ಸಿದ್ದರಾಮಯ್ಯ ಪಾಳೆಗಾರಿಕೆ ಮಾಡುತ್ತಿದ್ದಾರಾ?: ಸೋಮಣ್ಣ, ಸಿಂಹ ಕೆಂಡಾಮಂಡಲ
ವರುಣಾದಲ್ಲಿ ಪ್ರಚಾರಕ್ಕೆ ಹೋದ ಕಡೆಯಲೆಲ್ಲ ಅವಾಚ್ಯ ಶಬ್ದಗಳಿಂದ ನಿಂದನೆ
Team Udayavani, Apr 28, 2023, 9:46 AM IST
ಮೈಸೂರು: ಸಿದ್ದರಾಮನ ಹುಂಡಿಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತನಿಂದ ಹಲ್ಲೆ ವಿಚಾರಕ್ಕೆ ಸಂಬಂಧಿಸಿ ಬಿಜೆಪಿ ಅಭ್ಯರ್ಥಿ,ಸಚಿವ ವಿ.ಸೋಮಣ್ಣ, ಸಂಸದ ಪ್ರತಾಪ್ ಸಿಂಹ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.
ಸಂಸದ ಪ್ರತಾಪ್ ಸಿಂಹ ಮಾತನಾಡಿ, ಸಿದ್ದರಾಮಯ್ಯ ಪಾಳಯದಲ್ಲಿ ಹತಾಶೆ ಮತ್ತು ಸೋಲಿನ ಭಯ ಶುರುವಾಗಿದೆ. ನಾವು ಪ್ರಚಾರಕ್ಕೆ ಹೋದ ಕಡೆಯಲೆಲ್ಲ ಕೆಲವರು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ.ಸಿದ್ದರಾಮಯ್ಯ ಈ ರೀತಿ ಸಣ್ಣತನ ಯಾಕೆ ಮಾಡುತ್ತಿದ್ದಾರೆ ಗೊತ್ತಾಗುತ್ತಿಲ್ಲ.ನಿನ್ನೆ ನಮ್ಮ ಪ್ರಚಾರ ಮೆರವಣಿಗೆ ಮೇಲೆ ಕಲ್ಲಲ್ಲಿ ಹೊಡೆದಿದ್ದಾರೆ. ಬಕೆಟ್ ಗಳಲ್ಲಿ ಕಲ್ಲು ಇಟ್ಟು ಕೊಂಡಿದ್ದರು. ಗಲಾಟೆ ಮಾಡಲು ಎಲ್ಲಾ ಸಿದ್ಧತೆ ಮಾಡಿ ಕೊಂಡಿದ್ದರು.ಸೋಲಿನ ಭಯದಿಂದ ಈ ರೀತಿ ಸಿದ್ದರಾಮಯ್ಯ ಟೀಂ ಮಾಡುತ್ತಿದೆ. ಸಿದ್ದರಾಮನ ಹುಂಡಿಯೇನೂ ಸಿದ್ದರಾಮಯ್ಯನ ಸಂಸ್ಥಾನನಾ?ಸಿದ್ದರಾಮಯ್ಯ ಏನೂ ಪಾಳೆಗಾರಿಕೆ ಮಾಡುತ್ತಿದ್ದಾರಾ? ಅವರು ತಮ್ಮ ಸ್ವಜಾತಿಗೆ ಚಿತಾವಣೆ ಕೊಟ್ಟು ಈ ರೀತಿ ತೊಂದರೆ ಕೊಡಿಸುತ್ತಿದ್ದಾರೆ. ಅವರೊಬ್ಬ ಜಾತಿವಾದಿ. ಅವರಿಗೆ ಸ್ವಜಾತಿ ಮಾತ್ರ ಮುಖ್ಯ ಅನ್ನೋದು ವರುಣಾ ಜನರಿಗೆ ಗೊತ್ತಿದೆ ಎಂದು ಕಿಡಿ ಕಾರಿದರು.
ಸಿದ್ದರಾಮಯ್ಯ ಜಾತಿವಾದಿ ಕಾರಣ ಎಲ್ಲಾ ವರ್ಗದ ಜನ ಸೋಮಣ್ಣ ಪರವಾಗಿ ನಿಂತಿದ್ದಾರೆ. ಸೋಮಣ್ಣ ಒಂದು ಕರೆ ಕೊಟ್ಟರೆ ನಿಮಗೂ ಎಲ್ಲಾ ಊರುಗಳಲ್ಲೂ ಇದೇ ಆಗಬಹುದು. ಆಗ ಪರಿಸ್ಥಿತಿ ಏನಾಗುತ್ತದೆ ಊಹಿಸಿ. ಇದನ್ನು ನೀವು ಮುಂದುವರಿಸಿದರೆ ನಮಗೂ ಶಕ್ತಿ ಇದೆ. ಅದನ್ನು ನಾವು ಸಾಬೀತು ಮಾಡಬೇಕಾಗುತ್ತೆ. ಆಗ ವರುಣಾ ಶಾಂತಿ ಕೆಡುತ್ತದೆ ಎಂದರು.
