ ಭಾಗವಹಿಸಿ ವೇದಿಕೆ ಮೇಲಿದ್ದಾಗಲೇ ಸಿದ್ದೇಗೌಡ ಹಾಗೂ ಅವರ ಬೆಂಬಲಿಗರು ಅಲ್ಲಿಗೆ ತೆರಳಿ ವೇದಿಕೆ ಮೇಲೆಯೇ ಸಿದ್ದರಾಮಯ್ಯ ಅವರ ಕೈಕುಲುಕಿ ಕಾಂಗ್ರೆಸ್ ಸೇರ್ಪಡೆಗೆ ಒಲವು ತೋರಿದ್ದರು. ಅನಂತರ ಬಹಿರಂಗ ಸಮಾವೇಶದಲ್ಲಿ ಕಾಂಗ್ರೆಸ್ ಸೇರಿದ್ದರು. ಅಷ್ಟೊತ್ತಿಗಾಗಲೇ ಕಾಂಗ್ರೆಸ್‌ನಲ್ಲಿ ಟಿಕೆಟ್ ಕೋರಿ ಕೆಪಿಸಿಸಿಗೆ ಅರ್ಜಿ ಸಲ್ಲಿಸುವ ಅವಧಿಯೂ ಮುಗಿದಿತ್ತು. ಆದರೆ ಟಿಕೆಟ್ ಆಕಾಂಕ್ಷಿಯಾಗಿದ್ದರು.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರ ಆಪ್ತರಾದ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಮರೀಗೌಡ, ಕೂರ್ಗಳ್ಳಿ ಮಹದೇವ್, ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ| ಬಿ.ಜೆ.ವಿಜಯಕುಮಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಅರುಣ್‌ಕುಮಾರ್ ಮತ್ತಿತರರು ಟಿಕೆಟ್ ಆಕಾಂಕ್ಷಿಯಾಗಿದ್ದರು. ಅಂತಿಮವಾಗಿ ಅಳೆದು ತೂಗಿ ಸಿದ್ದೇಗೌಡ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಒಕ್ಕಲಿಗ ಸಮಾಜದವರು ಅಧಿಕ ಸಂಖ್ಯೆಯಲ್ಲಿದ್ದಾರೆ. ಸಿದ್ದೇಗೌಡ ಮೈಸೂರು ಡೈರಿ ಅಧ್ಯಕ್ಷರಾಗಿದ್ದರು. ಇದಕ್ಕೂ ಮುನ್ನ ಅವರು ಜಯಪುರ ಗ್ರಾಮ ಪಂಚಾಯತ್ ಸದಸ್ಯರಾಗಿ, ಅಧ್ಯಕ್ಷರಾಗಿದ್ದರು. ಎಪಿಎಂಸಿ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ. ಮೈಸೂರು ಡೇರಿ ನಿರ್ದೇಶಕ ಸ್ಥಾನಕ್ಕೆ 2020ರಲ್ಲಿ ನಡೆದ ಚುನಾವಣೆಯಲ್ಲಿ ಮೈಸೂರು ಉಪ ವಿಭಾಗದಲ್ಲಿ ಸಿದ್ದೇಗೌಡ ಸ್ಪರ್ಧಿಸಿ ಪರಾಭವಗೊಂಡಿದ್ದರು. ಆಗ ಅವರು ಮೈಸೂರು ಡೇರಿ ಅಧ್ಯಕ್ಷರಾಗಿದ್ದರು.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಒಕ್ಕಲಿಗ ಸಮಾಜದ ಮತಗಳನ್ನು ವಿಭಜಿಸಿ ಗೆಲ್ಲಬೇಕು ಎಂಬ ತಂತ್ರವನ್ನು ಕಾಂಗ್ರೆಸ್ ಹೆಣೆದು ಸಿದ್ದೇಗೌಡ ಅವರನ್ನು ಕಣಕ್ಕೆ ಇಳಿಸಿದೆ. ಈ ಕ್ಷೇತ್ರದಲ್ಲಿ ಕುರುಬರು, ವೀರಶೈವ-ಲಿಂಗಾಯತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರ ಆಪ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಎದುರಿಸುವುದೇ ಸಿದ್ದೇಗೌಡರ ಮೊದಲ ಸವಾಲಾಗಿದೆ.
– ಕೂಡ್ಲಿ ಗುರುರಾಜ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.