ನಮಗೆ ಬಹುಮತ ಬರುವುದು ಖಚಿತ.. ; ಕಿಡಿ ಕಾರಿದ ಸಿದ್ದರಾಮಯ್ಯ!
ವರುಣಾದಲ್ಲಿ ಜೆಡಿಎಸ್ ನವರೆಲ್ಲ ಬಿಜೆಪಿಗೆ ಮತ ಹಾಕಿದ್ದಾರೆ...!
Team Udayavani, May 10, 2023, 9:51 PM IST
ಮೈಸೂರು : ನಮಗೆ ಬಹುಮತ ಬರುವುದು ಖಚಿತವಾಗಿದೆ.ಅದನ್ನೇ ಬಹುತೇಕ ಎಲ್ಲಾ ಚುನಾವಣೋತ್ತರ ಸರ್ವೇಗಳೂ ಅದನ್ನೇ ಹೇಳುತ್ತಿದೆ. ನಾನು ಜನರ ನಾಡಿಮಿಡಿತ ಅರ್ಥಮಾಡಿಕೊಂಡಿರೋದು ಸರಿಯಿದೆ. ನಾನೇನು ಫಲಿತಾಂಶದ ನಿರೀಕ್ಷೆ ಮಾಡಿದ್ದೆನೋ ಅದೇ ಫಲಿತಾಂಶ ಬರಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬುಧವಾರ ಸಂಜೆ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಕರಾವಳಿ ಭಾಗದಲ್ಲಿ ಈ ಬಾರಿ ನಮ್ಮ ಸೀಟು ಹೆಚ್ಚಾಗಲಿದೆ. ಜರಂಗದಳ ವಿಚಾರ ಒಂದು ವಿವಾದದ ವಿಚಾರವೇ ಅಲ್ಲ. ನಾವು ನಮ್ಮ ಪ್ರಣಾಳಿಕೆಯಲ್ಲಿ ಬಹಳ ಸ್ಪಷ್ಟವಾಗಿ ಹೇಳಿದ್ದೇವೆ. ಬಿಜೆಪಿಯವರು ಅದನ್ನು ಅಪಪ್ರಚಾರ ಮಾಡಿದರು ಎಂದರು.
ಲಿಂಗಾಯತ ನಾಯಕರೆಲ್ಲಾ ಭ್ರಷ್ಟಾಚಾರಿಗಳು ಅಂತ ನಾನೆಲ್ಲಿ ಹೇಳಿದ್ದೆ? ನಾನು ಬಸವರಾಜ ಬೊಮ್ಮಾಯಿ ಭ್ರಷ್ಟಾಚಾರಿ ಅಂತ ಹೇಳಿದ್ದೆ, ನನ್ನ ಮಾತನ್ನು ತಿರುಚಿ ಅಪಪ್ರಚಾರ ಮಾಡಿದರು. ವರುಣದಲ್ಲಿ ನಾನು ಬಹಳ ಸುಲಭವಾಗಿ ಗೆಲುವು ದಾಖಲಿಸಿಲಿದ್ದೇನೆ. ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಿನ ಪೈಪೋಟಿ. ಇಲ್ಲಿ ಬಿಜೆಪಿ ಎಲ್ಲೂ ಕೂಡ ನೇರವಾಗಿ ನಮ್ಮ ಜೊತೆ ಪೈಪೋಟಿ ಇಲ್ಲ ಎಂದರು.
ಸೋಮಣ್ಣಗೆ ವರುಣಾ ಜನ ಯಾಕೆ ವೋಟ್ ಹಾಕಬೇಕು? ಕ್ಷೇತ್ರಕ್ಕೆ ಅವರ ಕೊಡುಗೆ ಏನು? ಅವರು ಜಾತಿ ಕಾರ್ಡ್ ಪ್ಲೇ ಮಾಡಿದ್ದಾರೆ, ಅದು ಬಿಟ್ಡರೆ ದುಡ್ಡಿನ ರಾಜಕೀಯ ಮಾಡಿದ್ದಾರೆ. ವರುಣಾದಲ್ಲಿ ಜೆಡಿಎಸ್ ಅವರೆಲ್ಲ ಬಿಜೆಪಿಗೆ ಮತ ಹಾಕಿದ್ದಾರೆ. ಆದರೂ ನಾನು ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಕಿಡಿ ಕಿಡಿ
”ರೆಸಾರ್ಟ್ ರಾಜಕೀಯದ ಅವಶ್ಯಕತೆ ಇದೇಯಾ? ನಿಮ್ಮ ಶಾಸಕರನ್ನು ಹೇಗೆ ರಕ್ಷಿಸಿಕೊಳ್ಳುತೀರಿ” ಎಂದು ಪ್ರಶ್ನಿಸಿದ ರಾಷ್ಟ್ರೀಯ ಮಾಧ್ಯಮದ ವರದಿಗಾರನ ಪ್ರಶ್ನೆಗೆ ಕೆರಳಿ ಫುಲ್ ಗರಂ ಆದ ಸಿದ್ದರಾಮಯ್ಯ, ”ಎಲ್ಲರೂ ಬಹುಮತ ಕೊಡುತ್ತಿರುವಾಗ ಶಾಸಕರ ರಕ್ಷಣೆ ಎಲ್ಲಿಂದ ಬರುತ್ತದೆ. ಯಾಕೆ ಇಂತಹ ಪ್ರಶ್ನೆ ಕೇಳಿ ಸುದ್ದಿ ಹಬ್ಬಿಸುತ್ತೀರಾ? ನೀನೇನು ಬಿಜೆಪಿ ವ್ಯಕ್ತಿನಾ, ನಿನೇಗೇಕೆ ಇಂತಹ ಅನುಮಾನಗಳು ಬರಬೇಕು. ಎಲ್ಲಾ ಸಮೀಕ್ಷೆಗಳಲ್ಲೂ ಕಾಂಗ್ರೆಸ್ ಗೆ ಬಹುಮತ ಇದೆ. ನಾವು ಬಹುಮತದೊಂದಿಗೆ ಸರ್ಕಾರ ಮಾಡುತ್ತೇವೆ. ಇಂತಹ ಪ್ರಶ್ನೆಗಳನ್ನ ಕೇಳಿ ಗೊಂದಲದ ಸುದ್ದಿಗಳನ್ನ ಹಬ್ಬಿಸಬೇಡ. ನೀನು ಇನ್ಮುಂದೆ ನನ್ನ ಮುಂದೆ ಪ್ರಶ್ನೆ ಕೇಳಲು ಬರಬೇಡ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Squash event: ಭಾರತದ ಅನಾಹತ್,ಮಲೇಷ್ಯಾದ ಚಂದರನ್ ಚಾಂಪಿಯನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.