ಅಣ್ಣನ ಮಗನಿಗೆ ಆಗಿದ್ದರೆ ..
ಸಚಿವ ವಿ. ಸೋಮಣ್ಣ ಪ್ರತಿಕ್ರಿಯೆ ನೀಡಿ, ಸಿದ್ದರಾಮಯ್ಯ ಅವರ ಅಣ್ಣನ ಮನೆ ಮುಂದೆಯೆ ಈ ಗಲಾಟೆ ನಡೆಯಿತು.ಹತಾಶೆ ಮನೋಭಾವ ದಿಂದ ಸೋಲಿನ ಭಯದಿಂದ ಈ ಕೆಲಸ ಮಾಡಿದ್ದಾರೆ. ನಾನು ಎಲ್ಲಿ ಹೋಗ್ತಿನೋ ಅಲ್ಲಿಗೆ ಕೆಲವರು ಬರುತ್ತಾರೆ.ಎಲ್ಲಾ ಕೋಮಿನ ಜನ ಪ್ರೀತಿ ಮಾಡುತ್ತಾರೆ. ಒಂದು ಕೋಮಿನ ಜನ ಮಾತ್ರ ದ್ವೇಷ ಮಾಡುತ್ತಾರೆ.ನಮ್ಮ ಕಾರ್ಯಕರ್ತನಿಗೆ ಆದ ನೋವು ಸಿದ್ದರಾಮಯ್ಯ ರ ಅಣ್ಣನ ಮಗನಿಗೆ ಆಗಿದ್ದರೆ ನನ್ನನ್ನು ಯಾವ ದೃಷ್ಟಿಯಲ್ಲಿ ಸಿದ್ದರಾಮಯ್ಯ ನೋಡ್ತಿದ್ದರು? ಇದು ಸಿದ್ದರಾಮಯ್ಯ ಘನತೆಗೆ ಒಳ್ಳೆಯದಲ್ಲ.ನನ್ನನ್ನು ಹೆದರಿಸಲು ಸಾಧ್ಯವಿಲ್ಲ. ನಾನು ಯಾವತ್ತಿಗೂ ವಿಚಲಿತ ಆಗಲ್ಲ.ವರುಣ ಕ್ಷೇತ್ರದ ಸ್ಥಿತಿ ಬಗ್ಗೆ ಚುನಾವಣಾ ಆಯುಕ್ತರಿಗೆ ಪತ್ರ ಬರೆಯುತ್ತೇನೆ.ನಿನ್ನೆಯ ಘಟನೆ ವಿಚಾರದಲ್ಲಿ ಪೊಲೀಸರು ಕೂಡ ಕುತಂತ್ರ ಮಾಡಿದರು ಎಂದು ಆಕ್ರೋಶ ಹೊರ ಹಾಕಿದರು.
ದೇವರ ಮನೆಯಲ್ಲಿ ಪ್ರಮಾಣ
ಕಾಪು ಸಿದ್ದಲಿಂಗಸ್ವಾಮಿ ಮಾತನಾಡಿ, ನಾನು ಯಾವತ್ತಿಗೂ ಬಿಜೆಪಿ ಬಿಡಲ್ಲ. ಬಿಜೆಪಿಗೆ ದ್ರೋಹ ಮಾಡುವ ಕೆಲಸ ಮಾಡಲ್ಲ.ಸಾಯುವವರೆಗೂ ಬಿಜೆಪಿಯಲ್ಲೇ ಇರುತ್ತೇನೆ. ಕಾಂಗ್ರೆಸ್ ನವರು ಸೋಲಿನ ಹತಾಶೆಯಿಂದ ಸುಳ್ಳು ಸುದ್ದಿ ಹರಡಿಸುತ್ತಿದ್ದಾರೆ. ಕತ್ತು ಸೀಳಿದರು ನಾನು ಬಿಜೆಪಿ ಬಿಡಲ್ಲ. ಯಡಿಯೂರಪ್ಪ ನನ್ನ ಬಳಿ ಸೋಮಣ್ಣ ಗೆಲ್ಲಿಸುವಂತೆ ಪ್ರಮಾಣ ಮಾಡಿಸಿಕೊಂಡಿದ್ದಾರೆ. ಶಿವಮೊಗ್ಗದ ಅವರ ದೇವರ ಮನೆಯಲ್ಲಿ ನಾನು ಪ್ರಮಾಣ ಮಾಡಿದ್ದೇನೆ. ವಿ ಸೋಮಣ್ಣ ಈ ಬಾರಿ ಗೆದ್ದೇ ಗೆಲ್ಲುತ್ತಾರೆ. ನಾನು ಕೊನೆಯವರೆಗೂ ಸೋಮಣ್ಣ ಜತೆ ಇರುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.