ಎಪ್ಪತ್ತು ದಾಟಿದವರಿಗೆ ಟಿಕೆಟ್‌ ಆಪತ್ತು

ಮೂವತ್ತು ಮಂದಿಗೆ ಮತ್ತೆ ಸ್ಪರ್ಧೆ ಬಯಕೆ ಮಕ್ಕಳಿಗೆ ಜೈ ಎನ್ನುತ್ತಿರುವ ನಾಲ್ವರು

Team Udayavani, Mar 6, 2023, 6:25 AM IST

ಎಪ್ಪತ್ತು ದಾಟಿದವರಿಗೆ ಟಿಕೆಟ್‌ ಆಪತ್ತು

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಮೂರೂ ಪಕ್ಷಗಳಲ್ಲಿ ಎಪತ್ತು ವರ್ಷ ದಾಟಿದವರಿಗೆ ಟಿಕೆಟ್‌ “ಆಪತ್ತು’ ಎದುರಾಗಿದೆ.

ಹೊಸ ಮುಖಗಳಿಗೆ ಅವಕಾಶ ಕೊಡಬೇಕು ಎಂಬ ಬೇಡಿಕೆ ಹಿನ್ನೆಲೆಯಲ್ಲಿ 70 ವರ್ಷ ದಾಟಿದವರನ್ನು “ಮಾರ್ಗದರ್ಶಿ’ ಮಂಡಳಿಗೆ ಸೇರಿಸುವ ಆತಂಕವೂ ಕಾಡುತ್ತಿದೆ. ಟಿಕೆಟ್‌ ಕೈ ತಪ್ಪುವ ಭೀತಿಯಿಂದ ಕೆಲವರು ಮೊದಲೇ ಶಸ್ತ್ರತ್ಯಾಗ ಮಾಡಿ ಪುತ್ರರಿಗೆ ಪಟ್ಟ ಕಟ್ಟುವ ಘೋಷಣೆ ಮಾಡಿ ಬಚಾವ್‌ ಆಗಿದ್ದರೆ ಮತ್ತೆ ಕೆಲವರಿಗೆ ಟಿಕೆಟ್‌ “ಅರ್ಧಚಂದ್ರ’ ಎಂಬಂತಾಗಿದೆ.

90 ವರ್ಷದ ಶಾಮನೂರು ಶಿವಶಂಕರಪ್ಪ ಸೇರಿದಂತೆ 70 ದಾಟಿದವರು ಮೂರೂ ಪಕ್ಷಗಳಲ್ಲಿ ಎರಡು ಡಜನ್‌ಗೂ ಹೆಚ್ಚು ಮಂದಿ ಮತ್ತೊಮ್ಮೆ ಟಿಕೆಟ್‌ ನಿರೀಕ್ಷೆಯಲ್ಲಿದ್ದಾರೆ. ಅಷ್ಟೇ ಅಲ್ಲದೆ ಟಿಕೆಟ್‌ಗಾಗಿ ಲಾಬಿ ಸಹ ಮಾಡುತ್ತಿದ್ದಾರೆ.
ಪ್ರಸಕ್ತ ವಿಧಾನಸಭೆಯಲ್ಲಿ ಮಾಜಿ ಮುಖ್ಯ ಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ, ಸಿದ್ದರಾಮಯ್ಯ, ಮಾಜಿ ಸ್ಪೀಕರ್‌ ರಮೇಶ್‌ಕುಮಾರ್‌, ಮಾಜಿ ಸಚಿವ ಆರ್‌.ವಿ. ದೇಶಪಾಂಡೆ ಸೇರಿದಂತೆ 70 ವರ್ಷ ದಾಟಿದ 34ಸದಸ್ಯರಿದ್ದಾರೆ.
ಆರೋಗ್ಯ ಕಾರಣಗಳಿಂದ ಬಿಜೆಪಿಯಲ್ಲಿ ಬಿ.ಎಸ್‌.ಯಡಿ ಯೂರಪ್ಪ, ಕಾಂಗ್ರೆಸ್‌ನಲ್ಲಿ ಎಂ.ವೈ.ಪಾಟೀಲ್‌, ಜೆಡಿಎಸ್‌ನಲ್ಲಿ ನಾಗನಗೌಡ ಕಂದಕೂರ್‌ ಸ್ಪರ್ಧಿಸದಿರಲು ತೀರ್ಮಾನಿಸಿದ್ದಾರೆ. ಸಿದ್ದರಾಮಯ್ಯ, ದೇಶಪಾಂಡೆ. ರಮೇಶ್‌ಕುಮಾರ್‌ ಸ್ಪರ್ಧೆಗೆ ಸೈ ಎಂದಿದಾರೆ.

ಕಾಂಗ್ರೆಸ್‌ನ ವೆಂಕಟರಮಣಪ್ಪ, ವಿ.ಮುನಿಯಪ್ಪ ತಮ್ಮ ಪುತ್ರರಿಗೆ ಟಿಕೆಟ್‌ ಬೇಡಿಕೆ ಇಟ್ಟಿದ್ದು, ಕೊಡದಿದ್ದರೆ ನಮಗೇ ಕೊಡಿ ಎಂದೂ ಹೇಳುತ್ತಿದ್ದಾರೆ. ಜೆಡಿಎಸ್‌ನ ಕೋಲಾರ ಶಾಸಕ ಕೆ. ಶ್ರೀನಿವಾಸಗೌಡ ಸ್ಪರ್ಧೆ ಮಾಡದೆ ಕಾಂಗ್ರೆಸ್‌ನಿಂದ ಸ್ಪರ್ಧೆಗೆ ಮುಂದಾಗಿರುವ ಸಿದ್ದರಾಮಯ್ಯ ಅವರಿಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದಾರೆ.

