ಬೆಳಗಾವಿಯಲ್ಲಿ ಸಕ್ಕರೆ ರಾಜಕಾರಣದ ಸದ್ದು

Team Udayavani, Feb 22, 2023, 5:44 AM IST

ಬೆಳಗಾವಿಯಲ್ಲಿ ಸಕ್ಕರೆ ರಾಜಕಾರಣದ ಸದ್ದು

ಬೆಳಗಾವಿ: ರಾಜ್ಯದಲ್ಲಿ ಅತೀ ಹೆಚ್ಚಿನ ಸಕ್ಕರೆ ಕಾರ್ಖಾನೆಗಳನ್ನು ಹೊಂದಿರುವ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಸಕ್ಕರೆ ರಾಜಕಾರಣ ಬಹಳ ಬಲವಾಗಿ ಬೇರು ಬಿಟ್ಟಿದೆ. ಸಕ್ಕರೆ ರಾಜಕಾರಣವಿಲ್ಲದೆ ಜಿಲ್ಲೆಯ ರಾಜಕೀಯ ಇಲ್ಲ ಎನ್ನುವಷ್ಟು ಎರಡೂ ಒಂದಕ್ಕೊಂದು ಬೆಸೆದುಕೊಂಡಿವೆ. ಯಾವಾಗಲೂ ಚುನಾವಣೆ ವಿಷಯವಾಗಿ ಇದು ಮಹತ್ವ ಪಡೆದುಕೊಂಡಿರುವು ದರಿಂದ ಪ್ರತಿಯೊಬ್ಬರೂ ಸಕ್ಕರೆ ರಾಜ ಕಾರಣದ ಕಡೆಗೆ ನೋಡುವಂತೆ ಮಾಡಿದೆ.

ರಾಜ್ಯ ರಾಜಕೀಯ ಮತ್ತು ಚುನಾವಣೆ ವಿಷಯ ಬಂದಾಗ ಬೆಳಗಾವಿಯ ಸಕ್ಕರೆ ರಾಜಕಾರಣದ ಬಗ್ಗೆ ಮಾತನಾಡದೆ ಮುಂದೆ ಹೋಗುವಂತೆಯೇ ಇಲ್ಲ. ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳಲ್ಲಿ ಈ ಸಕ್ಕರೆ ರಾಜಕಾರಣದ ಗಾಢ ಪ್ರಭಾವ ಅಂಟಿಕೊಂಡಿದೆ. ಅಷ್ಟೇ ಏಕೆ ಕಾಂಗ್ರೆಸ್‌, ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಸಹ ಜಿಲ್ಲೆಯ ಸಕ್ಕರೆ ರಾಜಕಾರಣದ ಲಾಬಿಗೆ ಸಂಪೂರ್ಣ ಮಣಿದಿವೆ. ಹೀಗಾಗಿ ಇಲ್ಲಿ ಸಕ್ಕರೆ ಕಾರ್ಖಾನೆಗಳ ರಾಜಕಾರಣವನ್ನು ನಿರ್ಲಕ್ಷ್ಯ ಮಾಡುವಂತೆಯೇ ಇಲ್ಲ.

ಜಿಲ್ಲೆಯ ರಾಜಕೀಯ ಇತಿಹಾಸವನ್ನು ತೆರೆದು ನೋಡಿದಾಗ 1970-80ರ ದಶಕದಿಂದಲೇ ಸಕ್ಕರೆ ರಾಜಕಾರಣ ಚುನಾವಣೆಗಳಲ್ಲಿ ತನ್ನದೇ ಪಾತ್ರ ನಿರ್ವಹಿಸುತ್ತ ಬಂದಿದೆ. 80ರ ದಶಕದ ಅನಂತರ ಸಕ್ಕರೆ ಕಾರ್ಖಾನೆಗಳ ರಾಜಕಾರಣ ಪ್ರಭಾವ ಮತ್ತಷ್ಟು ಗಾಢವಾಗಿ ಬೆಳೆಯಿತು. ಕಾಂಗ್ರೆಸ್‌ ಮತ್ತು ಬಿಜೆಪಿಯ ಅನೇಕ ನಾಯಕರು ಈ ಸಕ್ಕರೆ ರಾಜಕಾರಣದಿಂದಲೇ ರಾಜ್ಯದಲ್ಲಿ ಬಹಳ ಪ್ರಭಾವಿಗಳಾಗಿ ಬೆಳೆದರು.

