Udupi assembly constituency; ಉಡುಪಿ ಜಿಲ್ಲೆಯ ಅಭ್ಯರ್ಥಿಗಳಿಗೆ ಶಾಸಕರೇ ಬೆಂಗಾವಲು
ಶಾಸಕರು ತಾವೇ ಅಭ್ಯರ್ಥಿಗಳು ಎಂಬ ನೆಲೆಯಲ್ಲಿ ಅಧಿಕೃತ ಅಭ್ಯರ್ಥಿಗಳೊಂದಿಗೆ ಜನರ ಬಳಿಗೆ ಹೋಗುತ್ತಿದ್ದಾರೆ
Team Udayavani, Apr 20, 2023, 4:05 PM IST
ಉಡುಪಿ: ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದ ರಾಷ್ಟ್ರೀಯ ಪಕ್ಷದ ಟಿಕೆಟ್ ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಬಹುತೇಕ ಅಭ್ಯರ್ಥಿಗಳು ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ. ಉಳಿದವರು ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ಮಧ್ಯೆ ನಾಲ್ಕು ಕ್ಷೇತ್ರದಲ್ಲಿ ಹಾಲಿ ಶಾಸಕರಿಗೆ ಟಿಕೆಟ್ ನೀಡಿಲ್ಲ. ಆದರೆ, ಮೂವರು ಶಾಸಕರು ತಮ್ಮ ಪಕ್ಷದ ಅಭ್ಯರ್ಥಿಗಳ ಪ್ರಚಾರದಲ್ಲಿ ತಮಗೆ ಸೀಟು ಸಿಕ್ಕಿದಷ್ಟು ಖುಷಿಯಿಂದ ಪ್ರಚಾರ ಪ್ರಕ್ರಿಯೆ ನಡೆಸುತ್ತಿದ್ದಾರೆ. ಇನ್ನೊಬ್ಬರು ಮಾತ್ರ ಸ್ವಲ್ಪ ಅಂತರ ಕಾಯ್ದುಕೊಂಡಿದ್ದಾರೆ.
ಹಾಲಾಡಿ ಶ್ರೀನಿವಾಸ ಶೆಟ್ಟರು ಚುನಾವಣೆ ರಾಜಕೀಯದಿಂದ ಹಿಂದೆ ಸರಿದಿದ್ದರಿಂದ ಅಲ್ಲಿ ಹೊಸ ಮುಖ ಪರಿಚಯಿಸಲಾಗಿದೆ. ಉಡುಪಿ ಮತ್ತು ಕಾಪುವಿನಲ್ಲೂ ಹಾಲಿ ಶಾಸಕರಿಗೆ ಟಿಕೆಟ್ ನೀಡದೇ ಹೊಸಬರಿಗೆ ಅವಕಾಶ ಕಲ್ಪಿಸಲಾಗಿತ್ತು. ಉಡುಪಿ ಹಾಲಿ ಶಾಸಕರು ಟಿಕೆಟ್ ಕೈ ತಪ್ಪುವ ನಿರೀಕ್ಷೆಯಲ್ಲಿ ಇಲ್ಲದೇ ಇದ್ದರಿಂದ ಸ್ವಲ್ಪ ಮಟ್ಟಿನ ಅಸಮಾಧಾನ ಹೊರ ಹಾಕಿದರಾದರೂ ಒಂದೇ ದಿನದಲ್ಲಿ ಸಮಾಧಾನಿತರಾದರು. ಇನ್ನು ಕಾಪು ಶಾಸಕರು ಯಾವುದೇ ಅಸಮಾಧಾನ ಹೊರಹಾಕಿಲ್ಲ ಮತ್ತು ಟಿಕೆಟ್ ಹಂಚಿಕೆಯಾದ ಮಾರನೇ ದಿನವೇ ಪಕ್ಷದ ಅಭ್ಯರ್ಥಿಗೆ ಬೆಂಬಲ ಸೂಚಿಸಿದರು. ಬೈಂದೂರಿನ ಶಾಸಕರ ಮುನಿಸು ಇನ್ನೂ ಬಗೆಹರಿದಿಲ್ಲ. ಬಗೆಹರಿಸುವ ನಿಟ್ಟಿನಲ್ಲಿ ಪಕ್ಷದ ಜಿಲ್ಲಾ, ರಾಜ್ಯಮಟ್ಟದ ವರಿಷ್ಠರು ಮಾತುಕತೆ ನಡೆಸುತ್ತಿದ್ದಾರೆ.