ಬಿಜೆಪಿ: ಬಿಜೆಪಿಯಲ್ಲಿ 75 ವರ್ಷ ದಾಟಿದವರಿಗೆ ಟಿಕೆಟ್‌ ಅನುಮಾನ ಎಂದು ಹೇಳಲಾಗುತ್ತಿದೆಯಾದರೂ ಅಧಿಕೃತವಾಗಿ ಆ ರೀತಿ ಘೋಷಣೆಯಾಗಿಲ್ಲ. ಇಷ್ಟಾದರೂ ಕೆ.ಎಸ್‌. ಈಶ್ವರಪ್ಪ, ಗೋವಿಂದ ಕಾರಜೋಳ ಸೇರಿದಂತೆ 70 ದಾಟಿರುವ 15 ಮಂದಿಗೆ ಟಿಕೆಟ್‌ ಬಗ್ಗೆ ಆತಂಕ ಇದ್ದೇ ಇದೆ.

ಕಾಂಗ್ರೆಸ್‌ನಲ್ಲಿ ಟಿಕೆಟ್‌ಗೆ ಯಾವುದೇ ವಯಸ್ಸಿನ ಮಿತಿ ಇಲ್ಲದ ಕಾರಣ ಅಲ್ಲಿ 70 ವರ್ಷ ದಾಟಿದವರಿಗೆ ಚಿಂತೆಯಿಲ್ಲ. ಆದರೂ ವಯಸ್ಸಾದವರಿಗೆ ಟಿಕೆಟ್‌ ಕೊಟ್ಟಿದ್ದು ಸಾಕು, ಹೊಸ ಮುಖಗಳಿಗೆ ಅವಕಾಶ ಕೊಡಿ ಎಂಬ ಬೇಡಿಕೆಯೂ ಇದೆ.

ಈ ಬಾರಿ ಸ್ಪರ್ಧೆಗೆ ಹಿಂದೇಟು ಹಾಕುತ್ತಿರುವ ಅಫ‌jಲ್‌ಪುರದ ಎಂ.ವೈ.ಪಾಟೀಲ್‌, ಪಾವಗಡದ ವೆಂಕಟರಮಣಪ್ಪ, ಶಿಡ್ಲಘಟ್ಟದ ವಿ.ಮುನಿಯಪ್ಪ ತಮ್ಮ ಪುತ್ರರಿಗೆ ಟಿಕೆಟ್‌ ಬೇಡಿಕೆ ಇಟ್ಟಿದ್ದಾರೆ. ಇದಕ್ಕೆ ಸ್ಥಳೀಯವಾಗಿ ವಿರೋಧ ಇದೆ. ಹಾಲಿ ಶಾಸಕರು ಸ್ಪರ್ಧೆ ಮಾಡುವುದಿಲ್ಲ ಎಂದು ಘೋಷಣೆಯಾದ ಬೆನ್ನಲ್ಲೇ ಪ್ರತಿ ಕ್ಷೇತ್ರದಲ್ಲಿ ಐದರಿಂದ ಆರು ಆಕಾಂಕ್ಷಿಗಳು ಹುಟ್ಟಿಕೊಂಡು ಟಿಕೆಟ್‌ಗಾಗಿ ಹೈಕಮಾಂಡ್‌ ಮಟ್ಟದಲ್ಲಿ ಕಸರತ್ತು ನಡೆಸುತ್ತಿದಾರೆ.

ಈ ಬೆಳವಣಿಗೆ ಬೆನ್ನಲ್ಲೇ ಮಕ್ಕಳಿಗೆ ಕೊಡದಿದ್ದರೆ ನಮಗೇ ಕೊಡಿ ಎಂದು ವೆಂಕಟರಮಣಪ್ಪ, ಮುನಿಯಪ್ಪ ಬೇಡಿಕೆ ಇಟ್ಟಿದ್ದಾರೆ. ಅಷ್ಟೇ ಅಲ್ಲದೆ ವಿ.ಮುನಿಯಪ್ಪ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಕೋಲಾರದ ಬ್ಯಾಲಹಳ್ಳಿ ಗೋವಿಂದಗೌಡರೇ ಮುಂದಿನ ಅಭ್ಯರ್ಥಿ ಎಂದೂ ಘೋಷಿಸಿದ್ದಾರೆ.

ಜೆಡಿಎಸ್‌ನಲ್ಲಿ 70 ವರ್ಷ ದಾಟದವರಿಗೆ ಟಿಕೆಟ್‌ ಕೊಡದಿರುವ ಪರಿಸ್ಥಿತಿ ಇಲ್ಲ. ಏಕೆಂದರೆ, ಹಾಲಿ ಶಾಸಕರಲ್ಲಿ 70 ವರ್ಷ ದಾಟಿದವರು ಇದ್ದರೂ ಅವರೇ ಅಲ್ಲಿ ಪ್ರಬಲ ಆಕಾಂಕ್ಷಿಗಳು. ಮಂಡ್ಯದ ಹಾಲಿ ಶಾಸಕ ಶ್ರೀನಿವಾಸ್‌ ಅವರಿಗೆ ಟಿಕೆಟ್‌ ಸಿಗುವುದು ಅನುಮಾನ ಎಂದೇ ಹೇಳಲಾಗುತ್ತಿದೆ. ಆದರೆ, ಗುರುಮಿಠRಲ್‌ನ ನಾಗನಗೌಡ ಕಂದಕೂರು ತಮ್ಮ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡುವಂತೆ ಕೋರಿಕೆ ಇಟ್ಟಿದ್ದು ಘೋಷಣೆಯೂ ಆಗಿದೆ.

-ಎಸ್‌.ಲಕ್ಷ್ಮೀನಾರಾಯಣ

ಟಾಪ್ ನ್ಯೂಸ್

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.