ಸರಕಾರ ರಚನೆಯಲ್ಲೂ ಪ್ರಮುಖ ಪಾತ್ರ
ಗಡಿ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ಮತ್ತು ರಾಜಕೀಯದ ಬಗ್ಗೆ ಪ್ರಸ್ತಾವ ಮಾಡಿದರೆ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ, ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆ, ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ, ಕೆಂಪವಾಡ ಸಕ್ಕರೆ ಕಾರ್ಖಾನೆ, ಸತೀಶ ಶುಗರ್ಸ್‌, ಸೌಭಾಗ್ಯಲಕ್ಷ್ಮೀ ಸಕ್ಕರೆ ಕಾರ್ಖಾನೆ, ವಿಶ್ವನಾಥ ಕತ್ತಿ ಸಕ್ಕರೆ ಕಾರ್ಖಾನೆ ಮತ್ತು ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ. ಈ ಕಾರ್ಖಾನೆಗಳ ಮೂಲಕ ಸಾಕಷ್ಟು ರಾಜಕಾರ ಣಿಗಳು ರಾಜ್ಯಮಟ್ಟದಲ್ಲಿ ತಮ್ಮ ಶಕ್ತಿ ತೋರಿಸಿದರು. ಸರಕಾರದ ರಚನೆಯಲ್ಲಿ ಮಹತ್ವ ಪಾತ್ರ ನಿರ್ವಹಿಸುವಷ್ಟು ಬೆಳೆದು ನಿಂತರು.

ರೈತರ ಮೇಲೆ ಬಿಗಿ ಹಿಡಿತ
ಎಂಟು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯನ್ನು ಹೊಂದಿರುವ ಚಿಕ್ಕೋಡಿ ಭಾಗದಲ್ಲಿ ಸಕ್ಕರೆ ರಾಜಕಾರಣಿಗಳ ದಂಡೇ ಇದೆ. ರಾಜ್ಯ ರಾಜಕಾರಣದ ಆಳ ಅಗಲವನ್ನು ಬಲ್ಲವರಾಗಿರುವ ಈ ನಾಯಕರು ರೈತ ಸಮುದಾಯ ತಮ್ಮ ಮಾತು ಮೀರದಂತೆ ನೋಡಿಕೊಂಡಿದ್ದಾರೆ. ಸಕ್ಕರೆ ಕಾರ್ಖಾನೆಗಳ ಷೇರುದಾರರು ಹಾಗೂ ಸದಸ್ಯರಾಗಿರುವ ರೈತರು ಸಕ್ಕರೆ ಕಾರ್ಖಾನೆಗಳನ್ನು ದೂರ ಇಟ್ಟು ಚುನಾವಣೆಯ ಬಗ್ಗೆ ವಿಚಾರ ಮಾಡದಂತೆ ರಾಜಕಾರಣಿಗಳು ವಾತಾವರಣ ನಿರ್ಮಾಣ ಮಾಡಿದ್ದಾರೆ. ಹೀಗಾಗಿ ಚುನಾವಣೆಯ ಸಮಯದಲ್ಲಿ ಯಾವಾಗಲೂ ಸಕ್ಕರೆ ರಾಜಕಾರಣ ತನ್ನ ಛಾಪು ತೋರಿಸುತ್ತಲೇ ಬಂದಿದೆ.

ವಿಧಾನಸಭೆ ಚುನಾವಣೆ ಸಮಯದಲ್ಲಿ ರೈತರ ಹಿತವೇ ತಮ್ಮ ಮುಖ್ಯ ಧ್ಯೇಯ ಎನ್ನುವ ರಾಜಕೀಯ ಪಕ್ಷಗಳು ಬಾಕಿ ಹಣ ಪಾವತಿ, ಕಬ್ಬಿಗೆ ವೈಜ್ಞಾನಿಕ ದರ ನಿಗದಿ, ತೂಕದಲ್ಲಿ ಮೋಸ ನಡೆಯದಂತೆ ಕ್ರಮ ಸಹಿತ ಹತ್ತಾರು ಭರವಸೆ ನೀಡುತ್ತವೆ. ಚುನಾವಣೆ ಮುಗಿಯುತ್ತಿದ್ದಂತೆ ಯಾವ ರಾಜಕೀಯ ಪಕ್ಷಗಳೂ ಈ ಭರವಸೆಗಳ ಕಡೆಗೆ ಗಮನ ಕೊಡುವುದಿಲ್ಲ. ಎಲ್ಲ ಪಕ್ಷಗಳ ಬಹುತೇಕ ಪ್ರಭಾವಿ ನಾಯಕರು ಸಕ್ಕರೆ ಕಾರ್ಖಾನೆಗಳ ಮಾಲಕರಾಗಿರುವುದರಿಂದ ಪಕ್ಷಗಳು ಸಹ ಇದನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಪರಿಣಾಮ ಸಕ್ಕರೆ ರಾಜಕಾರಣ ಮತ್ತು ರೈತರ ಸಮಸ್ಯೆಗಳು ಕೇವಲ ಚುನಾವಣೆಗೆ ಮಾತ್ರ ಸೀಮಿತ ಎನ್ನುವಂತಾಗಿದೆ.

-ಕೇಶವ ಆದಿ

ಟಾಪ್ ನ್ಯೂಸ್

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.