ಹಾಲಾಡಿ ಶ್ರೀನಿವಾಸ ಶೆಟ್ಟರು ಚುನಾವಣೆ ರಾಜಕೀಯದಿಂದ ಹಿಂದೆ ಸರಿದಿದ್ದರೂ ಅವರು ಪಕ್ಷ ಸೂಚಿಸಿರುವ ಅಭ್ಯರ್ಥಿಯೊಂದಿಗೆ ನಿತ್ಯ ಎಂಬಂತೆ ಚುನಾವಣೆ ಪ್ರಚಾರದಲ್ಲಿದ್ದಾರೆ. ಉಡುಪಿ ಶಾಸಕ ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಕೂಡ ತಮ್ಮ ಪಕ್ಷದ ಅಭ್ಯರ್ಥಿಯೊಂದಿಗೆ ಸಂಚಾರ, ಸಭೆ ನಡೆಸುತ್ತಿದ್ದಾರೆ. ಇನ್ನು ಬೈಂದೂರಿನ ಶಾಸಕ ಸುಕುಮಾರ ಶೆಟ್ಟಿಯವರು ಸಾರ್ವಜನಿಕರ ಸಮಾರಂಭಗಳಲ್ಲಿ ಅಥವಾ ಪಕ್ಷದ ಅಭ್ಯರ್ಥಿಯ ಅಧಿಕೃತ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ.
ಎ. 20ರಂದು ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಇರುವುದರಿಂದ ರಾಜ್ಯ, ರಾಷ್ಟ್ರಮಟ್ಟದ ನಾಯಕರು ಬರುವವರಿದ್ದಾರೆ. ಹಾಲಿ ಶಾಸಕರ ನಡೆ ಇನ್ನೂ ಕುತೂಹಲದಿಂದಲೇ ಕೂಡಿದೆ. ಕಾಂಗ್ರೆಸ್ ಉಡುಪಿ ಕ್ಷೇತ್ರದ ಬಂಡಾಯ ಶಮನಕ್ಕೆ ಎಲ್ಲ ಪ್ರಯತ್ನವನ್ನು ಮಾಡುತ್ತಿದೆ. ಕಾರ್ಕಳದಲ್ಲಿ ಪ್ರಚಾರ ಪ್ರಕ್ರಿಯೆ ವೇಗವಾಗಿ ಸಾಗುತ್ತಿದೆ. ಕಾಪು, ಬೈಂದೂರಿನಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಈಗಾಗಲೇ ಶಕ್ತಿ ಪ್ರದರ್ಶನವನ್ನು ಮಾಡಿದ್ದಾರೆ. ಕುಂದಾಪುರದಲ್ಲಿ ಪ್ರಚಾರದ ಸದ್ದು ಜೋರಾಗಿಯೇ ಇದೆ.
ಶಾಸಕರೇ ಸಾರಥಿ
ಹಾಲಿ ಶಾಸಕರಲ್ಲಿ ಮೂವರು ಪಕ್ಷದ ಅಭ್ಯರ್ಥಿಗಳ ಪರ ನಿಂತು ನಿತ್ಯವೂ ಬೆಳಗ್ಗೆಯಿಂದ ಸಂಜೆಯವರೆಗೂ ವಿವಿಧ
ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಸಭೆಯ ಮುಂದಾಳತ್ವ ವಹಿಸುತ್ತಿದ್ದಾರೆ. ತಮ್ಮ ಅವಧಿಯಲ್ಲಿ ಆಗಿರುವ ಅಭಿವೃದ್ಧಿ
ಕಾರ್ಯದ ಜತೆಗೆ ಕೇಂದ್ರ, ರಾಜ್ಯ ಸರಕಾರದ ಸಾಧನೆಯನ್ನು ಸಾರುತ್ತಿದ್ದಾರೆ.
ಶಾಸಕರು ತಾವೇ ಅಭ್ಯರ್ಥಿಗಳು ಎಂಬ ನೆಲೆಯಲ್ಲಿ ಅಧಿಕೃತ ಅಭ್ಯರ್ಥಿಗಳೊಂದಿಗೆ ಜನರ ಬಳಿಗೆ ಹೋಗುತ್ತಿದ್ದಾರೆ. ಒಟ್ಟಿನಲ್ಲಿ
ಅಭ್ಯರ್ಥಿಗಳಿಗೆ ಹಾಲಿ ಶಾಸಕರೇ (ಬೈಂದೂರು ಹೊರತುಪಡಿಸಿ) ಬೆಂಗಾವಲಾಗಿ ನಿಂತಂತೆ ಕಾಣುತ್ತಿದೆ. ಕಾರ್ಕಳದಲ್ಲಿ ಶಾಸಕರೇ (ಸಚಿವರು) ಅಭ್ಯರ್ಥಿ.
*ರಾಜು ಖಾರ್ವಿ ಕೊಡೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
Udupi: ಕಸ್ತೂರಿ ರಂಗನ್ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ
Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್ ಕುಮಾರ್
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ
Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.